Tuesday, August 25, 2026
Tuesday, August 25, 2026

B. Y. Raghavendra ಆಗುಂಬೆ ಘಾಟ್ ಮೇಲ್ದರ್ಜೆಗೆ ಕೇಂದ್ರದ ಸಮ್ಮತಿ: ಸಂಸದ ರಾಘವೇಂದ್ರರ ಪ್ರಯತ್ನಕ್ಕೆ ಫಲ.

Date:

B. Y. Raghavendra ಆಗುಂಬೆ ಘಾಟ್ ರಸ್ತೆ ಮೇಲ್ದರ್ಜೆಗೇರಿಸಲು ಮುಂದಾದ ಕೇಂದ್ರ ಸರ್ಕಾರ; ಆಗುಂಬೆ ಘಾಟ್ ರಸ್ತೆ ಅಭಿವೃದ್ಧಿ ನಿಟ್ಟಿನಲ್ಲಿ ಸಂಸದ ಬಿ.ವೈ.ರಾಘವೇಂದ್ರ ಅವರ ಸತತ ಪ್ರಯತ್ನಕ್ಕೆ ಯಶಸ್ಸು

ಆಗುಂಬೆ ಘಾಟ್ ರಸ್ತೆ ಮೇಲ್ದರ್ಜೆ ಯೋಜನೆ ಜೊತೆಗೆ ಸುರಂಗ ಮಾರ್ಗದ ಕಾರ್ಯಸಾಧ್ಯತಾ ಅಧ್ಯಯನದೊಂದಿಗೆ 6 ತಿಂಗಳಲ್ಲಿ ವಿಸ್ತೃತ ಯೋಜನಾ ವರದಿ (ಡಿಪಿಆರ್) ಸಿದ್ಧಪಡಿಸಲು ಟೆಂಡರ್ ಗೆ ಆಹ್ವಾನ, 2.33 ಕೋಟಿ ರೂ. ಮೀಸಲು.

ಕೇಂದ್ರ ಸರ್ಕಾರದ ಮಹತ್ವಪೂರ್ಣ ನಿರ್ಣಯವನ್ನು ಸ್ವಾಗತಿಸಿದ ಸಂಸದ ರಾಘವೇಂದ್ರ; ಸುರಕ್ಷಿತ, ಸುಗಮ ಸಂಪರ್ಕ ಕಲ್ಪಿಸುವ ಜೊತೆಗೆ ಮಲೆನಾಡು – ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಹೊಸ ದಿಕ್ಕು, ಹೊಸ ವೇಗ ನೀಡುವ ಕ್ರಮ ಎಂದಿರುವ ಸಂಸದರು

ನವದೆಹಲಿ, 10 ಫೆಬ್ರವರಿ 2026: ಆಗುಂಬೆ ಘಾಟ್ ಮೂಲಕ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿ–169ಎ ರಸ್ತೆಯನ್ನು (ಕಿ.ಮೀ. 30.75 ರಿಂದ 51.60ರವರೆಗೆ) ಎರಡು ಲೇನ್‌ ರಸ್ತೆ, ಎರಡೂ ಬದಿ ಪಾದಚಾರಿ ಮಾರ್ಗ ಸಹಿತ ವಿಸ್ತರಿಸುವ ಉದ್ದೇಶದಿಂದ ಕಾರ್ಯಸಾಧ್ಯತಾ ಅಧ್ಯಯನ, ವಿವರವಾದ ಯೋಜನಾ ವರದಿ (ಡಿಪಿಆರ್), ಸಮೀಕ್ಷೆ ಹಾಗೂ ಭೂ ಯೋಜನೆ ತಯಾರಿಕೆಗಾಗಿ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ (MoRTH) ಟೆಂಡರ್ ಆಹ್ವಾನಿಸಿರುವುದನ್ನು ಸಂಸತ್ ಸದಸ್ಯ ಬಿ.ವೈ.ರಾಘವೇಂದ್ರ ಸ್ವಾಗತಿಸಿದ್ದಾರೆ. ಗಮನಾರ್ಹವೆಂದರೆ, ಡಿಪಿಆರ್ ವ್ಯಾಪ್ತಿಯು ನಿರ್ದಿಷ್ಟವಾಗಿ ಸುರಂಗ ವಿನ್ಯಾಸ ತಜ್ಞರು ಮತ್ತು ಹಿರಿಯ ಭೂ-ಭೌತಶಾಸ್ತ್ರಜ್ಞರ ತೊಡಗಿಸಿಕೊಳ್ಳುವಿಕೆಯನ್ನು ಒಳಗೊಂಡಿದ್ದು, ಆಗುಂಬೆ ಘಾಟ್ ರಸ್ತೆಯಲ್ಲಿ ಸುರಂಗ ಮಾರ್ಗ ನಿರ್ಮಾಣದ ಆಯ್ಕೆಯ ಕಾರ್ಯಸಾಧ್ಯತೆಯನ್ನು ಪರೀಕ್ಷಿಸಲು, ವಿವರವಾದ ಭೂ-ತಾಂತ್ರಿಕ ತನಿಖೆಗಳಿಗೆ ಮೀಸಲಾದ ಬಜೆಟ್ ನಿಬಂಧನೆಗಳೊಂದಿಗೆ, ಅವಕಾಶ ಕಲ್ಪಿಸಲಾಗಿದೆ. ದಶಕಗಳಿಂದಲೂ ಬಾಕಿ ಉಳಿದಿದ್ದ ಆಗುಂಬೆ ಘಾಟ್ ಮೇಲ್ದರ್ಜೆಗೇರಿಸುವ ಜನರ ಬೇಡಿಕೆಗೆ ಇದು ಸ್ಪಷ್ಟ, ನಿರ್ಣಾಯಕ ಮತ್ತು ಆಡಳಿತಾತ್ಮಕವಾಗಿ ಮೊದಲ ಹೆಜ್ಜೆಯಾಗಿದೆ ಎಂದು ರಾಘವೇಂದ್ರ ತಿಳಿಸಿದ್ದಾರೆ.

B. Y. Raghavendra ಪರಿಸರ ಸೂಕ್ಷ್ಮ ಪ್ರದೇಶವಾಗಿರುವ ಜೊತೆಗೆ ಅಪಾಯಕಾರಿ ಹಾಗೂ ಅಪಘಾತಗಳಿಗೆ ಹೆಸರಾದ ಆಗುಂಬೆ ಘಾಟ್ ರಸ್ತೆಯ ಸುರಕ್ಷತೆ ಹೆಚ್ಚಿಸುವುದು, ಪಶ್ಚಿಮ ಘಟ್ಟ ಪ್ರದೇಶದ ಪ್ರಕೃತಿ ಸಂವೇದನಾಶೀಲತೆಗೆ ಗೌರವ ನೀಡುತ್ತಲೇ ವೈಜ್ಞಾನಿಕವಾಗಿ ರಸ್ತೆ ಅಭಿವೃದ್ಧಿ ಕೈಗೊಳ್ಳುವುದು ಈ ಯೋಜನೆಯ ಮುಖ್ಯ ಗುರಿಯಾಗಿದೆ ಎಂದು ರಾಘವೇಂದ್ರ ಹೇಳಿದ್ದಾರೆ. “ಡಿಪಿಆರ್ ಪ್ರಕ್ರಿಯೆ ಆರಂಭವಾಗಿರುವುದೇ ಈ ಯೋಜನೆ ಕುರಿತು ಕೇಂದ್ರದ ಪ್ರಧಾನಿ ನರೇಂದ್ರ ಮೋದಿ ಸರ್ಕಾರ, ಇದನ್ನು ಬಗ್ಗೆ ಎಷ್ಟು ಗಂಭೀರವಾಗಿ ಪರಿಗಣಿಸಿದೆ ಮತ್ತು ಕಾಲಮಿತಿಯೊಳಗೆ ಮುಗಿಸುವ ಬದ್ಧತೆಯನ್ನು ಪ್ರದರ್ಶಿಸುತ್ತದೆ. ಈ ಆಗುಂಬೆ ಘಾಟ್ ರಸ್ತೆ ಅಭಿವೃದ್ಧಿಯಿಂದ ಮಲೆನಾಡು – ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಹೊಸ ದಿಕ್ಕು ಲಭ್ಯವಾಗಲಿದ್ದು, ಸ್ಥಳೀಯ ನಿವಾಸಿಗಳು, ರೈತರು, ಅಕ್ಕಪಕ್ಕದ ಜಿಲ್ಲೆಗಳು, ಪ್ರವಾಸೋದ್ಯಮ ಹಾಗೂ ತುರ್ತು ಸೇವೆಗಳಿಗೆ ಗಣನೀಯ ಲಾಭವಾಗಲಿದೆ” ಎಂದು ಸಂಸದರು ಹೇಳಿದರು.

ಈ ಮಹತ್ವದ ನಿರ್ಧಾರಕ್ಕೆ ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಹಾಗೂ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯಕ್ಕೆ ಸಂಸದ ಬಿ.ವೈ.ರಾಘವೇಂದ್ರ ಕೃತಜ್ಞತೆ ಸಲ್ಲಿಸಿದ್ದಾರೆ. ಮುಂದಿನ ಹಂತಗಳಲ್ಲಿ ಯೋಜನೆ ಸುಗಮವಾಗಿ ಸಾಗಲು ಕೇಂದ್ರದೊಂದಿಗೆ ನಿರಂತರ ಸಂಯೋಜನೆ ಮುಂದುವರಿಸುವುದಾಗಿ ಅವರು ಹೇಳಿದ್ದು, ಭೂಸ್ವಾಧೀನ ಮತ್ತು ಕಾನೂನು ಪ್ರಕ್ರಿಯೆಗಳಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ಸಹಕಾರ ನೀಡಬೇಕು ಎಂದು ಮನವಿ ಮಾಡಿದ್ದಾರೆ. ಈ ಮೂಲಕ ಈ ಬಹುಕಾಲದ ಮಹತ್ವಪೂರ್ಣ ಯೋಜನೆ, ಯೋಜನಾ ಹಂತದಿಂದ ಕಾರ್ಯರೂಪಕ್ಕೆ ಶೀಘ್ರವಾಗಿ ಸಾಗಲಿ ಎಂಬುದು ಎಲ್ಲರ ಆಶಯವಾಗಿದೆ ಎಂದು ಸಂಸದ ರಾಘವೇಂದ್ರ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಬೈಂದೂರು ರೈಲ್ವೇ ನಿಲ್ದಾಣ ಅಭಿವೃದ್ಧಿಗೆ ₹86 ಕೋಟಿ ಪ್ರಸ್ತಾವನೆ: ಸಂಸದ ಬಿ.ವೈ.ರಾಘವೇಂದ್ರ ಭೇಟಿ

B.Y. Raghavendra ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮೂಕಾಂಬಿಕಾ ರೋಡ್ ಬೈಂದೂರು...

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...