Thursday, September 10, 2026
Thursday, September 10, 2026

DVS College of Arts, Science and Commerce ಶಿವಮೊಗ್ಗದಲ್ಲಿ ಪದವಿ‌ ಕಾಲೇಜುಗಳ ಅಧ್ಯಾಪಕರಿಗೆ ಕಾರ್ಯಾಗಾರ

Date:

DVS College of Arts, Science and Commerce ದೇಶೀಯ ವಿದ್ಯಾಶಾಲಾ ಸಮಿತಿಯ ಡಿವಿಎಸ್‌ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ಸಭಾಂಗಣದಲ್ಲಿ ಫೆಬ್ರವರಿ 13ರಂದು ಬೆಳಗ್ಗೆ 10ಕ್ಕೆ ಪದವಿ ಕಾಲೇಜುಗಳ ಅಧ್ಯಾಪಕರಿಗೆ ಒಂದು ದಿನದ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ.

ವಿದ್ಯಾರ್ಥಿ ಕಲಿಕೆಯ ಮೌಲ್ಯ ನಿರ್ಣಯ ಮತ್ತು ಮೌಲ್ಯಮಾಪನ ತಂತ್ರಗಳು ವಿಷಯ ಕುರಿತು ಆಯೋಜಿಸಿರುವ ಕಾರ್ಯಾಗಾರವನ್ನು ಉನ್ನತ ಶಿಕ್ಷಣ ಇಲಾಖೆ ಕಾರ್ಯದರ್ಶಿ ಖುಷ್ಬೂ ಗೋಯಲ್‌ ಚೌಧರಿ ಉದ್ಘಾಟಿಸುವರು. ಕಾಲೇಜು ಶಿಕ್ಷಣ ಇಲಾಖೆ ಆಯುಕ್ತೆ ಮಂಜುಶ್ರೀ ಎನ್‌., ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್‌ ಉಪಾಧ್ಯಕ್ಷ ಪ್ರೊ. ಎಸ್‌.ಆರ್‌.ನಿರಂಜನ, ಪರಿಷತ್‌ ಕಾರ್ಯನಿರ್ವಾಹಕ ನಿರ್ದೇಶಕ ಡಾ. ಕೆ.ಜಿ.ಚಂದ್ರಶೇಖರ ಭಾಗವಹಿಸುವರು.

DVS College of Arts, Science and Commerce ಕುವೆಂಪು ವಿವಿ ನಿವೃತ್ತ ಇಂಗ್ಲೀಷ್‌ ಪ್ರಾಧ್ಯಾಪಕ ಪ್ರೊ. ರಾಜೇಂದ್ರ ಚೆನ್ನಿ ದಿಕ್ಸೂಚಿ ಭಾಷಣ ಮಾಡುವರು. ಪ್ರಾದೇಶಿಕ ಜಂಟಿ ನಿರ್ದೇಶಕ ಪ್ರೊ. ಎಚ್‌.ಕೇಶವ ಅಧ್ಯಕ್ಷತೆ ವಹಿಸುವರು. ದೇಶೀಯ ವಿದ್ಯಾಶಾಲಾ ಸಮಿತಿ ಅಧ್ಯಕ್ಷ ಕೆ.ಬಸಪ್ಪಗೌಡ, ಉಪಾಧ್ಯಕ್ಷ ಜಿ.ಮಧುಸೂದನ್‌, ಕಾರ್ಯದರ್ಶಿ ಎಸ್‌.ಪಿ.ದಿನೇಶ್‌, ಸಹ ಕಾರ್ಯದರ್ಶಿ ಡಾ. ಎ.ಸತೀಶ್‌ ಕುಮಾರ್‌ ಶೆಟ್ಟಿ, ಕೋಶಾಧ್ಯಕ್ಷ ಎನ್‌.ಆರ್‌.ನಿತಿನ್‌, ಕಾಲೇಜಿನ ಪ್ರಾಚಾರ್ಯ ಡಾ. ಎಂ.ವೆಂಕಟೇಶ್‌, ಕಾರ್ಯಕ್ರಮ ಸಂಯೋಜಕ ಡಾ. ನವೀನ್‌.ವಿ, ಕಾಲೇಜಿನ ಐಕ್ಯೂಎಸಿ ಸಂಯೋಜಕ ಪ್ರೊ. ಎನ್‌.ಕುಮಾರಸ್ವಾಮಿ ಉಪಸ್ಥಿತರಿರುವರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Chamber of commerce Shivamogga “ಬೆಂಗಳೂರಿನಾಚೆ ಕೈಗಾರಿಕಾ ಅಭಿವೃದ್ಧಿ” ಗಾಗಿ ಶಿವಮೊಗ್ಗ ನಗರವನ್ನ ಸೇರ್ಪಡಿಸಿ- ಎಸ್.ರುದ್ರೇಗೌಡ

Chamber of commerce Shivamogga ಬೆಂಗಳೂರಿನಾಚೆಗಿನ ಕೈಗಾರಿಕೆಗಳ ಅಭಿವೃದ್ಧಿಗಾಗಿ ಶಿವಮೊಗ್ಗ ನಗರ...

Madhu Bangarappa ಸರ್ಕಾರದ ಸೇವೆಗಳನ್ನ ಜನರ ಮನೆಬಾಗಿಲಿಗೆ ತಲುಪಿಸುವ ಉದ್ದೇಶದಿಂದ “ಪ್ರಜಾಸೇವೆ “ಜಾರಿಗೆ: ಮಧು ಬಂಗಾರಪ್ಪ

Madhu Bangarappa ಜನಸಾಮಾನ್ಯರ ದಿನನಿತ್ಯದ ಸಮಸ್ಯೆ-ಸವಾಲುಗಳಿಗೆ, ದುಃಖ ದುಮ್ಮಾನಗಳಿಗೆ ತ್ವರಿತವಾಗಿ ಸ್ಪಂದಿಸಿ,...

S.N. Channabasappa ಸಮಾಜಮುಖಿಯಾಗಿ ಕ್ರಿಯಾಶೀಲವಾಗಿರುವ ಆರ್ಯವೈಶ್ಯ ಶ್ರೀರಾಮಸಹಕಾರ ಸಂಘದ ಕಾರ್ಯ ಶ್ಲಾಘನೀಯ : ಎಸ್.ಎನ್.ಚನ್ನಬಸಪ್ಪ

S.N. Channabasappa "ಸಮಾಜದ ಉದಯೋನ್ಮುಖ ಯುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವುದು ಹಾಗೂ...