Madhu Bangarappa ಸೊರಬ ತಾಲೂಕಿನ ಚಿತ್ರಟ್ಟೆಹಳ್ಳಿ ಕ್ರಾಸ್ ಬಳಿ ಕರ್ನಾಟಕ ರಾಜ್ಯ ಖನಿಜಗಳ ನಿಗಮ ನಿಯಮಿತದ (KSMCL) ಸಿ.ಎಸ್.ಆರ್ (CSR) ಅನುದಾನದಡಿ ಸುಮಾರು 20 ಲಕ್ಷ ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲಾಗುತ್ತಿರುವ ಗ್ರಾಮೀಣ ಬಸ್ ನಿಲ್ದಾಣದ ಕಾಮಗಾರಿಗೆ ಶಂಕುಸ್ಥಾಪನೆಯನ್ನ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ನೆರವೇರಿಸಿದರು.
ಗ್ರಾಮೀಣ ಭಾಗದ ಸಾರಿಗೆ ಸೌಕರ್ಯಕ್ಕೆ ಕಾಯಕಲ್ಪ ನೀಡುವ ನಿಟ್ಟಿನಲ್ಲಿ ಚಿತ್ರಟ್ಟೆಹಳ್ಳಿ ಕ್ರಾಸ್ ಭಾಗದ ಸಾರ್ವಜನಿಕರ ಹಾಗೂ ವಿದ್ಯಾರ್ಥಿಗಳ ಬಹುದಿನದ ಬೇಡಿಕೆಯನ್ನು ಈಡೇರಿಸಲಾಗುತ್ತಿದ್ದು, ವಿಶೇಷವಾಗಿ ಶಾಲಾ-ಕಾಲೇಜುಗಳಿಗೆ ತೆರಳುವ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಸಹಕಾರಿಯಾಗಲಿದೆ ಎಂದು ಸಚಿವ ಮಧು ಬಂಗಾರಪ್ಪ ಹೇಳಿದರು.
Madhu Bangarappa ಈ ಶಂಕುಸ್ಥಾಪನಾ ಕಾರ್ಯಕ್ರಮದಲ್ಲಿ ಸ್ಥಳೀಯ ಜನಪ್ರತಿನಿಧಿಗಳು, ಗ್ರಾಮಸ್ಥರು, ಕೆ.ಎಸ್.ಎಂ.ಸಿ.ಎಲ್ ನಿಗಮದ ಅಧಿಕಾರಿಗಳು ಹಾಗೂ ಗ್ರಾಮದ ಪ್ರಮುಖರು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು.
