Prof. K. Ramakrishnaiah ನಾಡಿನ ಖ್ಯಾತ ರಂಗಕರ್ಮಿ ಹಾಗೂ ಬೆಂಗಳೂರು ವಿಶ್ವವಿದ್ಯಾಲಯದ ಪರ್ಫಾರ್ಮಿಂಗ್ ಆರ್ಟ್ಸ್ ವಿಭಾಗದ ಹಿರಿಯ ಪ್ರಾಧ್ಯಾಪಕರಾದ ಪ್ರೊ. ಕೆ. ರಾಮಕೃಷ್ಣಯ್ಯ ಅವರು ಮೈಸೂರಿನ ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯದ ಕುಲಪತಿಗಳಾಗಿ ಇಂದು (ಫೆಬ್ರವರಿ 23, 2026) ಅಧಿಕೃತವಾಗಿ ಅಧಿಕಾರ ವಹಿಸಿಕೊಂಡರು.
ಉತ್ತಮ ಶೈಕ್ಷಣಿಕ ಮತ್ತು ಕಲಾ ಹಿನ್ನೆಲೆ:
ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲ್ಲೂಕಿನವರಾದ ಇವರು, ಬೆಂಗಳೂರು. ನೀನಾಸಂ ದಪವಿದರರು, ಪ್ರದರ್ಶನ ಕಲಾ ವಿಭಾಗ ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಎಂ.ಎ.ಡ್ರಾಮ ಪದವಿ, ಪಿಹೆಚ್.ಡಿ ಪದವಿಯನ್ನು ಪಡೆದು. ಪ್ರಧ್ಯಾಪಕರಾಗಿ ವಿಶ್ವವಿದ್ಯಾಲಯದಲ್ಲಿ 25 ವರ್ಷಗಳ ಸುದೀರ್ಘ ಬೋಧನಾ ಅನುಭವ ಹೊಂದಿದ್ದಾರೆ. ಇವರ ಮಾರ್ಗದರ್ಶನದಲ್ಲಿ 16 ಸಂಶೋಧಕರು ಪಿಎಚ್.ಡಿ ಪದವಿ ಪಡೆದಿದ್ದು, ರಂಗಭೂಮಿ ಕುರಿತಾದ ಅನೇಕ ಸಂಶೋಧನಾ ಪ್ರಬಂಧಗಳನ್ನು ಮಂಡಿಸಿದ್ದಾರೆ.
ರಂಗಭೂಮಿಗೆ ಸಲ್ಲಿಸಿದ ಕೊಡುಗೆಗಳು:
ನಟ, ಮತ್ತು ನಿರ್ದೇಶಕರಾಗಿ ಕಾರ್ಯನಿರ್ವಹಿಸಿದ್ದಾರೆ.
ನಾಲ್ಕು ನಾಟಕಗಳನ್ನು ರಚಿಸಿ ಪ್ರಕಟಿಸಿದ್ದಾರೆ.
2011ರಲ್ಲಿ ಕರ್ನಾಟಕ ನಾಟಕ ಅಕಾಡೆಮಿ ಸ್ಟೇಟ್ ಫೆಲೋಶಿಪ್ ಹಾಗೂ 2017ರಲ್ಲಿ ನಾಟಕ ಅಕಾಡೆಮಿಯ ರಾಜ್ಯ ಪ್ರಶಸ್ತಿಗೆ ಭಾಜನರಾಗಿದ್ದಾರೆ.
Prof. K. Ramakrishnaiah ದೆಹಲಿಯಲ್ಲಿ ನಡೆದ 8ನೇ ಥಿಯೇಟರ್ ಒಲಿಂಪಿಕ್ಸ್ (2018) ಮತ್ತು ಅಹಮದಾಬಾದ್ನಲ್ಲಿ ನಡೆದ ಅಂತರಾಷ್ಟ್ರೀಯ ಭಾರತರಂಗ ಮಹೋತ್ಸವ 2024.
ಆಡಳಿತಾತ್ಮಕ ದಕ್ಷತೆ:
ಬೆಂಗಳೂರು ವಿಶ್ವವಿದ್ಯಾಲಯದ ಸಾಂಸ್ಕೃತಿಕ ಸಂಯೋಜಕರಾಗಿ (Cultural Coordinator) 2017ರಿಂದ ಕಾರ್ಯನಿರ್ವಹಿಸುತ್ತಿದ್ದ ಇವರು, ಈ ಹಿಂದೆ ವಿದ್ಯಾರ್ಥಿ ಕ್ಷೇಮಪಾಲನಾ ವಿಭಾಗದ ಡೀನ್ ಆಗಿ ಹಾಗೂ ಪರ್ಫಾರ್ಮಿಂಗ್ ಆರ್ಟ್ಸ್ ವಿಭಾಗದ ಅಧ್ಯಕ್ಷರಾಗಿ ಯಶಸ್ವಿಯಾಗಿ ಕಾರ್ಯನಿರ್ವಹಿಸಿದ್ದಾರೆ. ಇವರ ಈ ಅನುಭವವು ಸಂಗೀತ ವಿಶ್ವವಿದ್ಯಾಲಯದ ಅಭಿವೃದ್ಧಿಗೆ ಹೊಸ ದಿಕ್ಸೂಚಿ ನೀಡಲಿದೆ ಎಂದು ನಿರೀಕ್ಷಿಸಲಾಗಿದೆ.
