ಶಿವಮೊಗ್ಗ ನಗರದ 100 ಅಡಿ ರಸ್ತೆ ವ್ಯಾಪ್ತಿಯಲ್ಲಿರುವ ಲಕ್ಷ್ಮೀ ಟಾಕೀಸ್ ವೃತ್ತದಿಂದ ರಾಜಕುಮಾರ ವೃತ್ತ ಹಾಗೂ ಮೇದಾರ ಕೇರಿ ರಸ್ತೆ ಪ್ರದೇಶದಲ್ಲಿ, ಜೊತೆಗೆ ಫ್ರೀಡಂ ಪಾರ್ಕ್ ಎದುರು ಭಾಗದಲ್ಲಿ, ಮಹಾನಗರ ಪಾಲಿಕೆಯ ಅಧಿಕಾರಿಗಳು ಮತ್ತು ಸಿಬ್ಬಂದಿಯವರ ಸಹಕಾರದೊಂದಿಗೆ ಪಾದಚಾರಿ ಮಾರ್ಗ (ಫುಟ್ಪಾತ್) ತೆರವು ಕಾರ್ಯಾಚರಣೆಯನ್ನ ಸಂಚಾರಿ ಪೊಲೀಸ್ ಸಿಬ್ಬಂದಿ ಕೈಗೊಂಡಿದ್ದರು.
ಕಾರ್ಯಾಚರಣೆ ವೇಳೆ ಪಾದಚಾರಿ ಮಾರ್ಗದಲ್ಲಿ ಇರಿಸಲಾದ ಅಂಗಡಿ ಫಲಕಗಳು, ಫಾಸ್ಟ್ ಫುಡ್ ಗಾಡಿಗಳು ಹಾಗೂ ಇತರೆ ವಸ್ತುಗಳನ್ನು ತೆರವುಗೊಳಿಸಲಾಯಿತು.
ಪಾದಚಾರಿಗಳು ಹಾಗೂ ವಾಹನಗಳ ಸುಗಮ ಸಂಚಾರಕ್ಕೆ ಅಡಚಣೆ ಉಂಟಾಗುವ ರೀತಿಯಲ್ಲಿ ಪಾದಚಾರಿ ಮಾರ್ಗ ಮತ್ತು ರಸ್ತೆಯ ಮೇಲಿನ ಯಾವುದೇ ವಸ್ತುಗಳನ್ನು ಇಟ್ಟುಕೊಳ್ಳಬಾರದು ಎಂದು ಸಂಬಂಧಿತರಿಗೆ ಸಂಚಾರಿ ಪೊಲೀಸ್ ಸಿಬ್ಬಂದಿಗಳು ಕಟ್ಟು ನಿಟ್ಟಿನ ಸೂಚನೆಗಳನ್ನು ನೀಡಿದರು
