Monday, February 2, 2026
Monday, February 2, 2026

Ishwar B Khandre ಅರಣ್ಯ ಸಂರಕ್ಷಣೆ-ಜನರ ಜೀವನೋಪಾಯದ ನಿಟ್ಟಿನಲ್ಲಿ ಸರ್ಕಾರದ ನಿರ್ಧಾರ : ಈಶ್ವರ್ ಬಿ ಖಂಡ್ರೆ

Date:

Ishwar B Khandre ವನ್ಯಜೀವಿ ಸಂರಕ್ಷಣೆ, ಅರಣ್ಯ ಸಂಪತ್ತು ರಕ್ಷಣೆ ಮತ್ತು ಜನರ ಅಭಿವೃದ್ದಿಯ ನಿಟ್ಟಿನಲ್ಲಿ ರಾಜ್ಯ ಸರ್ಕಾರ ತನ್ನ ತೀರ್ಮಾನಗಳನ್ನು ಕೈಗೊಳ್ಳುತ್ತಿದ್ದು ಶೆಟ್ಟಿಹಳ್ಳಿ ಅಭಯಾರಣ್ಯ ಡಿನೋಟಿಫಿಕೇಷನ್ ಮತ್ತು ಶರಾವತಿ ಸಂತ್ರಸ್ತರಿಗೆ ಪರಿಹಾರ ಕುರಿತಾದ ತೀರ್ಮಾನಗಳು ಅಂತಿಮ ಘಟ್ಟ ತಲುಪಿವೆ ಎಂದು ಅರಣ್ಯ ಜೀವಶಾಸ್ತ್ರ ಮತ್ತು ಪರಿಸರ ಸಚಿವರಾದ ಈಶ್ವರ್ ಬಿ ಖಂಡ್ರೆ ತಿಳಿಸಿದರು.
ಬುಧವಾರ ತ್ಯಾವರೆಕೊಪ್ಪದ ಸಿಂಹಧಾಮದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಶೆಟ್ಟಿಹಳ್ಳಿ ವನ್ಯಜೀವಿ ಧಾಮ ಡಿ-ನೋಟಿಫಿಕೇಷನ್ ಪ್ರಸ್ತಾವನೆಯು ಸುಮಾರು 2016 ರಿಂದ ಬಾಕಿ ಇದ್ದು ಈಗ ಅಂತಿಮ ಘಟ್ಟಕ್ಕೆ ಬಂದಿದೆ. ಹಿಂದೆ 1974 ರಲ್ಲಿ ನೋಟಿಫಿಕೇಷನ್ ಮಾಡಿದ ಸಂದರ್ಭದಲ್ಲಿ 395 ಚ.ಕೀ ಪ್ರದೇಶ ಸೇರ್ಪಡೆ ಮಾಡಿದ್ದರು. ಆದರೆ ಅದರಲ್ಲಿ ಬಸ್ ಸ್ಟಾö್ಯಂಡ್, ಎಫ್‌ಸಿಐ ಗೋಡಾನ್, ಎಪಿಎಂಸಿ, ಸರ್ಕಾರಿ ಕಚೇರಿಗಳು, ಜನವಸತಿ ಪ್ರದೇಶ ಸೇರ್ಪಡೆಗೊಂಡಿದ್ದು ಇದೆಲ್ಲವನ್ನೂ ಪರಿಶೀಲನೆ ಮಾಡಿ, ಅಧಿಕಾರಿಗಳು ಸಮೀಕ್ಷೆಗಳನ್ನು ಮಾಡಿದ್ದಾರೆ. ಈ ಕುರಿತು ಹಲವಾರು ಸಭೆಗಳನ್ನು ಮಾಡಲಾಗಿದೆ. ಅರಣ್ಯ ಸಂಪತ್ತು ಸಂರಕ್ಷಣೆ ಮಾಡಬೇಕು. ಜೀವನ ಮತ್ತು ಜೀವನೋಪಾಯ ಎರಡೂ ಬೇಕಾಗಿದ್ದು ಆಡಳಿತಾತ್ಮಕವಾಗಿ, ಭಾವನಾತ್ಮಕವಾಗಿ ತೀರ್ಮಾನ ತೆಗೆದುಕೊಳ್ಳಲು ಖುದ್ದಾಗಿ ಪರಿಶೀಲಿಸಲು ಬಂದಿದ್ದೇನೆ. ನಂತರ ಸಭೆ ಮಾಡಿ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುವುದು.
ಶರಾವತಿ ಸಂತ್ರಸ್ತರ ಸಮಸ್ಯೆಗಳಿಗೆ ಪರಿಹಾರೋಪಾಯ ಅಂತಿಮ ಘಟ್ಟ ತಲುಪಿದೆ. ಸರ್ವೋಚ್ಚ ನ್ಯಾಯಾಲಯಕ್ಕೆ ಅಪೀಲು ಸಲ್ಲಿಸಲಾಗಿದ್ದು ನ್ಯಾಯಾಲಯವು, ಕೇಂದ್ರ ಸರ್ಕಾರ ಮತ್ತು ಅರಣ್ಯ ಇಲಾಖೆ ಸೇರಿ ತೀರ್ಮಾನ ಮಾಡಲು ಸೂಚಿಸಿದೆ. ಹಾಗೂ ಕಂದಾಯ ಇಲಾಖೆಯು ಅರ್ಹ ಫಲಾನುಭವಿಗಳನ್ನು ಗುರಿತಿಸುತ್ತಿದ್ದು, ಅರಣ್ಯ ಇಲಾಖೆ ನಿರಂತರವಾಗಿ ಕಂದಾಯ ಇಲಾಖೆಯ ಸಂಪರ್ಕದಲ್ಲಿದೆ. ಕಂದಾಯ ಇಲಾಖೆ ಅಂತಿಮಗೊಳಿಸಿದ ಪಟ್ಟಿ ಬಂದ ತಕ್ಷಣ ಸುಮಾರು 60 ವರ್ಷಗಳ ನಂತರ ಸಂತ್ರಸ್ತರಿಗೆ ರಾಜ್ಯ ಸರ್ಕಾರ ಶಾಶ್ವತವಾಗಿ ಪರಿಹಾರ ನೀಡುತ್ತಿದೆ ಎಂದರು.
Ishwar B Khandre ವನ್ಯಜೀವಿ ಸಂರಕ್ಷಣೆ ಆಗಬೇಕು, ಅರಣ್ಯ ಸಂಪತ್ತು ಉಳಿಯಬೇಕು ಹಾಗೂ ಅಭಿವೃದ್ದಿಯೂ ಆಗಬೇಕು ಈ ನಿಟ್ಟಿನಲ್ಲಿ ಸರ್ಕಾರ ತೀರ್ಮಾನಗಳನ್ನು ತೆಗೆದುಕೊಳ್ಳತ್ತಿದೆ. ಮಾನವ-ವನ್ಯಜೀವಿ ಸಂಘರ್ಷವನ್ನು ತಡೆಯಲು ಸರ್ಕಾರ ಹಲವಾರು ಕ್ರಮ ಕೈಗೊಂಡಿದೆ. ಆನೆ ಕಾರ್ಯಪೆಡೆ, ಚಿರತೆ ಕಾರ್ಯಪಡೆ, ಹೆಚ್ಚುವರಿ ಸಿಬ್ಬಂದಿ ನೇಮಕ, ಸಲಕರಣೆಗಳು, ಕ್ಯಾಂಪ್‌ಗಳು, ರೈಲ್ವೇ ಬ್ಯಾರಿಕೇಡ್, ಸೋಲಾರ್ ಫೆನ್ಸಿಂಗ್ ರಚನೆ, ಕಮಾಂಡ್ ಸೆಂಟರ್ ಗಳು, ಇಂಟಿಗ್ರೇಟೆಡ್ ಕಮಾಂಡ್ ಸೆಂಟರ್‌ಗಳು ಜೊತೆಗೆ ಜಾಗೃತಿಯನ್ನು ಮೂಡಿಸಲಾಗುತ್ತಿದೆ. ಈ ಎಲ್ಲ ರೀತಿಯ ಕ್ರಮ ಕೈಗೊಳ್ಳಲಾಗುತ್ತಿದ್ದು ಒಂದೇ ಒಂದು ಜೀವ ಕಳೆದುಕೊಳ್ಳದ ರೀತಿ ಮಾನವ ಪ್ರಾಣ ಮತ್ತು ವನ್ಯಜೀವಿಗಳು ಉಳಿಯಬೇಕೆಂಬ ದೃಷ್ಟಿಯಲ್ಲಿ ಕ್ರಮ ವಹಿಸಲಾಗುತ್ತಿದೆ ಎಂದು ತಿಳಿಸಿದರು.
ಈ ವೇಳೆ ಶಿವಮೊಗ್ಗ ಗ್ರಾಮಾಂತರ ಶಾಸಕರಾದ ಶಾರದಾ ಪರ‍್ಯಾನಾಯ್ಕ, ಜನಪ್ರತಿನಿಧಿಗಳು, ಅಧಿಕಾರಿಗಳು ಇದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...