Sunday, February 1, 2026
Sunday, February 1, 2026

ಕೃಷಿ ಸಿಂಚಾಯಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

Date:

2025-26ನೇ ಸಾಲಿನ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಪ್ರತಿ ಹನಿಗೆ ಅಧಿಕ ಬೆಳೆ ಕಾರ್ಯಕ್ರಮದಲ್ಲಿ ತೋಟಗಾರಿಕೆ ಬೆಳೆಗಳಲ್ಲಿ ನೀರಿನ ಬಳಕೆಯ ದಕ್ಷತೆಯನ್ನು ಹೆಚ್ಚಿಸುವ ಉದ್ದೇಶದಿಂದ ಸೂಕ್ಷ್ಮ ನೀರಾವರಿ ಪದ್ಧತಿ ಅಳವಡಿಕೆಗೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಇತರೆ ಎಲ್ಲಾ ವರ್ಗಗಳ ಆಸಕ್ತ ರೈತರಿಂದ ಸಹಾಯಧನ ಪಡೆಯಲು ಅರ್ಜಿ ಆಹ್ವಾನಿಸಿದೆ.
ಈ ಯೋಜನೆಯಡಿ 5 ಎಕರೆವರೆಗಿನ ಪ್ರದೇಶಕ್ಕೆ ಶೇಕಡಾ 90% ರಷ್ಟು ಸಹಾಯಧನ ಹಾಗೂ ಮೇಲ್ಪಟ್ಟ ಪ್ರದೇಶಕ್ಕೆ ಶೇಕಡಾ 45% ರ ದರದಂತೆ ಸಹಾಯಧನವನ್ನು ಒಟ್ಟಾರೆ ಗರಿಷ್ಠ 12.50 ಎಕರೆ ಪ್ರದೇಶದವರೆಗೆ ನೀಡಲು ಅವಕಾಶವಿದ್ದು, ಈಗಾಗಲೇ 7 ವರ್ಷಗಳ ಹಿಂದೆ ಸೂಕ್ಷ್ಮ ನೀರಾವರಿ ಪದ್ಧತಿಯನ್ನು ಅಳವಡಿಸಿಕೊಂಡು ಸಹಾಯಧನ ಪಡೆದಿರುವ ರೈತರು ಅವುಗಳು ಹಾಳಾಗಿದ್ದಲ್ಲಿ ಪುನಃ ಸೂಕ್ಷ್ಮ ನೀರಾವರಿ ಅಳವಡಿಸಿಕೊಂಡಲ್ಲಿ ಅವರೂ ಸಹಾಯಧನ ಪಡೆಯಲು ಅರ್ಹರಾಗಿರುತ್ತಾರೆ. ಸಹಾಯಧನವನ್ನು ಯೋಜನೆಯ ಮಾರ್ಗಸೂಚಿ ಹಾಗೂ ಅನುದಾನ ಲಭ್ಯತೆ ಮತ್ತು ಜೇಷ್ಠತೆಯ ಅನುಸಾರ ನೀಡಲಾಗುವುದು.
ಹೆಚ್ಚಿನ ಮಾಹಿತಿಗಾಗಿ ರೈತರು ತಮ್ಮ ಹೋಬಳಿ/ತಾಲೂಕು ಮಟ್ಟದ ತೋಟಗಾರಿಕಾ ಕಚೇರಿಯನ್ನು ಸಂಪರ್ಕಿಸುವAತೆ ತೋಟಗಾರಿಕೆ ಜಂಟಿ ನಿರ್ದೇಶಕರು ತಿಳಿಸಿರುತ್ತಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...