Thursday, June 18, 2026
Thursday, June 18, 2026

International Women’s Day ಒತ್ತಡರಹಿತ ಜೀವನಕ್ಕೆ ವ್ಯಾಯಾಮ, ಯೋಗ ಅಗತ್ಯ: ಡಾ. ಕೆ.ಎಸ್. ಪವಿತ್ರ

Date:

International Women’s Day ಕೃಷಿ ಮತ್ತು ತೋಟಗಾರಿಕಾ ವಿಜ್ಞಾನಗಳ ವಿಶ್ವವಿದ್ಯಾಲಯ, ಶಿವಮೊಗ್ಗದ ಮಹಿಳಾ ಘಟಕದ ವತಿಯಿಂದ ವಿಶ್ವವಿದ್ಯಾಲಯದ ಆವರಣದಲ್ಲಿ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಆಚರಿಸಲಾಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಶ್ರೀಧರ್ ನರ್ಸಿಂಗ್ ಹೋಂನ ಮನೋವೈದ್ಯೆ ಡಾ. ಕೆ.ಎಸ್. ಪವಿತ್ರ, ಮಹಿಳೆಯರು ವಿವಿಧ ಕ್ಷೇತ್ರಗಳಲ್ಲಿ ಕೆಲಸ ನಿರ್ವಹಿಸುವುದರಿಂದ ಒತ್ತಡದ ಜೀವನ ನಡೆಸುತ್ತಿದ್ದಾರೆ. ಆದ್ದರಿಂದ ಒತ್ತಡರಹಿತ ಜೀವನ ನಡೆಸುವುದು ಅತ್ಯಂತ ಮುಖ್ಯವಾಗಿದ್ದು, ನಿಯಮಿತ ವ್ಯಾಯಾಮ ಹಾಗೂ ಯೋಗಾಭ್ಯಾಸಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.

ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಮಾತನಾಡಿದ ಸೌಮ್ಯಾ ಪ್ರಸಾದ್, ಕೃಷಿ ಕ್ಷೇತ್ರದಲ್ಲಿ ಮಹಿಳೆಯರ ಪಾತ್ರ ಮಹತ್ವದ್ದಾಗಿದೆ. ಮಹಿಳೆಯರು ಆರ್ಥಿಕ, ಸಾಮಾಜಿಕ ಮತ್ತು ವೈಜ್ಞಾನಿಕ ಕ್ಷೇತ್ರಗಳಲ್ಲಿ ತಮ್ಮ ಸಾಮರ್ಥ್ಯವನ್ನು ತೋರಿಸುತ್ತಿದ್ದು, ಸ್ವಾವಲಂಬಿಯಾಗಿ ಬದುಕಲು ಪ್ರಯತ್ನಿಸಬೇಕು ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕೃಷಿ ವಿಶ್ವವಿದ್ಯಾಲಯದ ಕುಲಪತಿ ಡಾ. ಆರ್.ಸಿ. ಜಗದೀಶ್, ಮಹಿಳಾ ದಿನಾಚರಣೆ ಕೇವಲ ಆಚರಣೆಗೆ ಸೀಮಿತವಾಗದೆ ಮಹಿಳೆಯರ ಸಮಸ್ಯೆಗಳು, ಹಕ್ಕುಗಳು ಹಾಗೂ ಸಾಧನೆಗಳನ್ನು ಚರ್ಚಿಸುವ ವೇದಿಕೆಯಾಗಬೇಕು ಎಂದು ಅಭಿಪ್ರಾಯಪಟ್ಟರು. ಮಹಿಳೆಯರ ಸಾಧನೆಗೆ ಸಮಾಜದ ಎಲ್ಲರೂ ಗೌರವ ನೀಡಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಪ್ರಸ್ತಾವಿಕವಾಗಿ ಮಾತನಾಡಿದ ಪ್ರಾಧ್ಯಾಪಕಿ ಡಾ. ಜಯಲಕ್ಷ್ಮಿ ನಾರಾಯಣ ಹೆಗಡೆ, ಪ್ರತಿವರ್ಷ ವಿಶ್ವವಿದ್ಯಾಲಯದ ವತಿಯಿಂದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಆಚರಿಸಲಾಗುತ್ತಿದ್ದು, ಈ ದಿನದ ಉದ್ದೇಶ ಮಹಿಳೆಯರ ಹಕ್ಕುಗಳು ಹಾಗೂ ಸಾಧನೆಗಳನ್ನು ಗೌರವಿಸುವುದಾಗಿದೆ ಎಂದು ತಿಳಿಸಿದರು.

International Women’s Day ಈ ಸಂದರ್ಭದಲ್ಲಿ ವಿಶ್ವವಿದ್ಯಾಲಯದ ಮಹಿಳಾ ಘಟಕವನ್ನು ಉದ್ಘಾಟಿಸಲಾಯಿತು.

ಕಾರ್ಯಕ್ರಮದಲ್ಲಿ ಡಾ. ಜಿ.ಕೆ. ಗಿರಿಜೇಶ್ (ವಿಸ್ತರಣಾ ನಿರ್ದೇಶಕರು), ಡಾ. ಸಿ.ಜೆ. ಶ್ರೀಧರ್ (ಡೀನ್–ಸ್ನಾತಕೋತ್ತರ ಅಧ್ಯಯನ), ಡಾ. ನಾರಾಯಣ ಎಂ. ಮಾವರಕರ (ಡೀನ್–ವಿದ್ಯಾರ್ಥಿ ಕಲ್ಯಾಣ), ಡಾ. ಚಂದ್ರಶೇಖರ್ ಎಸ್.ವೈ. (ಪ್ರಚಾರ ವಿಶೇಷಾಧಿಕಾರಿ), ಆಹಾರ ಮತ್ತು ನಿರ್ವಹಣಾ ವಿಭಾಗದ ಪ್ರಾಧ್ಯಾಪಕರು ಮತ್ತು ಮುಖ್ಯಸ್ಥರು ಆದ ಜ್ಯೋತಿ ಎಂ ರಾಥೋಡ್ ಹಣಕಾಸು ನಿಯಂತ್ರಣಾಧಿಕಾರಿ ಪ್ರಿಯಾಂಕಾ ಸೇರಿದಂತೆ ಪ್ರಾಧ್ಯಾಪಕರು, ಸಿಬ್ಬಂದಿ, ವಿದ್ಯಾರ್ಥಿಗಳು ಮತ್ತು ವಿದ್ಯಾರ್ಥಿನಿಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಆರೋಗ್ಯಕರ ವೃದ್ಧಾಪ್ಯಕ್ಕೆ ಯೋಗ ಸಹಕಾರಿ ಲೇ: ಡಾ.ಎಸ್.ಎಲ್.ಪಲ್ಲವಿ

Klive Special Article ಪ್ರತಿ ವರ್ಷ ಜೂನ್ 21ರಂದು ವಿಶ್ವದಾದ್ಯಂತ ಅಂತರಾಷ್ಟ್ರೀಯ...

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...