Saturday, October 3, 2026
Saturday, October 3, 2026

Indian Cricket Team ವಿಶ್ವ ವಿಜೇತ ಭಾರತೀಯ ಕ್ರಿಕೆಟ್ ತಂಡಕ್ಕೆ ಸೀಎಂ ಸಿದ್ಧರಾಮಯ್ಯನವರಿಂದ ಅಭಿನಂದನೆ

Date:

Indian Cricket Team ವಿಶ್ವ ವಿಜೇತ ಭಾರತೀಯ ಕ್ರಿಕೆಟ್ ತಂಡಕ್ಕೆ ಅಭಿನಂದನೆಗಳು ಸೀಎಂ ಸಿದ್ಧರಾಮಯ್ಯ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಶುಭಾಶಯ ಕೋರಿದ್ದಾರೆ.

ಟಿ20 ವಿಶ್ವಕಪ್ ಪಂದ್ಯಾವಳಿಯ ಮೊದಲ ದಿನದಿಂದಲೇ ಚಾಂಪಿಯನ್ ಆಟವಾಡುತ್ತಾ ಬಂದಿದ್ದ ನಮ್ಮ ತಂಡ ಪ್ರಶಸ್ತಿಗೆ ಅತ್ಯಂತ ಅರ್ಹ ತಂಡವಾಗಿತ್ತು. ಯುವ ಆಟಗಾರರಿಂದಲೇ ತುಂಬಿದ್ದ ಈ ತಂಡ ಅನುಭವದಲ್ಲಿ ಕಡಿಮೆಯಿದ್ದರೂ, ಪ್ರತಿಭಾಶಾಲಿಗಳಿಂದ ಕೂಡಿತ್ತು. ತವರು ಪ್ರೇಕ್ಷಕರ ಬೆಂಬಲ, ಆಟಗಾರರ ಶ್ರಮ ಮತ್ತು ಕೋಟ್ಯಂತರ ಭಾರತೀಯರ ಹಾರೈಕೆ ವಿಶ್ವಕಪ್ ಕಿರೀಟವಾಗಿ ನಮ್ಮವರ ಮುಡಿ ಸೇರಿದೆ.

ಇಂದಿನ ಪಂದ್ಯದಲ್ಲಿ ಅಮೋಘ ಬ್ಯಾಟಿಂಗ್, ಅದ್ಭುತ ಬೌಲಿಂಗ್, ಅತ್ಯುತ್ತಮ ಕ್ಷೇತ್ರರಕ್ಷಣೆ ಹೀಗೆ ಪ್ರತಿಯೊಂದು ಕ್ಷೇತ್ರದಲ್ಲೂ ಭಾರತ ತಂಡ ಶ್ರೇಷ್ಠ ಪ್ರದರ್ಶನ ತೋರಿದೆ. ಉತ್ತಮ ಪ್ರದರ್ಶನ ನೀಡುತ್ತಾ ಫೈನಲ್ ಪಂದ್ಯದ ವರೆಗೆ ಬಂದಿರುವ ನ್ಯೂಜಿಲೆಂಡ್ ತಂಡದ ಸಾಧನೆ ಕೂಡ ಕಡಿಮೆಯೇನಲ್ಲ. ಅವರಿಗೂ ನನ್ನ ಅಭಿನಂದನೆಗಳು.

Indian Cricket Team ಕ್ರಿಕೆಟ್‌ ಜಗತ್ತಿನಲ್ಲಿ ಭಾರತದ ಕೀರ್ತಿ ಪತಾಕೆ ಮತ್ತೆ ಮುಗಿಲೆತ್ತರದಲ್ಲಿ ರಾರಾಜಿಸುತ್ತಿದೆ. ಭಾರತೀಯ ಕ್ರಿಕೆಟ್ ಇತಿಹಾಸದಲ್ಲಿ ಇದೊಂದು ಅವಿಸ್ಮರಣೀಯ ದಿನ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಮರೆಯಲಾಗದ ಮಹಾಶಯರು

Klive Special Article ಜೀವನದಲ್ಲಿ ವ್ಯಕ್ತಿಗಳು ಬಹಳ ನಮ್ಮ ಒಳಿತಿಗೆ...

JCI Shivamogga ಕುಟುಂಬ ಮಿಲನದಿಂದ ಬಾಂಧವ್ಯ ವೃದ್ಧಿ, ಪ್ರತಿಭೆ ಅನಾವರಣ: ವಿಜಯಲಕ್ಷ್ಮಿ ಕಡಂಬ

JCI Shivamogga ಜೆಸಿಐ ಶಿವಮೊಗ್ಗ ವಿವೇಕ್ ಸಂಸ್ಥೆಯ ವತಿಯಿಂದ ಸ್ನೇಹ ಮಿಲನ...

B.Y. Raghavendra ಮಾನವ ದೀರ್ಘಕಾಲ ಸಮತೋಲನದಿಂದ ಬದುಲು ಆಯುರ್ವೇದ ಸಹಕಾರಿ : ಬಿ.ವೈ.ರಾಘವೇಂದ್ರ

B.Y. Raghavendra ಆಯುರ್ವೇದ ಭಾರತದ ಅತ್ಯಂತ ಪ್ರಾಚೀನ ಮತ್ತು ಸಾಂಪ್ರದಾಯಿಕ ವೈದ್ಯಕೀಯ...