Sunday, October 11, 2026
Sunday, October 11, 2026

S.N.Chennabasappa ಕೊಳಚೆ ಪ್ರದೇಶದ ವಸ್ತುಸ್ಥಿತಿ ಬಗ್ಗೆ ಉನ್ನತ ಅಧಿಕಾರಿಗಳಿಂದ ಜಂಟಿ ಸ್ಥಳ ಪರಿಶೀಲನೆ- ಶಾಸಕ ಚೆನ್ನಿ

Date:

S.N.Chennabasappa ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿರುವ ಸರ್ಕಾರಿ ಖಾರಾಬು ಕಟ್ಟೆ, ಕೆರೆ ಹಾಗೂ ಸರ್ಕಾರಿ ಜಮೀನುಗಳಲ್ಲಿನ 6 ಘೋಷಿತ ಕೊಳಚೆ ಪ್ರದೇಶಗಳಿಗೆ ಸಂಬಂಧಿಸಿದಂತೆ, ದಿನಾಂಕ 03.02.2026 ರಂದು ವಿಧಾನಸಭೆಯ ನಿಯಮ 73ರ ಅಡಿಯಲ್ಲಿ ಸರ್ಕಾರದ ಗಮನ ಸೆಳೆದ ಪರಿಣಾಮವಾಗಿ, ಮಾನ್ಯ ಸಭಾಧ್ಯಕ್ಷರೊಂದಿಗೆ ವಿಸ್ತೃತ ಚರ್ಚೆ ನಡೆಸಲಾಗಿತ್ತು.

ಈ ಚರ್ಚೆಯ ಮುಂದುವರಿದ ಕ್ರಮವಾಗಿ, ಸದರಿ ಕೊಳಚೆ ಪ್ರದೇಶಗಳ ವಸ್ತುಸ್ಥಿತಿಯನ್ನು ನೇರವಾಗಿ ಅರಿಯಲು ಹಾಗೂ ಮುಂದಿನ ಅಗತ್ಯ ಕ್ರಮಗಳ ಕುರಿತು ತೀರ್ಮಾನ ಕೈಗೊಳ್ಳುವ ಉದ್ದೇಶದಿಂದ, ಜಿಲ್ಲಾಡಳಿತ ಹಾಗೂ ಬೆಂಗಳೂರಿನ ಕೊಳಚೆ ನಿರ್ಮೂಲನಾ ಮಂಡಳಿಯ ಅಧಿಕಾರಿಗಳನ್ನೊಳಗೊಂಡ ಶ್ರೀಮತಿ ಜಯ ಅವರ ತಂಡವು ಇಂದು ಶಿವಮೊಗ್ಗ ನಗರಕ್ಕೆ ಆಗಮಿಸಿ ಜಂಟಿ ಸ್ಥಳ ಪರಿಶೀಲನೆ ನಡೆಸಿತು.

ಈ ಸಂದರ್ಭದಲ್ಲಿ ಕೊಳಚೆ ಪ್ರದೇಶಗಳ ಭೌತಿಕ ಸ್ಥಿತಿ, ನಿವಾಸಿಗಳ ಸಮಸ್ಯೆಗಳು, ಕಾನೂನು ಹಾಗೂ ತಾಂತ್ರಿಕ ಅಂಶಗಳು, ಜೊತೆಗೆ ಮೂಲಭೂತ ಸೌಕರ್ಯಗಳ ಅಗತ್ಯತೆಗಳ ಕುರಿತು ಸಮಗ್ರವಾಗಿ ಚರ್ಚಿಸಲಾಯಿತು.

ಈ ಜಂಟಿ ಪರಿಶೀಲನೆ ಕೊಳಚೆ ಪ್ರದೇಶಗಳ ನಿವಾಸಿಗಳ ಹಕ್ಕುಗಳ ರಕ್ಷಣೆಯ ಜೊತೆಗೆ, ಶಾಶ್ವತ ಪುನರ್ವಸತಿ, ಮೂಲಸೌಕರ್ಯಗಳ ಅಭಿವೃದ್ಧಿ ಹಾಗೂ ನಗರ ಸುವ್ಯವಸ್ಥೆಗೆ ಸಂಬಂಧಿಸಿದಂತೆ ಮುಂದಿನ ಸ್ಪಷ್ಟ ಮತ್ತು ಪರಿಣಾಮಕಾರಿ ಕ್ರಮಗಳಿಗೆ ದಿಕ್ಕು ನೀಡುವ ಮಹತ್ವದ ಹೆಜ್ಜೆಯಾಗಿದ್ದು, ಸಂಬಂಧಪಟ್ಟ ಇಲಾಖೆಗಳ ಸಹಕಾರದೊಂದಿಗೆ ಶೀಘ್ರವೇ ಸೂಕ್ತ ತೀರ್ಮಾನಗಳನ್ನು ಕೈಗೊಳ್ಳಲಾಗುವುದು ಎಂಬ ವಿಶ್ವಾಸವನ್ನು ವ್ಯಕ್ತಪಡಿಸಲಾಗಿದೆ.

S.N.Chennabasappa ಈ ಸಂದರ್ಭದಲ್ಲಿ ತಸಿಲ್ದಾರಾದ ಶ್ರೀ ರಾಜೀವ್, ಸ್ಲಂ ಬೋರ್ಡ್ ನ ಅಧಿಕಾರಿಗಳಾದ ಶ್ರೀ ಪ್ರಸನ್ನ, ಶ್ರೀ ಮಂಜಪ್ಪ, ಪಾಲಿಕೆಯ ಕಂದಾಯ ಅಧಿಕಾರಿಗಳಾದ ಶ್ರೀ ಪೂಜಾರ್, ಶ್ರೀ ನಾಗೇಂದ್ರ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾದ ಶ್ರೀ ನಾಗರಾಜ್, ಬಿಜೆಪಿ ನಗರ ಅಧ್ಯಕ್ಷರಾದ ಶ್ರೀ ಮೋಹನ್ ರೆಡ್ಡಿ, ನಗರ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ದೀನ್ ದಯಾಳ್ ಸೇರಿದಂತೆ ಬಿಜೆಪಿಯ ಪ್ರಮುಖರು ಹಾಗೂ ಸ್ಥಳೀಯ ನಿವಾಸಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kuvempu University ವನ್ಯಜೀವಿ ಸಂರಕ್ಷಣೆಗೆ ಯುವಜನರ ಪಾಲ್ಗೊಳ್ಳುವಿಕೆ ಮುಖ್ಯ: ಸಮದ್ ಕೊಟ್ಟೂರು

Kuvempu University ವನ್ಯಜೀವಿ ಸಂರಕ್ಷಣೆ, ಪರಿಸರ ವಿಜ್ಞಾನ ಹಾಗೂ ಸಂಶೋಧನಾ ಕ್ಷೇತ್ರಗಳಲ್ಲಿ...