Wednesday, March 18, 2026
Wednesday, March 18, 2026

ಎಸ್ಎಸ್ಎಲ್ ಸಿ ಪರೀಕ್ಷೆ ಸುಗಮ ನಡೆಯಲು ಸಕಲ ಸಿದ್ಧತೆ- ಪ್ರಭುಲಿಂಗ ಕವಳಿಕಟ್ಟಿ

Date:

ಶಿವಮೊಗ್ಗ ಜಿಲ್ಲೆಯಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯು 18.03.2026 ರಿಂದ 02.04.2026 ರವರೆಗೆ ಒಟ್ಟು 79 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಸುಗಮವಾಗಿ ಪರೀಕ್ಷೆಗಳನ್ನು ನಡೆಸಲು ಸಕಲ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿಗಳಾದ ಪ್ರಭುಲಿಂಗ ಕವಳಿಕಟ್ಟಿ ತಿಳಿಸಿದ್ದಾರೆ.

ಭದ್ರಾವತಿ-15 ಹೊಸನಗರ-7 ಸಾಗರ-9 ಶಿಕಾರಿಪುರ-11 ಶಿವಮೊಗ್ಗ-20 ಸೊರಬ-10 ಮತ್ತು ತೀರ್ಥಹಳ್ಳಿ-7 ಪರೀಕ್ಷಾ ಕೇಂದ್ರಗಳಿವೆ.

ರೆಗ್ಯುಲ‌ರ್ ಫ್ರೆಶ್, ರೆಗ್ಯುಲರ್ ರಿಪೀಟರ್, ರೆಗ್ಯುಲರ್ ಪ್ರೈವೇಟ್, ಪ್ರೈವೇಟ್ ರಿಪೀಟರ್ ಈ 4 ವಿಧದ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.
ಒಟ್ಟು 23,262 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ.

ಜಿಲ್ಲಾ ವ್ಯಾಪ್ತಿಯಲ್ಲಿ ಪರೀಕ್ಷಾ ಕಾರ್ಯ ನಿರ್ವಹಿಸುವ ಎಲ್ಲಾ, ಕಾರ್ಯನಿರತರು ಪರೀಕ್ಷೆಗಳನ್ನು ಸಕಲ ಸಿದ್ಧತೆಗಳೊಂದಿಗೆ ಪಾರದರ್ಶಕತೆಯಿಂದ ನಡೆಸಲು ಸಭೆ ನಡೆಸಿ ಸೂಚನೆ ನೀಡಲಾಗಿದೆ. ಪರೀಕ್ಷಾ ಅವ್ಯವಹಾರವನ್ನು ತಡೆಗಟ್ಟಲು ಜಿಲ್ಲಾ ಮಟ್ಟದಲಿ ಜಿಲ್ಲಾ, ವಿಚಕ್ಷಣ ದಳದ 3 ತಂಡಗಳನ್ನು ರಚನೆ ಮಾಡಲಾಗಿದೆ. ಡಯಟ್ ನಿಂದ ಜಾಗೃತದಳ ನೇಮಕ ಮಾಡಲಾಗಿದೆ. ಪ್ರತಿಯೊಂದು ಕೇಂದ್ರಕ್ಕೂ ಇತರೆ ಇಲಾಖೆಗಳಿಂದ ವೀಕ್ಷಕರನ್ನು ನಿಯೋಜಿಸಿದೆ.

ಪರೀಕ್ಷೆಯ ಸುಗಮ ನಿರ್ವಹಣೆಗಾಗಿ 79 ಪರೀಕ್ಷಾ ಕೇಂದ್ರಗಳಿಗೆ ಮುಖ್ಯ ಅಧೀಕ್ಷಕರು, ನಿಗದಿಪಡಿಸಿದ ಕೇಂದ್ರಗಳಿಗೆ ಉಪ ಮುಖ್ಯ ಅಧೀಕ್ಷಕರು, ಕಸ್ಟೋಡಿಯನ್, ಮಾರ್ಗಾಧಿಕಾರಿಗಳು ಹಾಗೂ ಎಲ್ಲಾ ಕೇಂದ್ರಗಳಿಗೂ ಸ್ಥಾನಿಕ ಜಾಗೃತ ದಳದ ಅಧಿಕಾರಿಗಳನ್ನಾಗಿ ಗ್ರೂಪ್ ” ಬಿ” ಅಧಿಕಾರಿಗಳನ್ನು ನಿಯೋಜಿಸಲಾಗಿದೆ.

ಜಿಲ್ಲಾ ಮಟ್ಟದಲ್ಲಿ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಲು ವಿಚಕ್ಷಣಾ ಜಾಗೃತ ದಳಗಳನ್ನು ರಚಿಸಿದ್ದು, ಪರೀಕ್ಷಾ ಕೇಂದ್ರಗಳಿಗೆ ಸಮಯಕ್ಕೆ ಸರಿಯಾಗಿ ಭೇಟಿ ನೀಡಿ ಪರೀಕ್ಷಾ ಅಕ್ರಮಗಳನ್ನು ತಡೆಗಟ್ಟಿ ನಿಯಮಾನುಸಾರ ಪರೀಕ್ಷೆ ನಡೆಯುತ್ತಿರುವುದನ್ನು ಗಮನಿಸಲು ಸೂಚಿಸಲಾಗಿದೆ.
ಪ್ರತಿ ಪರೀಕ್ಷಾ ಕೇಂದ್ರಗಳಿಗೆ ಒಬ್ಬ ಮೊಬೈಲ್ ಸ್ವಾಧೀನಾಧಿಕಾರಿಯನ್ನು ನೇಮಿಸಲಾಗಿದ್ದು ಮುಖ್ಯ ಅಧೀಕ್ಷಕರನ್ನು ಹೊರತುಪಡಿಸಿ ಬೇರೆ ಯಾವುದೇ ವ್ಯಕ್ತಿ ಮೊಬೈಲ್ ತೆಗೆದುಕೊಂಡು ಕೇಂದ್ರದೊಳಗೆ ಪ್ರವೇಶಿಸದಂತೆ ನಿರ್ಭಂಧಿಸಲು ಸೂಚಿಸಲಾಗಿದೆ.

ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಲಾಗಿದೆ.
ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ ಮತ್ತು ಸಮೀಪದಲ್ಲಿರುವ ಜೆರಾಕ್ಸ್ ಮತ್ತು ಕಂಪ್ಯೂಟರ್/ಸೈಬರ್ ಅಂಗಡಿಗಳನ್ನು ಮುಚ್ಚುವಂತೆ ಆದೇಶಿಸಲಾಗಿದೆ.

ಪರೀಕ್ಷಾ ಕಾರ್ಯಗಳಿಗೆ ಅಗತ್ಯವಿರುವ ವಾಹನಗಳ ಸೌಕರ್ಯಗಳನ್ನು ಒದಗಿಸಲು ಆರ್.ಟಿ.ಓ. ರವರಿಂದ ಅಗತ್ಯ ಕ್ರಮ ಕೈಗೊಳ್ಳಲಾಗಿದೆ.
ಎಲ್ಲಾ ಪರೀಕ್ಷಾ ಕೇಂದ್ರಗಳಿಗೆ ಅವಶ್ಯಕತೆಗೆ ಅನುಗುಣವಾಗಿ ಪೊಲೀಸ್ ಭದ್ರತೆಯನ್ನು ಒದಗಿಸಲು ಕ್ರಮವಹಿಸಲಾಗಿದೆ,
ಪರೀಕ್ಷೆ-1ಕ್ಕೆ ಜಿಲ್ಲೆಯ ಖಜಾನೆಯಲ್ಲಿ ಪರೀಕ್ಷಾ ಗೌಪ್ಯ ವಸ್ತುಗಳ ಠೇವಣಿ ಹಾಗೂ ಪರೀಕ್ಷಾ ಕೇಂದ್ರಗಳಿಗೆ ಗೌಪ್ಯ ವಸ್ತುಗಳ ವಿತರಣೆಯನ್ನು “ಕರ್ನಾಟಕ ಸೆಕ್ಯೂರ್ಡ್ ಎಕ್ಷಾಮಿನೇಷನ್ ಸಿಸ್ಟಮ್” ಅಡಿಯಲ್ಲಿ ಸುವ್ಯವಸ್ಥಿತವಾಗಿ ನಿರ್ವಹಿಸಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ.

ಪರೀಕ್ಷಾ ಗೌಪ್ಯ ವಸ್ತುಗಳನ್ನು ಠೇವಣಿಸಲಾದ ಖಜಾನೆಗಳಿಗೆ ಪೂರ್ಣಾವಧಿಯ ಸಶಸ್ತ್ರ ಪೊಲೀಸ್ ಪಹರೆಯನ್ನು ಒದಗಿಸಲಾಗಿದೆ.
ಹಿಂದಿನ ವರ್ಷಗಳಂತೆಯೇ ಮಾರ್ಚ್/ಏಪ್ರಿಲ್ 2026 ರ ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಸಂಬಂಧಿಸಿದಂತೆ ತಾಲ್ಲೂಕು ಖಜಾನೆಗಳಲ್ಲಿ ಪರೀಕ್ಷಾ ಗೌಪ್ಯ ವಸ್ತುಗಳನ್ನು ಠೇವಣಿಸಲಾಗಿದೆ.

ಪರೀಕ್ಷೆಗಳು ಪಾರದರ್ಶಕವಾಗಿ ನಡೆಯುತ್ತಿರುವುದನ್ನು ಗಮನಿಸಲು ಜಿಲ್ಲಾ ಹಂತದಲ್ಲಿ ಪ್ರತಿ 06 ಪರೀಕ್ಷಾ ಕೇಂದ್ರಗಳಿಗೆ ಒಬ್ಬರಂತೆ 15 ಸಿಬ್ಬಂದಿಗಳ ವೆಬ್ ಕಾಸ್ಟಿಂಗ್ ತಂಡವನ್ನು ರಚನೆ ಮಾಡಲಾಗಿದೆ.
ಪರೀಕ್ಷೆ ನಡೆಯುವ ಅವಧಿಯಲ್ಲಿ ವೆಬ್ ಕಾಸ್ಟಿಂಗ್ ಕಾರ್ಯ ಸುಗಮವಾಗಿ ನಡೆಯಲು ಪರೀಕ್ಷಾ ಕೇಂದ್ರಗಳಲ್ಲಿ ಮತ್ತು ವೆಬ್ ಕಾಸ್ಟಿಂಗ್ ವೀಕ್ಷಣೆ ನಡೆಯುವ ಕೊಡಚಾದ್ರಿ ಸಭಾಂಗಣ, ಜಿಲ್ಲಾ ಪಂಚಾಯತ್ ಶಿವಮೊಗ್ಗ ಇಲ್ಲಿಗೆ ಮೆಸ್ಕಾಂ ನವರು ನಿರಂತರ ವಿದ್ಯುತ್ ಸರಬರಾಜು ಒದಗಿಸಲು ಕ್ರಮವಹಿಸಿದೆ.

ಪರೀಕ್ಷೆ ನಡೆಯುವ ಅವಧಿಯಲ್ಲಿ ಪರೀಕ್ಷಾ ಪ್ರಕ್ರಿಯೆಯ ವೆಬ್ ಕಾಸ್ಟಿಂಗ್ ವೀಕ್ಷಣೆಯನ್ನು ಕೊಡಚಾದ್ರಿ ಸಭಾಂಗಣ, ಜಿಲ್ಲಾ, ಪಂಚಾಯತ್ ಶಿವಮೊಗ್ಗ ಇಲ್ಲಿ ನಡೆಸಲಾಗುವುದು.
ಪರೀಕ್ಷಾ ಕೇಂದ್ರಗಳಿಗೆ ದೂರದ ಊರುಗಳಿಂದ ಹಾಜರಾಗುವ ವಿದ್ಯಾರ್ಥಿಗಳಿಗೆ ಶಾಲೆಯಿಂದ ಪರೀಕ್ಷಾ ಕೇಂದ್ರಗಳಿಗೆ ಕೆ.ಎಸ್.ಆರ್.ಟಿ.ಸಿ. ಬಸ್ ವ್ಯವಸ್ಥೆ ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa “ಸಹ್ಯಾದ್ರಿ ಉತ್ಸವ” ಕ್ಕೆ ಸರ್ಕಾರವು ಮತ್ತೆ ಚಾಲನೆ ನೀಡಲು ಒತ್ತಾಯಿಸುತ್ತೇನೆ- ಶಾಸಕ ಎಸ್.ಎನ್. ಚನ್ನಬಸಪ್ಪ

S.N. Channabasappa ಶಿವಮೊಗ್ಗ ಜಿಲ್ಲೆಯ ಸಮೃದ್ಧ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯನ್ನು...

Madhu Bangarappa ಎಸ್ಎಸ್ಎಲ್ ಸಿ ಪರೀಕ್ಷಾರ್ಥಿಗಳಿಗೆ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

Madhu Bangarappa ರಾಜ್ಯಾದ್ಯಂತ ಇಂದಿನಿಂದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1...

Jawahar Navodaya Vidyalaya ಕುಂದಗಸವಿಯ ಎಂ.ಎನ್.ಅಪೂರ್ವ ನವೋದಯ ವಿದ್ಯಾಲಯಕ್ಕೆ ಆಯ್ಕೆ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯ ನಡೆಸುವ ಪ್ರಸಕ್ತ ಸಾಲಿನ...