Wednesday, September 16, 2026
Wednesday, September 16, 2026

Madhu Bangarappa ಮಾರ್ಚ್ 20 ರೊಳಗೆ ಉಪನ್ಯಾಸಕರ ಬ್ಯಾಂಕ್ ಖಾತೆಗೆ ಬಾಕಿ ಹಣ ಜಮಾಣೆ. ಮೌಲ್ಯಮಾಪನ ಬಹಿಷ್ಕರಿಸುವ ” ಬ್ಲಾಕ್ ಮೇಲ್ ” ತಂತ್ರ ಬೇಡ- ಮಧು ಬಂಗಾರಪ್ಪ

Date:

Madhu Bangarappa ಇಂದು ವಿಧಾನ ಪರಿಷತ್ತಿನ ಶೂನ್ಯ ವೇಳೆಯಲ್ಲಿ ಸನ್ಮಾನ್ಯ ಸದಸ್ಯರಾದ ಶ್ರೀ ಎಸ್.ಎಲ್. ಭೋಜೇಗೌಡ ಹಾಗೂ ಶ್ರೀ ಪುಟ್ಟಣ್ಣ ಅವರು ಪ್ರಸ್ತಾಪಿಸಿದ ದ್ವಿತೀಯ ಪಿಯುಸಿ ಮೌಲ್ಯಮಾಪನ ಮತ್ತು ಉಪನ್ಯಾಸಕರ ಬೇಡಿಕೆಗಳ ಕುರಿತು ಸರ್ಕಾರ ಸ್ಪಷ್ಟ ನಿಲುವು ಹೊಂದಿದೆ ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖಾ ಸಚಿವರು ಎಸ್. ಮಧು ಬಂಗಾರಪ್ಪನವರು ವಿಧಾನ ಪರಿಷತ್ ನಲ್ಲಿ ತಿಳಿಸಿದರು.

ಕಳೆದ ಮೂರು ವರ್ಷಗಳಿಂದ ಬಾಕಿ ಉಳಿದಿದ್ದ ಮೌಲ್ಯಮಾಪನ ಭತ್ಯೆಯನ್ನು ಬಿಡುಗಡೆ ಮಾಡಲು ಆರ್ಥಿಕ ಇಲಾಖೆ ಒಪ್ಪಿಗೆ ನೀಡಿದ್ದು, ಇದೇ ತಿಂಗಳ 20ನೇ ತಾರೀಖಿನೊಳಗೆ ಎಲ್ಲಾ ಉಪನ್ಯಾಸಕರ ಬ್ಯಾಂಕ್ ಖಾತೆಗಳಿಗೆ ಹಣ ಜಮಾವಣೆಯಾಗುವುದು. ಪಿಯು ಆಡಳಿತ ನಿಯಂತ್ರಣವನ್ನು ಜಿ.ಪಂ. ಸಿಇಒಗಳಿಗೆ ವಹಿಸುವ ಪ್ರಸ್ತಾವನೆಯನ್ನು ಸದ್ಯಕ್ಕೆ ನಮ್ಮ ಸರ್ಕಾರ ಕೈಬಿಟ್ಟಿದೆ. ಈ ಬಗ್ಗೆ ಶಿಕ್ಷಕರು ಆತಂಕಪಡುವ ಅಗತ್ಯವಿಲ್ಲ.

Madhu Bangarappa ಉಪನ್ಯಾಸಕರ ಸಮಸ್ಯೆಗಳನ್ನು ಆಲಿಸಲು ಸರ್ಕಾರದ ಬಾಗಿಲು ಸದಾ ತೆರೆದಿದೆ. ಆದರೆ, ಬೇಡಿಕೆಗಳಿಗಾಗಿ ಪರೀಕ್ಷಾ ಮೌಲ್ಯಮಾಪನವನ್ನು ಬಹಿಷ್ಕರಿಸುವಂತಹ ‘ಬ್ಲಾಕ್ ಮೇಲ್’ ತಂತ್ರಗಳನ್ನು ಸರ್ಕಾರ ಒಪ್ಪುವುದಿಲ್ಲ. ನಮಗೆ ನಮ್ಮ ರಾಜ್ಯದ ಲಕ್ಷಾಂತರ ಮಕ್ಕಳ ಹಿತದೃಷ್ಟಿ ಮತ್ತು ಅವರ ಭವಿಷ್ಯವೇ ಸರ್ವೋಚ್ಚ. ಶಿಕ್ಷಕರು ಮೌಲ್ಯಮಾಪನ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಪಾಲ್ಗೊಂಡು ವಿದ್ಯಾರ್ಥಿಗಳ ಭವಿಷ್ಯ ರೂಪಿಸಲು ಸಹಕರಿಸಬೇಕು ಎಂದು ವಿನಂತಿಸುತ್ತೇನೆ ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...