Thursday, June 18, 2026
Thursday, June 18, 2026

ಸೊರಬದಲ್ಲಿ ರಾಜ್ಯ ಮಟ್ಟದ ಹೋರಿ ಬೆದರಿಸುವ ಹಬ್ಬ

Date:

ಮಲೆನಾಡು ಭಾಗದ ರೈತರ ಹಬ್ಬವಾಗಿರುವ ಜನಪದ ಕ್ರೀಡೆ, ಸಾಂಪ್ರದಾಯಿಕ ರಾಜ್ಯ ಮಟ್ಟದ ಹೋರಿ ಬೆದರಿಸುವ ಹಬ್ಬ ಪಟ್ಟಣದ ಹೊರವಲಯದ ಹಳೇಸೊರಬ ಗ್ರಾಮದಲ್ಲಿ ಜರುಗಿತು.

ಗ್ರಾಮೀಣ ಪ್ರದೇಶಗಳಲ್ಲಿ ಹೋರಿ ಬೆದರಿಸುವ ಹಬ್ಬ ಮಹತ್ವವನ್ನು ಪಡೆದಿದ್ದು, ಅಖಾಡದಲ್ಲಿ ಹೋರಿಗಳು ಓಡಿ ಹೋಗುವುದನ್ನು ನೋಡಲು ತಾಲೂಕಿನ ವಿವಿಧ ಗ್ರಾಮಗಳು ಸೇರಿದಂತೆ ನೆರೆಯ ತಾಲೂಕು, ಜಿಲ್ಲೆಗಳಿಂದ ಭಾರಿ ಸಂಖ್ಯೆಯಲ್ಲಿ ಹೋರಿ ಪ್ರೀಯರು ಆಗಮಿಸಿದ್ದರು. ಅಖಾಡದಲ್ಲಿ ಪೈಲ್ವಾನರ ಕೈಗೆ ಸಿಗದಂತೆ ಹೋರಿಗಳು ಓಡಿ ಹೋಗುವ ದೃಶ್ಯ ನೋಡುಗರ ಮೈನವಿರೇಳಿಸಿತು.

ಹೋರಿಗಳ ಮಾಲೀಕರು ಹೋರಿಗಳಿಗೆ ವಿವಿಧ ಬಗೆಯ ಜೂಲಗಳನ್ನು ಹೊದಿಸಿ, ಬಣ್ಣ ಬಣ್ಣದ ಬಲೂನುಗಳು ಹಾಗೂ ಕೊಬ್ಬರಿ ಕಟ್ಟಿ ಶೃಂಗರಿಸಿದ್ದರು. ಅಖಾಡದಲ್ಲಿ ಪ್ರೀತಿಗಾಗಿ ಹಳೇಸೊರಬದ ಹುಚ್ಚ ರಾಕ್ ಸ್ಟಾರ್, ಎನ್.ಟಿ.ಸಿ. ಸಾಹುಕಾರ, ಕರ್ಜಿಗಿ ಜೂನಿಯರ್ ಪವರ್, ಮಾವಲಿ ಸುರಂಗ, ಮುಗಳಿಕೊಪ್ಪದ ಅಂಜನಾದ್ರಿ, ಕುಪಗಡ್ಡೆ ಬುಲೆಟ್, ಸಾರೆಕೊಪ್ಪ ಕಿಂಗ್, ಹರೂರು ಘಟಸರ್ಪ, ಆರ್.ಸಿ.ಬಿ. ಕಿಂಗ್ , ಕಣ್ಣೂರ್ ವಿಧೂರ, ಜಡೆ ಕೇಪೇಗೌಡ, ಗುಡಗಿನಕೊಪ್ಪ ಶ್ರೀ ಕೃಷ್ಣ, ಶಾಂತಗೇರಿ ಪೈಲ್ವಾನ್, ಸಿಗಂಧೂರ್ ಎಕ್ಸ್‌ಪ್ರೆಸ್‌, ಸೊರಬದ ರಾವಣ, ಮಲೆನಾಡು ಮಹಾರಾಜ, ಶಿರಾಳಕೊಪ್ಪ ಎಚ್.ಎಫ್. ಡಾನ್, ಅಂಬಿಗಾರ ಡಾನ್ ಸೇರಿದಂತೆ ವಿವಿಧ ಹೆಸರಿನ ಹೋರಿಗಳು ಓಡಿದವು.

ಯುವಕರು ಹೋರಿಗಳನ್ನು ಹಿಡಿದು ಬಲ ಪ್ರದರ್ಶಿಸಿದರೆ, ಜನತೆ ಅದನ್ನು ನೋಡಿ ರೋಮಾಂಚನಗೊಂಡರು. ಅಖಾಡದಲ್ಲಿ ತೇರಿನಂತೆ ಕಾಣುವ ಪೀಪಿ ಹೋರಿಗಳು ಓಡಿ ಬರುತ್ತಿದ್ದಂತೆ ನೆರೆದವರಿಂದ ಕೇಕೆ, ಶಿಳ್ಳೆ, ಚಪ್ಪಾಳೆಗಳು ಜೋರಾಗಿಯೇ ಕೇಳಿಬಂದಿತು.

ಹಳೇಸೊರಬದ ಶ್ರೀ ರಾಮೇಶ್ವರ ಯುವಕ ಸಂಘದವರು ಅಖಾಡದಲ್ಲಿ ಸುರಕ್ಷತೆಗೆ ಹೆಚ್ಚಿನ ಗಮನ ನೀಡಿದ್ದರು. ಅಖಾಡದಲ್ಲಿ ಎರಡು ಬದಿಯಲ್ಲಿ ಸುರಕ್ಷತಾ ಕ್ರಮ ಕೈಗೊಂಡು, ಕ್ರಮವಾಗಿ ಒಂದೊಂದೆ ಹೋರಿಗಳನ್ನು ಓಡಿಸಿದರು. ಇದರಿಂದ ಯಾವುದೇ ಅಪಾಯಗಳು ಸಂಭವಿಸಲಿಲ್ಲ. ಆಯೋಜಕರು ಉತ್ತಮ ರೀತಿಯಲ್ಲಿ ಸುರಕ್ಷತೆಗೆ ಗಮನ ನೀಡಿದ್ದರು. ಇದು ಸಾರ್ವಜನಿಕರ ಪ್ರಶಂಸೆಗೆ ಪಾತ್ರವಾಯಿತು. ಅಖಾಡದಲ್ಲಿ ಉತ್ತಮವಾಗಿ ಓಡಿದ ಹೋರಿಗಳು ಹಾಗೂ ಬಲ ಪ್ರದರ್ಶನ ತೋರಿದ ಯುವಕರನ್ನು ಗುರುತಿಸಲಾಯಿತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...