Wednesday, September 9, 2026
Wednesday, September 9, 2026

B. Y. Raghavendra ಊರಗಡೂರಿನ ಮೃತ ವಿದ್ಯಾರ್ಥಿ ಸಂಕೇತ್ ಮನೆಗೆ ಸಂಸದ ರಾಘವೇಂದ್ರ ಭೇಟಿ. ಕುಟುಂಬಸ್ಥರಿಗೆ ಸಾಂತ್ವನ.

Date:

B. Y. Raghavendra ಶಿವಮೊಗ್ಗದ ಊರುಗಡೂರಿನ ಸೂಳೆಬೈಲಿನಲ್ಲಿ ಗಾಂಜಾ ನಶೆಯಲ್ಲಿದ್ದ ಮತಾಂಧ ಪುಂಡರು ಎಸ್ ಎಸ್ ಎಲ್ ಸಿ ವಿದ್ಯಾರ್ಥಿ ಸಂಕೇತ್ ನನ್ನು ಅಮಾನುಷವಾಗಿ ಹಲ್ಲೆ ಮಾಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದರಾದ ಬಿ.ವೈ. ರಾಘವೇಂದ್ರ ಅವರು , ಮೃತ ಸಂಕೇತ್ ಅವರ ನಿವಾಸಕ್ಕೆ ಭೇಟಿ ನೀಡಿ, ದುಃಖತಪ್ತ ಕುಟುಂಬವರ್ಗದವರಿಗೆ ಸಾಂತ್ವಾನ ಹೇಳಿದರು.

ಆಸರೆಯಾಗಬೇಕಿದ್ದ ಮಗನನ್ನು ಕಳೆದುಕೊಂಡ ಹೆತ್ತವರ ಆಕ್ರಂದನ ಕಂಡು ಮನಸ್ಸಿಗೆ ಅತೀವ ಸಂಕಟವಾಯಿತು. ಭಗವಂತನು ಈ ದುಃಖವನ್ನು ಭರಿಸುವ ಶಕ್ತಿಯನ್ನು ಕುಟುಂಬಕ್ಕೆ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದರು.

B. Y. Raghavendra ಈ ದುರ್ಘಟನೆಗೆ ಹೊಣೆಗಾರರ ವಿರುದ್ಧ ತಕ್ಷಣ ಕಠಿಣ ಕ್ರಮ ಕೈಗೊಳ್ಳಬೇಕು. ತಪ್ಪಿತಸ್ಥರನ್ನು ಬಂಧಿಸಿ ಕಾನೂನಿನ ಅತ್ಯಂತ ಕಠಿಣ ಶಿಕ್ಷೆಗೆ ಒಳಪಡಿಸಬೇಕು. ಜೊತೆಗೆ, ಮೃತ ವಿದ್ಯಾರ್ಥಿಯ ಕುಟುಂಬಕ್ಕೆ ಸರ್ಕಾರ ತಕ್ಷಣ ಪರಿಹಾರ ನೀಡಿ, ಅಗತ್ಯ ನೆರವು ಒದಗಿಸಬೇಕು ಎಂದು ಹೇಳಿದರು.

ಜನರ ಭದ್ರತೆ ಸರ್ಕಾರದ ಮೊದಲ ಆದ್ಯತೆಯಾಗಬೇಕು. ರಾಜ್ಯ ಸರ್ಕಾರ ತಕ್ಷಣ ಎಚ್ಚೆತ್ತುಕೊಂಡು ಕಾನೂನು ಸುವ್ಯವಸ್ಥೆಯನ್ನು ಕಟ್ಟು ನಿಟ್ಟಾಗಿ ಜಾರಿಗೊಳಿಸಬೇಕು ಎಂದು ಆಗ್ರಹಿಸುತ್ತೇನೆ ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಮಾಜಮುಖಿಯಾಗಿ ಕ್ರಿಯಾಶೀಲವಾಗಿರುವ ಆರ್ಯವೈಶ್ಯ ಶ್ರೀರಾಮಸಹಕಾರ ಸಂಘದ ಕಾರ್ಯ ಶ್ಲಾಘನೀಯ : ಎಸ್.ಎನ್.ಚನ್ನಬಸಪ್ಪ

S.N. Channabasappa "ಸಮಾಜದ ಉದಯೋನ್ಮುಖ ಯುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವುದು ಹಾಗೂ...

B.Y. Raghavendra ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವಿಳಂಬಕ್ಕೆ ಸಂಸದ ಬಿ.ವೈ. ರಾಘವೇಂದ್ರ ಅಸಮಾಧಾನ

B.Y. Raghavendra ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಡೆಯುತ್ತಿರುವ ವಿವಿಧ ರಾಷ್ಟ್ರೀಯ ಹೆದ್ದಾರಿ...

Bhadra Reservoir ಸೆಪ್ಟೆಂಬರ್ 1 ರಿಂದ 10 ರವರೆಗೆ ಭದ್ರಾ ಬಲದಂಡೆ ನಾಲೆಯಲ್ಲಿ ನೀರು ಬಿಡುಗಡೆ: ಕುಡಿಯುವ ನೀರಿಗೆ ಮಾತ್ರ ಬಳಕೆ

Bhadra Reservoir ದಾವಣಗೆರೆ ಹಾಗೂ ಚನ್ನಗಿರಿ ತಾಲ್ಲೂಕುಗಳ ಜನ-ಜಾನುವಾರುಗಳಿಗೆ ಮತ್ತು ಬಹುಗ್ರಾಮ...