Friday, August 28, 2026
Friday, August 28, 2026

ಬೆಂಗಳೂರಿನಲ್ಲಿ ನಡೆಯುವ ಅಂತರ್‌ರಾಷ್ಟ್ರೀಯ ವಾಣಿಜ್ಯ ಮೇಳ–2026

Date:

ಬೆಂಗಳೂರಿನಲ್ಲಿ ನಡೆಯುವ ಅಂತರ್‌ರಾಷ್ಟ್ರೀಯ ವಾಣಿಜ್ಯ ಮೇಳ–2026ರ ಅಂಗವಾಗಿ ಸಿರಿಧಾನ್ಯಗಳ ಉತ್ಪಾದನೆ ಮತ್ತು ಅದರ ಬಳಕೆಯ ಬಗ್ಗೆ ಸಾರ್ವಜನಿಕರಲ್ಲಿ ಹೆಚ್ಚಿನ ಅರಿವು ಮೂಡಿಸುವ ಉದ್ದೇಶದಿಂದ ಶಿವಮೊಗ್ಗದ ಜಿಲ್ಲಾಧಿಕಾರಿಗಳ ಕಛೇರಿ ಆವರಣದಿಂದ ಜಂಟಿ ಕೃಷಿ ನಿರ್ದೇಶಕರ ಕಛೇರಿ, ಹಳೆ ತೀರ್ಥಹಳ್ಳಿ ರಸ್ತೆವರೆಗೆ ಸಿರಿಧಾನ್ಯ ಜಾಥಾವನ್ನು ಹಮ್ಮಿಕೊಳ್ಳಲಾಗಿತ್ತು.

ಈ ಜಾಥಾದಲ್ಲಿ ಜಂಟಿ ಕೃಷಿ ನಿರ್ದೇಶಕ ಡಾ|| ಕಿರಣ್‌ಕುಮಾರ್ ಎಂ., ಸಿರಿಧಾನ್ಯಗಳ ಮಹತ್ವದ ಕುರಿತು ಮಾಹಿತಿ ನೀಡಿದರು. ನಂತರ ಅಪರ ಜಿಲ್ಲಾಧಿಕಾರಿ ಅಭಿಷೇಕ್‌ರವರು ಆರೋಗ್ಯದ ದೃಷ್ಠಿಯಿಂದ ಸಿರಿಧಾನ್ಯಗಳ ಸೇವನೆಯ ಪ್ರಾಮುಖ್ಯತೆ ಕುರಿತು ಮಾತನಾಡಿದರು. ಈ ಜಾಥಾದಲ್ಲಿ ಜಿಲ್ಲೆಯ ಕೃಷಿ ಇಲಾಖೆಯ ಎಲ್ಲಾ ಸಿಬ್ಬಂದಿ ವರ್ಗ, ಕರ್ನಾಟಕ ಪ್ರಾದೇಶಿಕ ಕೃಷಿಕ ಸಮಾಜ, ಬೆಂಗಳೂರು ಇದರ ಆಡಳಿತ ಅಧ್ಯಕ್ಷರಾದ ನಗರದ ಮಹದೇವಪ್ಪನವರು ಜಾಥಾಗೆ ಚಾಲನೆ ನೀಡಿದ್ದು, ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷ ಹೆಚ್.ಎನ್. ನಾಗರಾಜ ಹಾಗೂ ಎಲ್ಲಾ ಸದಸ್ಯರು, ವಿವಿಧ ಇಲಾಖೆಗಳು, ಸಂಘ ಸಂಸ್ಥೆಗಳು, ಶಾಲಾ ಕಾಲೇಜು ವಿದ್ಯಾರ್ಥಿಗಳು ಆರೋಗ್ಯಕ್ಕಾಗಿ ಸಿರಿಧಾನ್ಯಗಳ ಮಹತ್ವವನ್ನು ಸಾರುವ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಕಾ.ತ.ಚಿಕ್ಕಣ್ಣನವರ ‘ಮನಸು ಮುಗಿಲು’

-ಡಾ. ರವಿ ಎಂ. ಸಿದ್ಲಿಪುರ Klive Special Article ಕನ್ನಡ ಸಣ್ಣಕಥಾ ಪರಂಪರೆಯಲ್ಲಿ...

Rotary Club Shimoga ಇಂಟರಾಕ್ಟ್ ಕ್ಲಬ್ ಗಳು ವಿದ್ಯಾರ್ಥಿಗಳಿಗೆ ವ್ಯಕ್ತಿತ್ವ ವಿಕಸನಕ್ಕೆ ಅತ್ಯುತ್ತಮ ವೇದಿಕೆ: ಸುಮತಿ ಜಿ.ಕುಮಾರಸ್ವಾಮಿ

Rotary Club Shimoga ಇಂಟರಾಕ್ಟ್ ಕ್ಲಬ್‌ಗಳು ವಿದ್ಯಾರ್ಥಿಗಳಿಗೆ ಶಾಲಾ ಹಂತದಲ್ಲಿಯೇ ಸಾರ್ವಜನಿಕ...

S.N. Channabasappa “ಮನರಂಜನೆ” ಮನುಷ್ಯ ಜೀವನದ ಭಾಗ.ಆ ಸಾಂಸ್ಕೃತಿಕ ಸೊಬಗು ಜೀವನದಲ್ಲಿ ಅಡಕವಾಗಿರಬೇಕು- ಎಸ್.ಎನ್.ಚನ್ನಬಸಪ್ಪ

S.N. Channabasappa ಮಾರ್ನಾಮಿಬೈಲು ಎನ್ನುವುದು ಒಂದು ಇತಿಹಾಸ ಪ್ರಸಿದ್ದತೆ ಪಡೆದಿದೆ, ನಗರದ...