ಕೇಂದ್ರ ಸರ್ಕಾರದ ಹಣಕಾಸು ಸಚಿವಾಲಯವು ಆಗಿಸ್ಮಾಕ್ ಘಟಕದಡಿಯಲ್ಲಿ ಮಾನದಂಡಗಳನ್ನು ಅಳವಡಿಸಿ ಭೂಹಿಡುವಳಿಗಳನ್ನು ಹೊಂದಿರುವ ರಾಜ್ಯದ ಎಲ್ಲಾ ರೈತರ ವಿವರಗಳನ್ನೊಳಗೊಂಡ ದತ್ತಾಂಶಗಳನ್ನು ಕ್ರೂಢೀಕರಿಸಲು ಹಾಗೂ ಪ್ರೂಟ್ಸ್ ತಂತ್ರಾಂಶದಲ್ಲಿ ರೈತರ ಇ-ಕೆವೈಸಿ ಮತ್ತು ರೈತರ ಸಹಮತಿ ಪತ್ರವನ್ನು ವಿದ್ಯುನ್ಮಾನ ರೀತಿಯಲ್ಲಿ ತೆಗೆದುಕೊಳ್ಳುವುದು ಕಡ್ಡಾಯವಾಗಿದ್ದು, ಈ ಪ್ರಕ್ರಿಯೆ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದಿಂದ ಒಂದು ಕೇಂದ್ರದ ನೋಂದಾಯಿತ ರೈತರ ಸಂಖ್ಯೆಯನ್ನು ಸೃಜಿಸಿ ಕೇಂದ್ರ ನೋಂದಾಯಿತ ರೈತ ಸಂಖ್ಯೆಯನ್ನು ಕೇಂದ್ರ ಸರ್ಕಾರದಿಂದ ಅನುಷ್ಠಾನಗೊಳಿಸುವ ಪಿ.ಎಂ. ಕಿಸಾನ್ ಯೋಜನೆಯು ಸೇರಿದಂತೆ ಎಲ್ಲಾ ಯೋಜನೆಗಳಲ್ಲೂ ಕಡ್ಡಾಯವಾಗಿ ಬಳಸಾಗುವುದು.
ಕೇಂದ್ರ ಸರ್ಕಾರದ ಪ್ರಮುಖ ಯೋಜನೆಗಳಾದ ಬರ ಪರಿಹಾರ, ಬೆಳೆ ವಿಮೆ ಹಾಗೂ ಪಿ.ಎಂ.ಕಿಸಾನ್ ಯೋಜನೆಯಡಿ ಸೌಲಭ್ಯಗಳನ್ನು ಪಡೆಯಲು ರೈತರು ಸಮೀಪದ ರೈತ ಸಂಪರ್ಕ ಕೇಂದ್ರ ಗ್ರಾಮಾ ಒನ್ ಕೇಂದ್ರ, ಕಂದಾಯ, ಕೃಷಿ, ತೋಟಗಾರಿಕೆ, ರೇಷ್ಮೆ ಇಲಾಖಾ ಕಛೇರಿಗಳನ್ನು ಫೆ.26 ರೊಳಗಾಗಿ ಸಂಪರ್ಕಿಸಿ, ತಮ್ಮ ಆಧಾರಕಾರ್ಡ್, ಆಧಾರ್ ಲಿಂಕ್ ಆಗಿರುವ ಮೊಬೈಲ್ ಮತ್ತು ಬ್ಯಾಂಕ್ ಪಾಸ್‌ಬುಕ್ ಜೆರಾಕ್ಸ್ ಹಾಗೂ ಎಲ್ಲಾ ಪಹಣಿಗಳನ್ನು ಸಲ್ಲಿಸಿ ಕಡ್ಡಾಯವಾಗಿ ಇ -ಕೆವೈಸಿ ಮಾಡಿಸಿಕೊಂಡು ತಮ್ಮ ಎಲ್ಲಾ ಭೂ ಹಿಡುವಳಿಗಳನ್ನು ತಮ್ಮ ಎಫ್.ಐ.ಡಿ.ಯಲ್ಲಿ ಸೇರ್ಪಡೆಗೊಳಿಸಿಕೊಳ್ಳುವಂತೆ ಹಾಗೂ ತಪ್ಪಿದಲ್ಲಿ ಕೇಂದ್ರ/ರಾಜ್ಯ ಸರ್ಕಾರದ ಸೌಲಭ್ಯಗಳಿಂದ ವಂಚಿತರಾಗಬಹುದು ಎಂದು ಸಹಾಯಕ ಕೃಷಿ ನಿರ್ದೇಶಕರು ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿ ಅಥವಾ ತಾಲೂಕು ಸಹಾಯಕ ಕೃಷಿ ನಿರ್ದೇಶಕರುಗಳನ್ನು ಹಾಗೂ ತೋಟಗಾರಿಕೆ ಇಲಾಖೆ, ಕಂದಾಯ ಇಲಾಖೆ, ಮೀನುಗಾರಿಕೆ, ರೇಷ್ಮೇ ಇಲಾಖೆ, ಪಶುಸಂಗೋಪನೆ ಇಲಾಖೆಗಳನ್ನು ಸಂಪರ್ಕಿಸಬಹುದು..
ಫ್ರೂಟ್ ತಂತ್ರಾಂಶದಲ್ಲಿ ಜಮೀನಿನ ವಿವರ ಕಡ್ಡಾಯ
Date:
