Thursday, March 19, 2026
Thursday, March 19, 2026

ಅಡಿಕೆ ಸಮೃದ್ಧಿಗಾಗಿ ಕಾಳು ಮೆಣಸಿನ ಅಂತರ ಬೆಳೆ : ರಾಷ್ಟ್ರೀಯ ವಿಚಾರ ಸಂಕಿರಣ

Date:

ಕಾಳು ಮೆಣಸು ಸೇರಿದಂತೆ ಯಾವುದೇ ಸಂಬಾರು ಉತ್ಪನ್ನಗಳ ಸಂಸ್ಕರಣೆ ಮತ್ತು ಮೌಲ್ಯವರ್ಧನೆ ಮಾಡಿದಾಗ ಆರ್ಥಿಕತೆ ಬೆಳೆಯಲು ಸಾಧ್ಯವಾಗುತ್ತದೆ. ಆದ್ದರಿಂದ ರೈತರು ಮೌಲ್ಯವರ್ಧನೆಗೆ ಹೆಚ್ಚಿನ ಒತ್ತು ನೀಡಬೇಕೆಂದು ಕರ್ನಾಟಕ ರಾಜ್ಯ ಕೃಷಿ ಉತ್ಪನ್ನ ಸಂಸ್ಕರಣೆ ಮತ್ತು ರಫ್ತು ನಿಗಮ ಲಿಮಿಟೆಡ್ ನ ವ್ಯವಸ್ಥಾಪಕ ನಿರ್ದೇಶಕರಾದ ಸಿ.ಎನ್ ಶಿವಪ್ರಕಾಶ್ ಮನವಿ ಮಾಡಿದರು.
ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕಾ ವಿಜ್ಞಾನಗಳ ವಿಶ್ವವಿದ್ಯಾಲಯ, ಅಡಿಕೆ ಸಂಶೋಧನಾ ಕೇಂದ್ರ, ನವಿಲೆ, ಶಿವಮೊಗ್ಗ, ಅಡಿಕೆ ಮತ್ತು ಸಾಂಬಾರ ಪದಾರ್ಥಗಳ ಅಭಿವೃದ್ಧಿ ನಿರ್ದೇಶನಾಲಯ, ಕೋಜಿಕೋಡ್, ಐ.ಸಿ.ಎ.ಆರ್. – ಭಾರತೀಯ ಸಾಂಬಾರು ಬೆಳೆ ಸಂಶೋಧನಾ ಸಂಸ್ಥೆ, ಕೋಜಿಕೋಡ್, ಐ.ಸಿ.ಎ.ಆರ್. – ಅಖಿಲ ಭಾರತ ಸಂಯೋಜಿತ ಸಂಶೋಧನಾ ಯೋಜನೆ (ಸಾಂಬಾರು ಬೆಳೆ), ಕರ್ನಾಟಕ ರಾಜ್ಯ ಕೃಷಿ ಉತ್ಪನ್ನ ಸಂಸ್ಕರಣೆ ಮತ್ತು ರಫ್ತು ನಿಗಮ ಲಿಮಿಟೆಡ್, ಬೆಂಗಳೂರು, ಮಲ್ನಾಡ್ ಅಡಿಕೆ ಕೋ-ಆಪರೇಟಿವ್ ಮಾರ್ಕೆಟಿಂಗ್ ಸೊಸೈಟಿ ಲಿಮಿಟೆಡ್, ಶಿವಮೊಗ್ಗ, ತೋಟ ಉತ್ಪನ್ನಗಳ ಮಾರಾಟ ಸಹಕಾರ ಸಂಘ ನಿಯಮಿತ, ಚನ್ನಗಿರಿ ಮತ್ತು ಇಂಡಿಯನ್ ಸೊಸೈಟಿ ಆಫ್ ಸ್ಪೈಸಸ್, ಕೋಜಿಕೋಡ್‌ರವರ ಸಹಯೋಗದೊಂದಿಗೆ ಜ. 28 ಮತ್ತು 29 ರಂದು “ಅಡಿಕೆ ಸಮೃದ್ಧಿಗಾಗಿ ಕಾಳು ಮೆಣಸಿನ ಅಂತರ ಬೆಳೆ” ಎಂಬ ವಿಷಯದ ಬಗ್ಗೆ ನವುಲೆಯ ಕೃಷಿ ಕಾಲೇಜಿನಲ್ಲಿ ಏರ್ಪಡಿಸಲಾಗಿರುವ ಎರಡು ದಿನಗಳ ರಾಷ್ಟ್ರೀಯ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಮಾತನಾಡಿದರು.
ಜಿಡಿಪಿ ಗೆ ಮುಖ್ಯ ಕೊಡುಗೆ ಕೃಷಿ ಕ್ಷೇತ್ರದ್ದಾಗಿದ್ದು, ಕೃಷಿ ಉತ್ಪನ್ನಗಳ ಸಂಸ್ಕರಣೆ, ಪ್ಯಾಕಿಂಗ್, ಬ್ರಾಂಡಿಂಗ್ ಗೆ ಹೆಚ್ಚಿನ ಒತ್ತು ನೀಡಬೇಕು. ಮೌಲ್ಯವರ್ಧನೆ ಮಾಡುವುದು ಅತಿ ಮುಖ್ಯವಾಗಿದ್ದು, ಇದರಿಂದ ಆರ್ಥಿಕತೆ ಬೆಳೆಯಲು ಸಾಧ್ಯವಾಗುತ್ತದೆ. ಆದ್ದರಿಂದ ರೈತರು ಇದಕ್ಕೆ ಹೆಚ್ಚಿನ ಒತ್ತು ನೀಡಬೇಕೆಂದು ಹೇಳಿದರು.
ಗೋವಾ ಯಿಂದ ಕನ್ಯಾಕುಮಾರಿವರೆಗೆ ಕಾಳು ಮೆಣಸನ್ನು ಪ್ಲಾಂಟೇಷನ್ ಬೆಳೆಯಾಗಿ ಬೆಳೆಯಲಾಗುತ್ತಿದೆ. ಅಡಿಕೆ ಮತ್ತು ಸಿಲ್ವರ್ ಓಕ್ ಮರಗಳಿಗೆ ಕಾಳು ಮೆಣಸ ಬಳ್ಳಿಯನ್ನು ಹಬ್ಬಿಸಬೇಕು.
ಊರು-ಕೇರಿಗಳಲ್ಲಿ ನೂರಾರು ತಳಿಗಳನ್ನು ಬೆಳೆದು ರೈತರು ಪ್ರಸಿದ್ದಪಡಿಸಿದ್ದಾರೆ. ಈ ತಳಿಗಳಿಗೆ ಟ್ಯಾಗ್‌ಲೈನ್ ನೀಡಿ, ಬ್ರಾö್ಯಂಡಿAಗ್ ಮಾಡಿ ಮಾರಾಟ ಮಾಡಿದರೆ ಉತ್ತಮ ಆದಾಯ ಪಡೆಯಲು ಸಾಧ್ಯವಾಗುತ್ತದೆ. ಕಾಳು ಮೆಣಸಿನ ಪ್ರತಿ ತಳಿಗಳೂ ವಿಶೇಷವಾಗಿದ್ದು, ತಳಿಗಳ ಉತ್ಪಾದನೆಯನ್ನು ಹೆಚ್ಚಿಸುವುದು, ಸಾವಯವವಾಗಿ ಬೆಳೆಯುವುದು ಮತ್ತು ಮಾರುಕಟ್ಟೆ, ರಫ್ತು ಇತರೆ ವಿಷಯಗಳ ಕುರಿತು ಕಾರ್ಯಾಗಾರದಲ್ಲಿ ಚರ್ಚಿಸಲಾಗುವುದು.
ಪ್ರಧಾನ ಮಂತ್ರಿ ಕೃಷಿಕ ಯೋಜನೆಯಡಿ ರೈತರಿಗೆ ಶೇ.50 ಸಬ್ಸಿಡಿ ಯೊಂದಿಗೆ ರೂ. 30 ಲಕ್ಷ ಸಾಲ ನೀಡಲಾಗುವುದು. ಹಾಗೂ ಜಿಲ್ಲಾ ಸಂಪನ್ಮೂಲ ವ್ಯಕ್ತಿಗಳಿಂದ ಮಾಹಿತಿ, ಪ್ರಾಜೆಕ್ಟ್ ವರದಿ ಸಿದ್ದಪಡಿಸಲು ಮತ್ತು ಸಾಲ ಕೊಡಿಸುವಲ್ಲಿ ಸಹಾಯ ನೀಡಲಾಗುವುದು ಎಂದರು.
ರೂ.2.10 ಕೋಟಿ ವೆಚ್ಚದಲ್ಲಿ ಮೂಡಿಗೆರೆಯಲ್ಲಿ ಸಂಸ್ಕರಣಾ ಘಟಕವನ್ನು ಸ್ಥಾಪಿಸಿದ್ದು ಇಲ್ಲಿ ಕಾಳು ಮೆಣಸು ಬೆಳೆಗಾರರು ಉಚಿತವಾಗಿ ಸಂಸ್ಕರಣೆ ಮಾಡಿಕೊಳ್ಳಬಹುದು. ಹಾಗೂ ಕೆಪಿಕ್ ವತಿಯಿಂದ ರೈತರಿಗೆ, ಬೆಳೆಗಾರರಿಗೆ ಸಹಕಾರ ನೀಡಲಾಗುವುದು ಎಂದು ತಿಳಿಸಿದರು.
ಐಸಿಎಆರ್-ಐಐಎಸ್‌ಆರ್ ಕೊಝಿಕೊಡ್ ನಿರ್ದೇಶಕರಾದ ಆರ್. ದಿನೇಶ್ ಮಾತನಾಡಿ, ಕಾಳುಮೆಣಸು ಹಲವಾರು ರೈತರ ಜೀವನೋಪಾಯವಾಗಿದ್ದು, ಶೇ.15 ರಷ್ಟು ಮಾತ್ರ ರಫ್ತು ಮಾಡಲಾಗುತ್ತಿದೆ. ರಫ್ತಿನ ಪ್ರಮಾಣ ಇನ್ನೂ ಹೆಚ್ಚುವ ನಿಟ್ಟಿನಲ್ಲಿ ಬೆಳೆಯನ್ನು ಉತ್ತೇಜನಗೊಳಿಸಬೇಕಿದೆ.
ನಮ್ಮಲ್ಲಿ ಉತ್ತಮ ಗುಣಮಟ್ಟದ ಹಲವಾರು ತಳಿಗಳಿದ್ದು, ವಾಣಿಜ್ಯ ಬೆಳೆಯಾಗಿ ಬೆಳೆಯಲು ರೈತರಿಗೆ ಪರವಾನಗಿ ನೀಡಲಾಗಿದೆ. ತಳಿಗಳನ್ನು ಅಭಿವೃದ್ದಿ ಪಡಿಸಲಾಗುತ್ತಿದ್ದು, ಉತ್ಪಾದನೆ ಹೆಚ್ಚಿಸುವ ಕುರಿತು ರೈತರಿಗೆ ರಚನಾತ್ಮಕ ಸಲಹೆಗಳನ್ನು ನೀಡಲಾಗುತ್ತಿದೆ ಎಂದು ತಿಳಿಸಿದರು.
ಐಸಿಎಆರ್-ಐಐಎಸ್‌ಆರ್ ನಿರ್ದೇಶಕ(ಕೊಝಿಕೊಡ್) ಡಾ. ಬಾಲಚಂದ್ರ ಹೆಬ್ಬಾರ್ ಮಾತನಾಡಿ , ಇಡೀ ವಿಶ್ವ ಉತ್ತಮ ಆದಾಯ ನೀಡುವ ಬೆಳೆ ಕಾಳು ಮೆಣಸು ಎಂದು ನಂಬಿದೆ. ಶಿವಮೊಗ್ಗ ಅಡಿಕೆ ಬೆಳೆಯನ್ನು ಹೆಚ್ಚಾಗಿ ಬೆಳೆಯುವ ಜಿಲ್ಲೆಯಾಗಿದ್ದು, ಅಡಿಕೆ ಜೊತೆ ಅಂತರ ಬೆಳೆಯಾಗಿ ಕಾಳುಮೆಣಸನ್ನು ಬೆಳೆದರೆ ಉತ್ತಮ ಆದಾಯ ಪಡೆಯಲು ಸಾಧ್ಯವಾಗುತ್ತದೆ. ಈ ಬೆಳೆ ಹವಾಮಾನ ಸೂಕ್ಷö್ಮತೆಯನ್ನು ಉತ್ತಮವಾಗಿ ನಿರ್ವಹಿಸಲು ಸಹಕಾರಿಯಾಗಿದೆ. ನೋಡಲು ಸಹ ಚೆನ್ನಾಗಿ ಕಾಣುವ ಈ ಬೆಳೆ ಅಡಿಕೆಯೊಂದಿಗೆ ಬೆಳೆಯಲು ಅತ್ಯುತ್ತಮ ಬೆಳೆಯಾಗಿದೆ ಎಂದರು.
ಎಐಸಿಆರ್‌ಪಿ, ಐಸಿಎಆರ್-ಐಎಎಸ್‌ಆರ್ ನ ಪ್ರಾಜೆಕ್ಟ್ ಕೋಆರ್ಡಿನೇಟರ್ ಡಾ. ಪ್ರಸಾತ್ ಮಾತನಾಡಿ, ಶೇ.50 ರಷ್ಟು ಅಡಿಕೆ ಬೆಳೆಯಲ್ಲಿ ಕಾಳು ಮೆಣಸನ್ನು ಬೆಳೆದರೂ ದೇಶೀಯವಾಗಿ ಅಗತ್ಯವಿರುವ ಕಾಳು ಮೆಣಸಿನ ಬೇಡಿಕೆಯನ್ನು ಪೂರೈಸಬಹುದು. ಜೊತೆಗೆ ಆಮದನ್ನು ಕಡಿತಗೊಳಿಸಬಹುದಾಗಿದ್ದು, ಮುಂದಿನ ದಿನಗಳಲ್ಲಿ ಆಮದು ಪ್ರಮಾಣ ಕಡಿಮೆ ಮಾಡುವ ಗುರಿ ಹೊಂದಲಾಗಿದೆ. ಜೈವಿಕವಾಗಿ ಉತ್ಪನ್ನಗಳನ್ನು ಬೆಳೆಯುವ ಕಡೆ ಹೆಚ್ಚಿನ ಒತ್ತು ನೀಡಬೇಕಿದ್ದು, ಕೃಷಿ ಉತ್ಪನ್ನ ಸಂಘಗಳ(ಎಫ್‌ಪಿಓ) ಗಳ ಸಬಲೀಕರಣಕ್ಕೆ ಶ್ರಮಿಸಬೇಕಿದೆ ಎಂದರು.
ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕಾ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿಗಳಾದ ಡಾ. ಆರ್.ಸಿ ಜಗದೀಶ್ ಮಾತನಾಡಿ, ಮೂಡಿಗೆರೆಯಲ್ಲಿ ಕಾಳುಮೆಣಸು ಸಂಸ್ಕರಣಾ ಘಟಕವನ್ನು ಸ್ಥಾಪಿಸಿದ್ದು ಕಾಳುಮೆಣಸು ಬೆಳೆಗಾರರು ಉಚಿತವಾಗಿ ಇದರ ಸದ್ಬಳಕೆ ಮಾಡಕೊಳ್ಳಬೇಕು. ಅಡಿಕೆ, ಕಾಫಿ ಬೆಳೆಯೊಂದಿಗೆ ಕಾಳು ಮೆಣಸನ್ನು ಉತ್ತಮವಾಗಿ ಬೆಳೆಯಬಹುದಾಗಿದ್ದು ರೈತರು ಮೌಲ್ಯವರ್ಧನೆಗೆ ಹೆಚ್ಚಿನ ಮಾನ್ಯತೆ ನೀಡಬೇಕು.ರೈತರು ಕಾಳುಮೆಣಸು ಬೆಳೆಯಲ್ಲಿ ಹಲವಾರು ಪ್ರಯೋಗಗಳನ್ನು ಮಾಡಿದ್ದಾರೆ. ಯಶಸ್ವಿಯಾಗಿದ್ದಾರೆ. ಸರ್ಕಾರ ಮತ್ತು ಕೆಪೆಕ್ ಸಹಕಾರ ಸಹ ಇದ್ದು ಇದರ ಸದ್ಬಳಕೆ ಮಾಡಿಕೊಳ್ಳಬೇಕೆಂದರು.
ಈ ಕಾರ್ಯಕ್ರಮಕ್ಕೆ ಭಾರತದ ಬೇರೆ ಬೇರೆ ರಾಜ್ಯಗಳಿಂದ 500ಕ್ಕೂ ಹೆಚ್ಚು ಅಧಿಕಾರಿಗಳು, ವಿಜ್ಞಾನಿಗಳು, ರೈತರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.
30ಕ್ಕೂ ಹೆಚ್ಚು ಕಾಳುಮಣಸಿನ ತಳಿಗಳ ಪ್ರದರ್ಶನ ಹಾಗೂ 20ಕ್ಕೂ ಹೆಚ್ಚು ಮೌಲ್ಯವರ್ಧಿತ ಉತ್ಪನ್ನಗಳ ಪ್ರದರ್ಶನವನ್ನು ಏರ್ಪಡಿಸಲಾಗಿತ್ತು.
ಕಾರ್ಯಕ್ರಮದಲ್ಲಿ ವಿಚಾರ ಸಂಕಿರಣದಲ್ಲಿ ಮಂಡಿಸಿದ ‘ವಿಷಯದ ಪುಸ್ತಕ’, ‘ಅಡಿಕೆಯಲ್ಲಿ ಅಂತರ ಬೆಳೆಯಾಗಿ ಕಾಳುಮೆಣಸು’ ಎಂಬ ಪುಸ್ತಕವನ್ನು ಬಿಡುಗಡೆಗೊಳಿಸಲಾಯಿತು ಹಾಗೂ ಸಸ್ಯ ತಳಿ ಸಂರಕ್ಷಣೆ ಹಾಗೂ ರೈತರ ಹಕ್ಕುಗಳ ಪ್ರಾಧಿಕಾರದಲ್ಲಿ ನೋಂದಾಯಿಸಿದ ನಾಲ್ಕು ಕಾಳುಮೆಣಸಿನ ತಳಿಗಳ ನೋಂದಣಿ ಪ್ರಮಾಣಪತ್ರವನ್ನು ರೈತರಿಗೆ ನೀಡಲಾಯಿತು.
ಕಾರ್ಯಕ್ರಮದಲ್ಲಿ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಆಡಳಿತ ಮಂಡಳಿ ಸದಸ್ಯರಾದ ದೇವಿಕುಮಾರ್, ಶಶಾಂಕ್, ವಿವಿ ಶಿಕ್ಷಣ ನಿರ್ದೇಶಕರಾದ ಬಿ.ಹೇಮ್ಲಾನಾಯ್ಕ, ದುಷ್ಯಂತ ಕುಮಾರ್, ಕೃಷಿ ಕಾಲೇಜಿನ ಡೀನ್ ಡಾ.ತಿಪ್ಪೇಶ್, ಡೀನ್ ಡಾ.ವಿ.ಶ್ರೀನಿವಾಸ್ ಡಾ.ಪ್ರದೀಪ್, ಡಾ.ನಾಗರಾಜಪ್ಪ ಅಡಿವಪ್ಪರ್ ಮುಂತಾದ ಅಧಿಕಾರಿಗಳು, ವಿಜ್ಞಾನಿಗಳು, ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...