Sunday, October 6, 2024
Sunday, October 6, 2024

ವಿರಾಟ್ ಕ್ರಿಕೆಟ್ ನಾಯಕತ್ವಕ್ಕೆ ವಿದಾಯ

Date:

ವಿಶ್ವದ ಶ್ರೇಷ್ಠ ಕ್ರಿಕೆಟಿಗ ಹಾಗೂ ಟೀಂ ಇಂಡಿಯಾದ ಯಶಸ್ವಿ ನಾಯಕ ವಿರಾಟ್ ಕೊಹ್ಲಿ ಟೆಸ್ಟ್ ತಂಡದ ನಾಯಕತ್ವಕ್ಕೂ ಶನಿವಾರ ವಿದಾಯ ಘೋಷಿಸಿದ್ದಾರೆ.
ದಕ್ಷಿಣ ಆಫ್ರಿಕಾ ವಿರುದ್ಧ ಟೆಸ್ಟ್ ಸರಣಿಯನ್ನು 2-1 ಅಂತರದಿಂದ ಸೋತ ಮರುದಿನವೇ ಅವರು ಅಚ್ಚರಿಯ ನಿರ್ಧಾರ ಪ್ರಕಟಿಸಿದ್ದಾರೆ. ಅದಾಗ್ಯೂ ಅವರು ತಂಡದ ಆಟಗಾರನಾಗಿ ಮುಂದುವರಿಯಲಿದ್ದಾರೆ.
ಈಗಾಗಲೇ ಏಕದಿನ ಮತ್ತು ಟಿ20 ಸಾರಥ್ಯಕ್ಕೆ ಅವರು ರಾಜೀನಾಮೆ ಘೋಷಿಸಿದ್ದಾರೆ.
ತಂಡವನ್ನು ಸರಿಯಾದ ಪಥದಲ್ಲಿ ಸಾಗಿಸಲು 7 ವರ್ಷಗಳ ಕಾಲ ಪ್ರತಿದಿನ ಶ್ರಮಿಸಿದ್ದೇನೆ. ನನ್ನ ಕೆಲಸವನ್ನು ಪ್ರಾಮಾಣಿಕತೆಯಿಂದ ನಿಭಾಯಿಸಿದ್ದೇನೆ. ಎಲ್ಲದಕ್ಕೂ ಒಂದು ಕೊನೆ ಇದೆ. ಅಂತೆಯೇ ಭಾರತ ಟೆಸ್ಟ್ ತಂಡದ ನನ್ನ ನಾಯಕತ್ವವೂ ಅಂತ್ಯವಾಗಿದೆ. ನನ್ನ ಪಯಣ ಅನೇಕ ಏರಿಳಿತಗಳನ್ನು ಕಂಡಿದೆ. ಆದರೆ ಎಂದಿಗೂ ಪ್ರಯತ್ನ ಪಡದೇ ಇರುವುದು ಅಥವಾ ನಂಬಿಕೆ ಕಳೆದುಕೊಂಡಿದ್ದು ತಂಡವನ್ನು ಮುನ್ನಡೆಸಲು ಅವಕಾಶ ಮಾಡಿಕೊಟ್ಟ ಬಿಸಿಸಿಐಗೆ ಧನ್ಯವಾದ. ಯಶಸ್ಸಿಗೆ ಬೆನ್ನೆಲುಬಾಗಿ ನಿಂತ ಕೋಚ್ ರವಿಶಾಸ್ತ್ರಿ ಹಾಗೂ ತಂಡ, ನಾಯಕತ್ವದ ಗುಣ ಗುರುತಿಸಿದ ಮಹೇಂದ್ರ ಸಿಂಗ್ ಧೋನಿಗೆ ಧನ್ಯವಾದಗಳು ಎಂದು ವಿರಾಟ್ ಕೊಹ್ಲಿ ಟೆಸ್ಟ್ ತಂಡದ ನಾಯಕತ್ವಕ್ಕೆ ವಿದಾಯ ತಿಳಿಸಿದ್ದಾರೆ.
ನಾಯಕತ್ವಕ್ಕೆ ವಿದಾಯ ಹೇಳಿದ ವಿರಾಟ್ ಕೊಹ್ಲಿಗೆ ಬಿಸಿಸಿಐ ಅಭಿನಂದನೆ ಸಲ್ಲಿಸಿದೆ.
ತಮ್ಮ ಅಭೂತಪೂರ್ವ ನಾಯಕತ್ವ ಗುಣಗಳಿಂದ ಟೀಮ್ ಇಂಡಿಯಾವನ್ನು ಉತ್ತುಂಗಕ್ಕೇರಿಸಿದ ಕೊಹ್ಲಿಗೆ ಶುಭಾಶಯಗಳು ಎಂದು ಹೇಳಿದೆ.
ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಕೂಡ ಕೊಹ್ಲಿಗೆ ಅಭಿನಂದನೆ ಸೂಚಿಸಿದ್ದಾರೆ. ಅದೇ ರೀತಿ ದೇಶ-ವಿದೇಶಗಳ ಹಿರಿಯ-ಕಿರಿಯ ಕ್ರಿಕೆಟಿಗರು ಕೊಹ್ಲಿ ಏಕಾಏಕಿ ನಾಯಕತ್ವದ ಬಗ್ಗೆ ಅಚ್ಚರಿ ವ್ಯಕ್ತಪಡಿಸುವ ಜೊತೆಗೆ ಅವರ ಸಾಧನೆಗೆ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.
ವಿರಾಟ್ ಕೊಹ್ಲಿ ನಾಯಕತ್ವ ವಹಿಸುವಾಗ ಭಾರತ ಟೆಸ್ಟ್ ತಂಡ ವಿಶ್ವ ಅಗ್ರತೆಯಲ್ಲಿ ಏಳನೇ ಸ್ಥಾನ ಹೊಂದಿತ್ತು. ಇದೀಗ ನಂಬರ್ ಒನ್ ಸ್ಥಾನದಲ್ಲಿದೆ.
ವಿರಾಟ್ ಕೊಹ್ಲಿ ನಾಯಕತ್ವ ಭಾರತ ತಂಡ ತವರಿನಲ್ಲಿ ಸತತ 11 ಸರಣಿ ಗೆದ್ದ ದಾಖಲೆ ಮಾಡಿದೆ.
ಆಸ್ಟ್ರೇಲಿಯದಲ್ಲಿ ಟೆಸ್ಟ್ ಸರಣಿ ಗೆದ್ದ ಭಾರತದ ಮೊದಲ ನಾಯಕ ಎಂಬ ದಾಖಲೆ ಕೊಹ್ಲಿ ಹೆಸರಿನಲ್ಲಿದೆ.
ದಕ್ಷಿಣ ಆಫ್ರಿಕಾ ವಿರುದ್ಧ ಟೆಸ್ಟ್ ಸರಣಿ ಸೋತ ಹೊರತಾಗಿಯೂ ಸೆಂಚುರಿಯನ್ ನಲ್ಲಿ ಟೆಸ್ಟ್ ಪಂದ್ಯ ಗೆದ್ದ ವಿಶ್ವದ ಕ್ರಿಕೆಟ್ ತಂಡದ ಮೊದಲ ನಾಯಕ ಎಂದೆನಿಸಿಕೊಂಡಿದ್ದಾರೆ.
ವಿರಾಟ್ ಕೊಹ್ಲಿಯ ಗೆಲುವಿನ ಸರಾಸರಿ ಶೇಕಡ 58.82 ಈ ಮೂಲಕ ಟೀಮ್ ಇಂಡಿಯಾ ಮಾತ್ರವಲ್ಲದೆ ಏಷ್ಯಾದಲ್ಲೇ ಟೆಸ್ಟ್ ಗೆಲುವಿನ ಯಶಸ್ವಿ ನಾಯಕ ಎನಿಸಿದ್ದಾರೆ.
ಇವುಗಳ ಹೊರತಾಗಿಯೂ ಕ್ರಿಕೆಟ್ ಜಗತ್ತಿನಲ್ಲಿ ವಿರಾಟ್ ಕೊಹ್ಲಿ ನಾಯಕದ ಹಲವಾರು ಹೆಗ್ಗುರುತುಗಳನ್ನು ನಾವು ಕಾಣಬಹುದು.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.


Latest News on WhatsApp

Send a Whatsapp message Startto this contact to get started. That’s it! We will send you your daily dose of positive news on Whatsapp!

Why Keelambi Media Lab Pvt Ltd ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

KLIVE at Google News App

KLIVE Android App on Google Play Store

Download the most loved Klive App for your Android phone or tablet.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

MESCOM ಅಕ್ಟೋಬರ್ 7 ರಂದು ಆಲ್ಕೊಳ‌ ಸುತ್ತಮುತ್ತ ವಿದ್ಯುತ್ ಸರಬರಾಜು ಇರುವುದಿಲ್ಲ

MESCOM ಶಿವಮೊಗ್ಗ ಅಕ್ಟೋಬರ್ 05 (ಕರ್ನಾಟಕ ವಾರ್ತೆ): ಶಿವಮೊಗ್ಗ...

Nehru Stadium Shimoga ಪ್ರಾಥಮಿಕ ಶಾಲಾಮಕ್ಕಳ ಕ್ರೀಡಾಕೂಟ ಉದ್ಘಾಟನೆ

Nehru Stadium Shimoga ನೆಹರು ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಉಪನಿರ್ದೇಶಕರ...

Shimoga Dasara 2024 ಶಿವಮೊಗ್ಗ ರಂಗದಸರಾದಲ್ಲಿ ಅ.5 ರಿಂದ ನಾಟಕ ಪ್ರದರ್ಶನಗಳ ಸುಗ್ಗಿ

Shimoga Dasara 2024 ಈ ಬಾರಿ ಶಿವಮೊಗ್ಗ ಮಹಾನಗರ ಪಾಲಿಕೆಯು ಆಯೋಜನೆ...

Shivamogga News ಕೆರೆ,ಕಟ್ಟೆ,ಹಳ್ಳ ಜಮೀನು ಇತರೆ ಸರ್ಕಾರದ ಸ್ವತ್ತು ಒತ್ತುವರಿ ಗಮನಕ್ಕೆ ಬಂದಾಕ್ಷಣ ಕ್ರಮ ಕೈಗೊಳ್ಳಿ-ನ್ಯಾ.ಬಿ.ಎ.ಪಾಟೀಲ್

Shivamogga News ಸರ್ಕಾರದ ಸ್ವತ್ತಿನ ಸಂರಕ್ಷಣೆ ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದ್ದು...