Friday, February 6, 2026
Friday, February 6, 2026

Bangalore Film Festival ಸಂಗೀತ ಸಾಮ್ರಾಟ್ “ಹಂಸಲೇಖಾ” ಗೆ ಜೀವಮಾನ ಸಾಧನೆ ಪ್ರಶಸ್ತಿ

Date:

Bangalore Film Festival ಕನ್ನಡದ ಖ್ಯಾತ ಗೀತರಚನೆಕಾರ ಮತ್ತು ಸಂಗೀತ ನಿರ್ದೇಶಕ ಹಂಸಲೇಖ ಅವರಿಗೆ ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವದ ವತಿಯಿಂದ ಜೀವಮಾನ ಶ್ರೇಷ್ಠ ಸಾಧನೆ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ.

ಕಳೆದ ಗುರುವಾರ (ಜನವರಿ 29) ಪ್ರಾರಂಭವಾದ 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವವು ಶುಕ್ರವಾರ (ಫೆಬ್ರವರಿ ೦6) ಸಮಾರೋಪ ಕಾಣಲಿದ್ದು, ಈ ಸಮಾರಂಭದಲ್ಲಿ ಹಂಸಲೇಖ ಅವರು ಕನ್ನಡ ಚಿತ್ರರಂಗಕ್ಕೆ ಸಲ್ಲಿಸಿರುವ ಸೇವೆಯನ್ನು ಗುರುತಿಸಿ ಅವರಿಗೆ ಜೀವಮಾನದ ಶ್ರೇಷ್ಠ ಸಾಧನೆ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುತ್ತದೆ.

ಈ ಸಂಬಂಧ ಇಂದು ಕರ್ನಾಟಕ ಚಲನಚಿತ್ರ ಅಕಾಡೆಮಿಯ ರಿಜಿಸ್ಟ್ರಾರ್‌ ವಿನೋದ್‌ ಚಂದ್ರ ಮತ್ತು ಚಿತ್ರೋತ್ಸವದ ಕಲಾತ್ಮಕ ನಿರ್ದೇಶಕರಾದ ಮುರಳಿ ಅವರು ಹಂಸಲೇಖ ಅವರನ್ನು ಭೇಟಿ ಮಾಡಿ, ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಆಹ್ವಾನಿಸಿದರು.

ಕಳೆದ ಒಂದು ವಾರದಿಂದ ಸಿನಿಮಾಸಕ್ತರ ಮನಸ್ಸು ಗೆದ್ದ 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವದ ಸಮಾರೋಪ ಸಮಾರಂಭ, ಇಂದು ಸಂಜೆ ಆರಕ್ಕೆ ಚಿತ್ರ ಪ್ರದರ್ಶನ ನಡೆಯುತ್ತಿರುವ ಲುಲು ಮಾಲ್‌ನಲ್ಲಿ ನಡೆಯಲಿದೆ. ಈ ಸಂದರ್ಭದಲ್ಲಿ ಹಂಸಲೇಖ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.

Bangalore Film Festival ಈ ಚಿತ್ರೋತ್ಸವದಲ್ಲಿ ಏಷ್ಯನ್‌ ಸಿನಿಮಾ, ಭಾರತೀಯ ಸಿನಿಮಾ ಮತ್ತು ಕನ್ನಡ ಸಿನಿಮಾ ಎಂಬ ಮೂರು ಸ್ಪರ್ಧಾ ವಿಭಾಗಗಳಿದ್ದು, ಈ ವಿಭಾಗಗಳಲ್ಲಿ ಸ್ಪರ್ಧಿಸಿ, ಪ್ರಶಸ್ತಿ ಗೆದ್ದವರಿಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಈ ಕಾರ್ಯಕಮದ ಅಧ್ಯಕ್ಷತೆಯನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವೃಾದ ದಿನೇಶ್‌ ಗೂಂಡೂರಾವ್‌ ವಹಿಸಲಿದ್ದಾರೆ. ಕರ್ನಾಟಕ ಚಲನಚಿತ್ರ ಅಕಾಡೆಮಿಯ ಅಧ್ಯಕ್ಷರಾದ ಡಾ. ಸಾಧು ಕೋಕಿಲ, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷರಾದ ಡಾ. ಜಯಮಾಲಾ, ಚಿತ್ರೋತ್ಸವದ ರಾಯಭಾರಿ ಪ್ರಕಾಶ್‌ ರಾಜ್‌ ಮುಂತಾದವರು ಭಾಗವಹಿಸಲಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Ambedkar Bhavan Shivamogga ಫೆಬ್ರವರಿ 14. ” ಹ್ಯಾಪಿ ಫೀಟ್- 2026″ ವಿಶೇಷ ನೃತ್ಯ ಪ್ರದರ್ಶನ

Ambedkar Bhavan Shivamogga ನೃತ್ಯಸಿರಿ ಡ್ಯಾನ್ಸ್ ಸ್ಟುಡಿಯೋ ವತಿಯಿಂದ “ಹ್ಯಾಪಿ ಫೀಟ್-2026”...

Dharmasthala Rural Development Project ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯಿಂದ ವಾತ್ಸಲ್ಯ ಕಿಟ್ ವಿತರಣೆ

Dharmasthala Rural Development Project ಶಿವಮೊಗ್ಗ ತಾಲೂಕಿನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ...

ಕರವೇ ಜನಮನ ರಾಜ್ಯ ಸಂಘಟನೆಯ ಪದಾಧಿಕಾರಿಗಳ ಪ್ರಮಾಣವಚನ ಸ್ವೀಕಾರ

ಕನ್ನಡ ರಕ್ಷಣಾ ವೇದಿಕೆ ಜನಮನ ರಾಜ್ಯ ಸಂಘಟನೆಯ ಪದಾಧಿಕಾರಿಗಳ ಅಧಿಕಾರದ ಪ್ರಮಾಣ...