Monday, May 4, 2026
Monday, May 4, 2026

Department of Tourism ಶಿವಮೊಗ್ಗ ಜಿಲ್ಲೆಯಲ್ಲಿ ಮೊಬೈಲ್ ಕ್ಯಾಂಟೀನ್ ಆರಂಭಿಸಲು ಪ.ಜಾ/ ಪ.ವರ್ಗಗಳ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

Date:

Department of Tourism ಪ್ರವಾಸೋದ್ಯಮ ಇಲಾಖೆಯ ವತಿಯಿಂದ 2025-26ನೇ ಸಾಲಿನಲ್ಲಿ ರಾಜ್ಯದ ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರ ಅನುಕೂಲಕ್ಕಾಗಿ ಹಾಗೂ ಸಣ್ಣ ಉದ್ಯಮಿದಾರರನ್ನು ಉತ್ತೇಜಿಸುವ ಉದ್ದೇಶದಿಂದ ಮೊಬೈಲ್ ಕ್ಯಾಂಟೀನ್ ಯೋಜನೆಯನ್ನು ಜಾರಿಗೆ ತರಲಾಗಿದ್ದು, ಈ ಯೋಜನೆಯಡಿ ಶಿವಮೊಗ್ಗ ಜಿಲ್ಲೆಯ ನಿವಾಸಿಗಳಾಗಿರುವ ಪರಿಶಿಷ್ಟ ಜಾತಿಗೆ ಸೇರಿದ 06 ಅಭ್ಯರ್ಥಿಗಳು ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿದ 04 ಅಭ್ಯರ್ಥಿಗಳಿಗೆ ಮೊಬೈಲ್ ಕ್ಯಾಂಟೀನ್ ವಾಹನ ಖರೀದಿಸಲು ಸಹಾಯಧನ ನೀಡುವ ಉದ್ದೇಶದಿಂದ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ಮಾ. 23ರವರೆಗೆ ವಿಸ್ತರಿಸಲಾಗಿದೆ.

ಅರ್ಜಿ ಸಲ್ಲಿಸಲು 20 ರಿಂದ 55 ವರ್ಷದೊಳಗಿನವರಾಗಿದ್ದು, 10ನೇ ತರಗತಿ ಉತ್ತೀರ್ಣ ಪ್ರಮಾಣ ಪತ್ರ, ಆಧಾರ್ ಪ್ರತಿ, ಲಘು ವಾಹನ ಚಾಲನಾ ಪರವಾನಗಿ, ಚಾಲ್ತಿಯಲ್ಲಿರುವ ಜಾತಿ ಪ್ರಮಾಣ ಪತ್ರ, ಆದಾಯ ಪ್ರಮಾಣ ಪತ್ರ, ವಾಸಸ್ಥಳ ದೃಢೀಕರಣ ಪತ್ರ, ಬ್ಯಾಂಕ್‌ನಿಂದ ಸಾಲ ಪಡೆಯಲು ಅರ್ಹತೆ ಹೊಂದಿರುವ ಬಗ್ಗೆ ಮಂಜೂರಾತಿ/ದೃಢೀಕರಣ ಪತ್ರ ಹಾಗೂ ಇಲಾಖೆಯಿಂದ ನೀಡಲಾಗುವ ಕೌಶಲ್ಯಾಭಿವೃದ್ಧಿ ತರಬೇತಿಯನ್ನು ಕಡ್ಡಾಯವಾಗಿ ಪಡೆಯುವುದಾಗಿ ಪ್ರಮಾಣ ಪತ್ರ, ಯಾವುದೇ ಸರ್ಕಾರಿ ಇಲಾಖೆ ಅಥವಾ ನಿಗಮ/ಮಂಡಳಿಗಳಲ್ಲಿ ಖಾಯಂ ನೌಕರಿಯಾಗಿಲ್ಲವೆಂಬ ಸ್ವಯಂ ಘೋಷಣೆಯನ್ನು ಸಲ್ಲಿಸಬೇಕು ಮತ್ತು ಅರ್ಜಿಯೊಂದಿಗೆ ಸಲ್ಲಿಸುವ ಎಲ್ಲಾ ದಾಖಲಾತಿಗಳನ್ನು ಸ್ವಯಂ ದೃಢೀಕರಿಸಿ ಸಲ್ಲಿಸಬೇಕು.

Department of Tourism ಆಸಕ್ತ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರ ಕಛೇರಿ, ಪ್ರವಾಸೋದ್ಯಮ ಇಲಾಖೆ, ‘ಎ’ ಬ್ಲಾಕ್, 3ನೇ ತಿರುವು ಗೋಪಾಲಗೌಡ ಬಡಾವಣೆ, ಶಿವಮೊಗ್ಗ ಈ ಕಛೇರಿಯಿಂದ ಪಡೆದು ಭರ್ತಿ ಮಾಡಿದ ಅರ್ಜಿಯನ್ನು ಪೂರಕ ದಾಖಲೆಗಳೊಂದಿಗೆ ಮಾ.23 ರೊಳಗಾಗಿ ಸಲ್ಲಿಸುವಂತೆ ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ದೂ.ಸಂ.: 08182-251444 ನ್ನು ಸಂಪರ್ಕಿಸುವುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Shivamogga ವ್ಯಾಪಾರ ವೃದ್ಧಿಸಿಕೊಳ್ಳಲು ಡಿಜಿಟಲ್ ಮಾರ್ಕೆಟಿಂಗ್ ಸಹಕಾರಿ : ಜಿ.ಸುನೀಲ್‌ಕುಮಾರ್

Rotary Shivamogga ತಂತ್ರಜ್ಞಾನ ಮತ್ತು ವೈಜ್ಞಾನಿಕ ಯುಗದಲ್ಲಿ ವ್ಯಾಪಾರದಲ್ಲಿ ಯಶಸ್ಸು...

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...