Thursday, July 23, 2026
Thursday, July 23, 2026

ಕಬ್ಬು ಬೆಳೆಗೆ ನೀಡುವ ಆರ್ಥಿಕ ನೆರವಿನ ಪ್ರಕಾರ ರಾಜ್ಯ ಸರ್ಕಾರ ರೂ. 300 ಕೋಟಿ ಬಿಡುಗಡೆ ಮಾಡಿದೆ- ಸಚಿವ ಶಿವಾನಂದ ಪಾಟೀಲ

Date:

ರಾಜ್ಯ ಸರ್ಕಾರ ಘೋಷಣೆ ಮಾಡಿದಂತೆ 2025-26ನೇ ಸಾಲಿನಲ್ಲಿ ರಾಜ್ಯದ ಸಕ್ಕರೆ ಕಾರ್ಖಾನೆಗಳಿಗೆ ಕಬ್ಬು ಪೂರೈಕೆ ಮಾಡಿದ ರಾಜ್ಯದ ರೈತರಿಗೆ ಪ್ರತಿ ಟನ್‌ಗೆ ರೂಂ 50 ಗಳ ಆರ್ಥಿಕ ನೆರವಿನ ಮೊತ್ತ ರೂಂ 300 ಕೋಟಿಗಳನ್ನು ಬಿಡುಗಡೆ ಮಾಡಲಾಗಿದೆ ಎಂದು ಕಬ್ಬು ಅಭಿವೃದ್ಧಿ, ಸಕ್ಕರೆ, ಜವಳಿ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ತಿಳಿಸಿದ್ದಾರೆ.

ಮುಖ್ಯಮಂತ್ರಿಗಳು ವಿಧಾನಸೌಧದಲ್ಲಿ ಕಳೆದ ನವಂಬರ್‌ 8ರಂದು ಕರೆದಿದ್ದ ಸಕ್ಕರೆ ಕಾರ್ಖಾನೆಗಳ ಮಾಲೀಕರು ಹಾಗೂ ಕಬ್ಬು ಬೆಳೆಗಾರರ ಸಭೆಯಲ್ಲಿ ಪ್ರತಿ ಟನ್‌ ಕಬ್ಬಿಗೆ ಎಫ್‌ಆರ್‌ಪಿ ಮೇಲೆ ನೂರು ರೂ. ಆರ್ಥಿಕ ನೆರವು ನೀಡುವ ನಿರ್ಧಾರ ಪ್ರಕಟಿಸಿದ್ದರು.

ರೂ 100 ಆರ್ಥಿಕ ನೆರವಿನಲ್ಲಿ ರಾಜ್ಯ ಸರ್ಕಾರ ರೂ 50 ಹಾಗೂ ಸಕ್ಕರೆ ಕಾರ್ಖಾನೆಗಳು ರೂ 50 ನೀಡಬೇಕು ಎಂಬ ತೀರ್ಮಾನವನ್ನು ಕೈಗೊಳ್ಳಲಾಗಿದ್ದು, ಈ ನಿರ್ಧಾರದಂತೆ ರಾಜ್ಯ ಸರ್ಕಾರ ತನ್ನ ಪಾಲಿನ ಆರ್ಥಿಕ ನೆರವಿನ ಹಣ ರೂಂ 300 ಕೋಟಿಗಳನ್ನು ಬಿಡುಗಡೆ ಮಾಡಿದೆ ಎಂದುಸ ಸಚಿವರು ತಿಳಿಸಿದ್ದಾರೆ.

ರಾಜ್ಯದ ಸಕ್ಕರೆ ಕಾರ್ಖಾನೆಗಳ ಪ್ರಸ್ತಾವನೆ ಆಧರಿಸಿ ಕಬ್ಬು ಅಭಿವೃದ್ಧಿ ಆಯುಕ್ತರು ಜಿಲ್ಲಾಧಿಕಾರಿಗಳಿಗೆ ಹಣ ಬಿಡುಗಡೆ ಮಾಡಲಿದ್ದಾರೆ. ರಾಜ್ಯದ ರೈತರು ರಾಜ್ಯದ ಸಕ್ಕರೆ ಕಾರ್ಖಾನೆಗಳಿಗೆ ಪೂರೈಕೆ ಮಾಡಿದ ಕಬ್ಬಿನ ಪ್ರಮಾಣ ಆಧರಿಸಿ ಅವರ ಬ್ಯಾಂಕ್‌ ಖಾತೆಗಳಿಗೆ ನೇರವಾಗಿ ಪ್ರತಿ ಟನ್‌ಗೆ 50 ರೂ.ಗಳಂತೆ ಜಮಾ ಮಾಡಲು ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ.

ಅದೇ ರೀತಿ ಕಬ್ಬು ಪೂರೈಕೆ ಮಾಡಿದ ರೈತರಿಗೆ ಸಕ್ಕರೆ ಕಾರ್ಖಾನೆಗಳ ಆಡಳಿತ ಮಂಡಳಿಗಳು ಪ್ರತಿ ಟನ್‌ ಕಬ್ಬಿಗೆ ರೂ 50 ಆರ್ಥಿಕ ನೆರವು ನೀಡಲು ಕ್ರಮ ಕೈಗೊಳ್ಳಬೇಕು ಎಂದು ಸಂಬಂಧಪಟ್ಟ ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ಸಚಿವ ಶಿವಾನಂದ ಪಾಟೀಲ ತಿಳಿಸಿದ್ದಾರೆ.

2025-26ನೇ ಸಾಲಿನ ಕಬ್ಬು ನುರಿಸುವ ಹಂಗಾಮಿನಲ್ಲಿ 81 ಸಕ್ಕರೆ ಕಾರ್ಖಾನೆಗಳು ಕಬ್ಬು ನುರಿಸಿದ್ದು, 29 ಕಾರ್ಖಾನೆಗಳಲ್ಲಿ ಕಬ್ಬು ನುರಿಸುವಿಕೆ ಮುಕ್ತಾಯವಾಗಿದೆ. ಇದುವರೆಗೆ 521 ಲಕ್ಷ ಮೆಟ್ರಿಕ್‌ ಕಬ್ಬು ನುರಿಸಲಾಗಿದ್ದು, ಈ ಹಂಗಾಮಿನಲ್ಲಿ ಸುಮಾರು 600 ಲಕ್ಷ ಮೆಟ್ರಿಕ್‌ ಟನ್‌ ಕಬ್ಬು ನುರಿಸುವ ನಿರೀಕ್ಷೆ ಇದೆ ಎಂದು ಸಚಿವರು ವಿವರಿಸಿದ್ದಾರೆ.

ಮಾರ್ಚ್‌ ಮೊದಲ ವಾರದ ವೇಳೆಗೆ ಪ್ರಸಕ್ತ ಹಂಗಾಮಿನ ಕಬ್ಬು ನುರಿಸುವಿಕೆ ಅಂತ್ಯವಾಗಲಿದ್ದು, 600 ಲಕ್ಷ ಮೆಟ್ರಿಕ್‌ ಟನ್‌ ನುರಿಸುವ ಅಂದಾಜು ಆಧರಿಸಿ ರೂ 300 ಕೋಟಿ ಆರ್ಥಿಕ ನೆರವು ಬಿಡುಗಡೆ ಮಾಡಲಾಗಿದೆ ಎಂದು
ಕಬ್ಬು ಅಭಿವೃದ್ಧಿ, ಸಕ್ಕರೆ, ಜವಳಿ ಹಾಗೂ ಕೃಷಿ ಮಾರುಕಟ್ಟೆ ಸಚಿವಶಿವಾನಂದ ಪಾಟೀಲ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ನೀಟ್ ಗೊಂದಲ, ಪ್ರತಿಭಟನೆ : ರಾಷ್ಟ್ರವಿರೋಧಿ ಶಕ್ತಿಗಳ ಕರಾಳ ತಂತ್ರ- ಎಸ್.ಎನ್.ಚನ್ನಬಸಪ್ಪ

S.N. Channabasappa ದೆಹಲಿಯಲ್ಲಿ ಜಿರಳೆ ಪಕ್ಷದ ಹೆಸರಿನಲ್ಲಿ ನಡೆದದ್ದು ವಿದ್ಯಾರ್ಥಿಗಳ ಹೋರಾಟ...

K. J.George ಪ್ರವಾಸೋದ್ಯಮ ಇಲಾಖೆ ವ್ಯಾಪ್ತಿಯ ಹೋಟೆಲ್ ಗಳು, ಆತಿಥ್ಯ ಕೇಂದ್ರಗಳು ಹಂತಹಂತವಾಗಿ ಉನ್ನತೀಕರಣ : ಸಚಿವ ಕೆ.ಜೆ.ಜಾರ್ಜ್

K.J. George ರಾಜ್ಯದ ಪ್ರವಾಸೋದ್ಯಮ ಮೂಲಸೌಕರ್ಯವನ್ನು ಜಾಗತಿಕ ಗುಣಮಟ್ಟಕ್ಕೆ ಏರಿಸುವ ಉದ್ದೇಶದಿಂದ,...

Kuvempu University ಕುವೆಂಪು ವಿವಿಯ ಸ್ನಾತಕೋತ್ತರ ಡಿಪ್ಲೊಮಾ ಪ್ರವೇಶಾತಿಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

Kuvempu University ಕುವೆಂಪು ವಿಶ್ವವಿದ್ಯಾಲಯವು 2026-27ನೇ ಸಾಲಿನ ವಿವಿಧ ಸ್ನಾತಕೋತ್ತರ ಪದವಿ,...