Friday, June 19, 2026
Friday, June 19, 2026

DVS College of Arts, Science and Commerce ಸಂಶೋಧನಾ ಕ್ಷೇತ್ರದಲ್ಲಿ ತೊಡಗಿಸಿಕೊಳ್ಳುವುದು ಅವಶ್ಯಕ :ವರುಣ್ ಕುಮಾರ್ ಆರ್.ಎಸ್

Date:

DVS College of Arts, Science and Commerce ಅಂತರಾಷ್ಟ್ರೀಯ ಮಟ್ಟದ ಮನ್ನಣೆಗಳನ್ನು ಪಡೆಯಲು ಮತ್ತು ಸಮಾಜಕ್ಕೆ ಕೊಡುಗೆ ನೀಡಲು ಸಂಶೋಧನಾ ಕ್ಷೇತ್ರವು ಅತ್ಯಂತ ಮಹತ್ವದ್ದಾಗಿದೆ ಎಂದು ಮಲೇಷ್ಯಾದ ಸನ್‌ವೇ ವಿಶ್ವವಿದ್ಯಾಲಯದ ಗಣಿತಶಾ ಸ್ತ್ರ ವಿಭಾಗದ ಉಪನ್ಯಾಸಕ ಡಾ. ವರುಣ್ ಕುಮಾರ್ ಆರ್.ಎಸ್. ಹೇಳಿದರು.

ರಾಷ್ಟ್ರೀಯ ವಿಜ್ಞಾನ ದಿನದ ಅಂಗವಾಗಿ ದೇಶೀಯ ವಿದ್ಯಾಶಾಲಾ ಸಮಿತಿಯ ಡಿವಿಎಸ್ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ಗಣಿತಶಾಸ್ತ್ರ ವಿಭಾಗ ಮತ್ತು ಐಕ್ಯೂಎಸಿ ವತಿಯಿಂದ ಆಯೋಜಿಸಿದ್ದ ಗಣಿತಶಾಸ್ತ್ರದಲ್ಲಿ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅವಕಾಶಗಳ ಕುರಿತು ವಿಶೇಷ ಉಪನ್ಯಾಸದಲ್ಲಿ ಮಾತನಾಡಿದರು.

ವಿದ್ಯಾರ್ಥಿಗಳು ಗಣಿತಶಾಸ್ತ್ರದಲ್ಲಿ ಇರುವ ಅವಕಾಶಗಳ ಬಗ್ಗೆ ಹೆಚ್ಚಿನ ಮಾಹಿತಿ ಹೊಂದಬೇಕು. ಅಂತರಾಷ್ಟ್ರೀಯ ಮಟ್ಟದಲ್ಲೂ ಸಾಧನೆ ಮಾಡಲು ಸಾಧ್ಯತೆಗಳಿವೆ. ಪದವಿ ಶಿಕ್ಷಣ ಪಡೆಯುತ್ತಿರುವ ಹಂತದಲ್ಲಿಯೇ ಪೂರಕ ಸಿದ್ಧತೆ ನಡೆಸಬೇಕು. ಹಂತ ಹಂತವಾಗಿ ಗುರಿ ಸಾಧಿಸಬೇಕು ಎಂದು ತಿಳಿಸಿದರು.

ಉಪನ್ಯಾಸದಲ್ಲಿ ಭಾರತ ಮತ್ತು ವಿದೇಶಗಳಲ್ಲಿನ ವಿಶ್ವವಿದ್ಯಾಲಯಗಳಲ್ಲಿನ ಉನ್ನತ ಶಿಕ್ಷಣ ಕೋರ್ಸ್ ಗಳ ಕುರಿತು ಬಿಎಸ್‌ಸಿ ವಿದ್ಯಾರ್ಥಿಗಳಿಗೆ ಉಪನ್ಯಾಸ ನೀಡಿದರು. ಸಂಶೋಧನೆಗಾಗಿ ಇರುವ ಫೆಲೋಶಿಪ್ ಯೋಜನೆಗಳನ್ನು ವಿವರಿಸಿದರು.

ಡಿವಿಎಸ್ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ಪ್ರಾಂಶುಪಾಲ ಡಾ. ಎಂ. ವೆಂಕಟೇಶ್ ಮಾತನಾಡಿ ಗಣಿತ ಮತ್ತು ತತ್ವಶಾಸ್ತ್ರದ ನಡುವಿನ ಸಂಬಂಧದ ಕುರಿತು ಕಾರ್ಯಕ್ರಮದ ಅಧ್ಯಕ್ಷೀಯ ಭಾಷಣದಲ್ಲಿ ವಿವರಿಸಿದರು. ಜೀವನದಲ್ಲಿ ಜಾಗತಿಕ ಮಟ್ಟಕ್ಕೆ ಬೆಳೆಯಲು ಗಣಿತಶಾಸ್ತ್ರದಲ್ಲಿ ಇರುವ ಅವಕಾಶಗಳ ಬಗ್ಗೆ ಮಾಹಿತಿ ನೀಡಿದರು.

DVS College of Arts, Science and Commerce ಗಣಿತಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಚಂದ್ರು ಕೆ. ಪ್ರಾಸ್ತಾವಿಕ ಮಾತನಾಡಿದರು. ಸಹಾಯಕ ಪ್ರಾಧ್ಯಾಪಕಿ ಲಾವಣ್ಯ ಟಿ.ಪಿ. ನಿರೂಪಿಸಿದರು. ಕಾರ್ಯಕ್ರಮದಲ್ಲಿ ಐಕ್ಯೂಎಸಿ ಸಂಯೋಜಕ ಎನ್.ಕುಮಾರಸ್ವಾಮಿ, ಮಲ್ಲಿಕಾರ್ಜುನ ಎ.ಎನ್., ಅನಿರುದ್ಧ ಎಸ್., ನಂದಿತಾ ಎ, ಅನು ಆರ್ ಗುರುಮೂರ್ತಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಆರೋಗ್ಯಕರ ವೃದ್ಧಾಪ್ಯಕ್ಕೆ ಯೋಗ ಸಹಕಾರಿ ಲೇ: ಡಾ.ಎಸ್.ಎಲ್.ಪಲ್ಲವಿ

Klive Special Article ಪ್ರತಿ ವರ್ಷ ಜೂನ್ 21ರಂದು ವಿಶ್ವದಾದ್ಯಂತ ಅಂತರಾಷ್ಟ್ರೀಯ...

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...