Thursday, June 4, 2026
Thursday, June 4, 2026

Department of Kannada and Culture ಫೆ‌.19. ಛತ್ರಪತಿ‌ ಶ್ರೀ ಶಿವಾಜಿ ಮಹಾರಾಜರ ಜಯಂತಿ ಜಿಲ್ಲಾಡಳಿತದಿಂದ ಆಯೋಜನೆ

Date:

Department of Kannada and Culture ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಶಿವಮೊಗ್ಗ ಇವರ ಸಂಯಕ್ತಾಶ್ರಯದಲ್ಲಿ ಫೆ.19 ರ ಬೆಳಗ್ಗೆ 11 ಗಂಟೆಗೆ ನಗರದ ಕುವೆಂಪು ರಂಗಮಂದಿರದಲ್ಲಿ ಛತ್ರಪತಿ ಶ್ರೀ ಶಿವಾಜಿ ಮಹಾರಾಜರ ಜಯಂತಿಯನ್ನು ಏರ್ಪಡಿಸಲಾಗಿದೆ.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖಾ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧುಬಂಗಾರಪ್ಪ ಇವರು ಕಾರ್ಯಕ್ರಮದ ಉದ್ಘಾಟನೆ ನೆರವೇರಿಸುವರು. ಶಾಸಕ ಎಸ್.ಎನ್. ಚನ್ನಬಸಪ್ಪರವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ತಂಗಡಗಿ ಶಿವರಾಜ್ ಸಂಗಪ್ಪರವರು ವಿಶೇಷ ಆಹ್ವಾನಿತರಾಗಿ ಉಪಸ್ಥಿತರಿರಲಿದ್ದಾರೆ.
Department of Kannada and Culture ಕಾರ್ಯಕ್ರಮದಲ್ಲಿ ಸಂಸದರು, ವಿಧಾನಸಭಾ ಮತ್ತು ವಿಧಾನ ಪರಿಷತ್ ಶಾಸಕರು, ಪಾಲಿಕೆ ಮಹಾಪೌರರು, ಜನಪ್ರತಿನಿಧಿಗಳು, ವಿವಿಧ ನಿಗಮ, ಮಂಡಳಿ, ಪ್ರಾಧಿಕಾರಗಳ ಅಧ್ಯಕ್ಷರು, ಜಿಲ್ಲೆಯ ಎಲ್ಲಾ ಗೌರವಾನ್ವಿತ ಜನಪ್ರತಿನಿಧಿಗಳು, ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿವರ್ಗ ಮತ್ತು ವಿವಿಧ ಸಂಘಟನೆಗಳ ಮುಖಂಡರು, ಪದಾಧಿಕಾರಿಗಳು ಹಾಗು ಸದಸ್ಯರು, ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಜಿ.ಪಂ ಸಿಇಓ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ಹಾಗೂ ಮಹಾನಗರ ಪಾಲಿಕೆ ಆಯುಕ್ತರು ಮತ್ತು ಇನ್ನಿತರ ಗಣ್ಯರು, ಅಧಿಕಾರಿಗಳು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.
ತೀರ್ಥಹಳ್ಳಿಯ ಚಿಟ್ಟೆಬೈಲು ಪ್ರಜ್ಞಾಭಾರತಿ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ಲೋಹಿತಾಶ್ವ ಕೇದಿಗ್ಗೆರೆ ಇವರಿಂದ ವಿಶೇಷ ಉಪನ್ಯಾಸ ಆಯೋಜಿಸಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Tunga Reservoir ಅವಿರತ ಮಳೆ.ತುಂಗಾ ಜಲಾಶಯದಿಂದ ಹೆಚ್ಚುವರಿ ನೀರು ಬಿಡುಗಡೆ ಸಾಧ್ಯತೆ. ಸಾರ್ವಜನಿಕರಿಗೆ ಮುನ್ನೆಚ್ಚರಿಕೆ ಮಾಹಿತಿ.

Tunga Reservoir ತುಂಗಾ ಜಲಾಶಯದ ಜಲಾನಯನ ಪ್ರದೇಶದಲ್ಲಿ ಹೆಚ್ಚಿನ ಪ್ರಮಾಣದ ಮಳೆಯಾಗುವ...

Shivamogga Railway Station ಚಲಿಸುತ್ತಿದ್ದ ರೈಲುಬೋಗಿ ಹತ್ತುವ ಪ್ರಯತ್ನದಲ್ಲಿ ಆಯತಪ್ಪಿ ಬೀಳಲು ಬಿಡದೇ ಪ್ರಯಾಣಿಕರನ್ನು ರಕ್ಷಿಸಿದ ಪೊಲೀಸ್ ಸಿಬ್ಬಂದಿ.

Shivamogga Railway Station ಚಲಿಸುತ್ತಿದ್ದ ರೈಲನ್ನು ಹತ್ತಲು ಯತ್ನಿಸಿದ ಪ್ರಯಾಣಿಕನನ್ನು ರೈಲ್ವೆ ಪೊಲೀಸರು...

H.S. Sundaresh ಆರೋಗ್ಯವಂತ ಯುವಜನರು ರಕ್ತದಾನ ಮಾಡಲು ಮುಂದಾಗಬೇಕು- ಹೆಚ್.ಎಸ್.ಸುಂದರೇಶ್.

H.S. Sundaresh ಪ್ರತಿಯೊಬ್ಬ ಆರೋಗ್ಯವಂತ ಯುವಜನರು ರಕ್ತದಾನ ಮಾಡಲು ಮುಂದಾಗಬೇಕು. ರಕ್ತದಾನ ಮಾಡುವುದರಿಂದ...