Thursday, September 17, 2026
Thursday, September 17, 2026

ಐ ಟಿ ಬಿಯಾoಡ್ ಬೆಂಗಳೂರು ಇನಿಶಿಯೇಟಿವ್‌ ಮತ್ತು ಕೈಗಾರಿಕಾ ಕ್ಲಸ್ಟರ್ ಸ್ಥಾಪನೆ ಸ್ವಾಗತ

Date:

ರಾಜ್ಯ ಸರ್ಕಾರ ಬಜೆಟ್ ನಲ್ಲಿ ವಾಣಿಜ್ಯ ಮತ್ತು ಕೈಗಾರಿಕಾ ಕ್ಷೇತ್ರಕ್ಕೆ ಸಂಬಂಧಿಸಿ ಪ್ರಮುಖ ಅಂಶಗಳನ್ನು ಘೋಷಿಸಿರುವುದು ಸ್ವಾಗತಾರ್ಹ ಎಂದು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಬಿ.ಗೋಪಿನಾಥ್ ತಿಳಿಸಿದ್ದಾರೆ.
ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ವಿಮಾನ ತಯಾರಿಕೆ ಮತ್ತು ಜೋಡಣೆ ಚಟುವಟಿಕೆಗಳನ್ನು ಪಿಪಿಪಿ ಮಾದರಿಯಲ್ಲಿ ಕೈಗೊಳ್ಳುವುದು. ಭದ್ರಾವತಿ ಇಎಸ್ಐ ಆಸ್ಪತ್ರೆ ಮೇಲ್ದರ್ಜೆಗೇರಿಸುವುದು. 2ನೇ ಮತ್ತು 3ನೇ ಶ್ರೇಣಿಯಲ್ಲಿ ಕೈಗಾರಿಕೆಗಳನ್ನು ಸ್ಥಾಪಿಸಲು ಕಂಪನಿಗಳನ್ನು ಪ್ರೋತ್ಸಾಹಿಸಲು ರಾಜ್ಯ ಸರ್ಕಾರದ ಬೆಂಗಳೂರು ಬಿಯಾಂಡ್ ಉಪಕ್ರಮಕ್ಕೆ ಆದ್ಯತೆ ನೀಡಿರುವುದು.
ರಾಜ್ಯಾದ್ಯಂತ ಎಂಎಸ್ಎಂಇಗಳಿಗೆ ಸಹಾಯ ಮಾಡಲು 15 ಕೋಟಿ ರೂ. ವೆಚ್ಚದಲ್ಲಿ 10 ಕೈಗಾರಿಕಾ ಕ್ಲಸ್ಟರ್ ಗಳನ್ನು ಸ್ಥಾಪಿಸುವುದು. ಪ್ರವಾಸೋದ್ಯಮ ಮತ್ತು ನಾವೀನ್ಯತಗೆ ಒತ್ತು ನೀಡಿರುವುದು. ಬೆಂಗಳೂರಿನಲ್ಲಿ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸಲು ಪ್ರಸ್ತಾವನೆ, ಬೆಂಗಳೂರಿನ ದಟ್ಟಣೆ ಕಡಿಮೆ ಮಾಡುವ ಗುರಿಯೊಂದಿಗೆ ಮೈಸೂರನ್ನು ರಾಜ್ಯದ ಎರಡನೇ ಐಟಿ ನಗರವನ್ನಾಗಿ ಅಭಿವೃದ್ಧಿಪಡಿಸಲು ನಿರ್ಧಾರ ಕೈಗೊಂಡಿರುವುದು.
ತಾಂತ್ರಿಕ ತರಬೇತಿ ಮೂಲಸೌಕರ್ಯವನ್ನು ಬಲಪಡಿಸಲು 60 ಕೋಟಿ ರೂ.ನಲ್ಲಿ 10 ಹೊಸ GTTC (ಸರ್ಕಾರಿ ಪರಿಕರ ಕೊಠಡಿ ಮತ್ತು ತರಬೇತಿ ಕೇಂದ್ರ) ಸೌಲಭ್ಯ ಸ್ಥಾಪನೆ ಮಾಡುವುದು. ಕೃಷಿಯಲ್ಲಿ 100 ಕೋಟಿ ರೂ. ಹೂಡಿಕೆಯೊಂದಿಗೆ ಮಿಲ್ಲೆಟ್ ಹಬ್ ಆರಂಭ, ರಾಗಿ ಉತ್ಪನ್ನಗಳನ್ನು ಉತ್ತೇಜಿಸಲು ರಾಗಿ ಹಬ್ ಸ್ಥಾಪನೆ ಮಾಡಲು ಕ್ರಮ ವಹಿಸುವುದು ಉತ್ತಮ ನಿರ್ಧಾರ ಎಂದು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...