Wednesday, September 9, 2026
Wednesday, September 9, 2026

Dinesh Gundu Rao ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ಬಂದವರು ಯಾರೂ ‘ ಔಷಧ ಇಲ್ಲ” ಎಂದು ವಾಪಾಸ್ ಹೋಗಬಾರದು- ಸಚಿವ ದಿನೇಶ್ ಗುಂಡೂರಾವ್

Date:

Dinesh Gundu Rao ಕರ್ನಾಟಕ ಸಾರ್ವತ್ರಿಕ ಆರೋಗ್ಯ ಆಂದೋಲನ ವತಿಯಿಂದ ಬೆಂಗಳೂರಿನ ಗಾಂಧಿಭವನದಲ್ಲಿ ಇಂದು ಹಮ್ಮಿಕೊಂಡಿದ್ದ ಆರೋಗ್ಯ ಹಕ್ಕಿನ ಜಾಥಾ-2026ರ ಸಮಾರೋಪ ಕಾರ್ಯಕ್ರಮದಲ್ಲಿ ರಾಜ್ಯದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಪಾಲ್ಗೊಂಡು ಮಾತನಾಡಿದರು.

2025-26ನೇ ಸಾಲಿನ ವಾರ್ಷಿಕ ಬೇಡಿಕೆ ಪಟ್ಟಿಗೆ ಸಂಬಂಧಿಸಿದಂತೆ ಸರ್ಕಾರಿ ಆಸ್ಪತ್ರೆಗಳಿಗೆ ಅಗತ್ಯವಿರುವ ಔಷಧಿಗಳನ್ನು ಒದಗಿಸಲು ಕರ್ನಾಟಕ ರಾಜ್ಯ ವೈದ್ಯಕೀಯ ಸರಬರಾಜು ನಿಗಮ (ಕೆಎಸ್‌ಎಂಸಿಎಲ್) ವತಿಯಿಂದ ಔಷಧಿಗಳ ಖರೀದಿ ಪ್ರಕ್ರಿಯೆ ಆರಂಭಿಸಲಾಗಿದ್ದು ಮಾರ್ಚ್ ಅಂತ್ಯದೊಳಗೆ ಪೂರ್ಣಗೊಳ್ಳಲಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು
.
ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗೆಂದು ಆಗಮಿಸುವ ಯಾರೊಬ್ಬರೂ “ಔಷಧ ಇಲ್ಲ” ಎಂದು ವಾಪಸ್ ಹೋಗಬಾರದು. ಆ ನಿಟ್ಟಿನಲ್ಲಿ ನಮ್ಮ ಸರ್ಕಾರ ಹಲವು ಕಾರ್ಯಕ್ರಮಗಳನ್ನು ರೂಪಿಸಿದ್ದು, ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿಯೂ ಸಮರ್ಪಕ ಔಷಧಗಳು ಲಭ್ಯವಾಗುವಂತೆ ಕ್ರಮ ಕೈಗೊಳ್ಳುತ್ತಿದೆ. ತಂತ್ರಜ್ಞಾನ ಬಳಸಿಕೊಂಡು ಯಾವ ಆಸ್ಪತ್ರೆಗಳಲ್ಲಿ ಯಾವ ಔಷಧಗಳ ಸಂಗ್ರಹ ಎಷ್ಟಿದೆ ಎಂಬುದನ್ನು ಟ್ರ್ಯಾಕ್ ಮಾಡುತ್ತಿದ್ದು, ಈ ಪ್ರಕ್ರಿಯೆ ಕೂಡ ಇನ್ನಷ್ಟು ಸರಳವಾಗಲಿದೆ.

ನಮ್ಮ ಸರ್ಕಾರ ಆರೋಗ್ಯ ವ್ಯವಸ್ಥೆಯಲ್ಲಿ ಅಮೂಲಾಗ್ರ ಸುಧಾರಣೆಗಳನ್ನು ನಿರಂತರವಾಗಿ ತರುತ್ತಿದ್ದು, ಗುಣಮಟ್ಟದ ಔಷಧ ಪೂರೈಕೆಯ ಬದ್ಧತೆಯೊಂದಿಗೆ ಕಾರ್ಯನಿರ್ವಹಿಸುತ್ತಿದೆ ಎಂದು ಸಚಿವರು ತಿಳಿಸಿದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa ಸರ್ಕಾರದ ಸೇವೆಗಳನ್ನ ಜನರ ಮನೆಬಾಗಿಲಿಗೆ ತಲುಪಿಸುವ ಉದ್ದೇಶದಿಂದ “ಪ್ರಜಾಸೇವೆ “ಜಾರಿಗೆ: ಮಧು ಬಂಗಾರಪ್ಪ

Madhu Bangarappa ಜನಸಾಮಾನ್ಯರ ದಿನನಿತ್ಯದ ಸಮಸ್ಯೆ-ಸವಾಲುಗಳಿಗೆ, ದುಃಖ ದುಮ್ಮಾನಗಳಿಗೆ ತ್ವರಿತವಾಗಿ ಸ್ಪಂದಿಸಿ,...

S.N. Channabasappa ಸಮಾಜಮುಖಿಯಾಗಿ ಕ್ರಿಯಾಶೀಲವಾಗಿರುವ ಆರ್ಯವೈಶ್ಯ ಶ್ರೀರಾಮಸಹಕಾರ ಸಂಘದ ಕಾರ್ಯ ಶ್ಲಾಘನೀಯ : ಎಸ್.ಎನ್.ಚನ್ನಬಸಪ್ಪ

S.N. Channabasappa "ಸಮಾಜದ ಉದಯೋನ್ಮುಖ ಯುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವುದು ಹಾಗೂ...

B.Y. Raghavendra ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವಿಳಂಬಕ್ಕೆ ಸಂಸದ ಬಿ.ವೈ. ರಾಘವೇಂದ್ರ ಅಸಮಾಧಾನ

B.Y. Raghavendra ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಡೆಯುತ್ತಿರುವ ವಿವಿಧ ರಾಷ್ಟ್ರೀಯ ಹೆದ್ದಾರಿ...