Wednesday, March 18, 2026
Wednesday, March 18, 2026

ಜಿಲ್ಲೆಯಲ್ಲಿ ಅನಿಲ ಸಿಲಿಂಡರ್ ಗೆ ಕೊರತೆಯಿಲ್ಲ, ಗ್ರಾಹಕರು ಸಾಮಾಜಿಕ ಜಾಲತಾಣಗಳ ವದಂತಿ ನಂಬಬೇಡಿ- ಪ್ರಭುಲಿಂಗ ಕವಳಿಕಟ್ಟಿ

Date:

ಶಿವಮೊಗ್ಗ ಜಿಲ್ಲೆಯಲ್ಲಿ ಗೃಹ ಬಳಕೆಯ ಅನಿಲ ಸಿಲಿಂಡರ್‌ಗಳ ಸರಬರಾಜಿನಲ್ಲಿ ಯಾವುದೇ ವ್ಯತ್ಯಯ ಇರುವುದಿಲ್ಲ. ಈ ಕಾರಣದಿಂದ ಗ್ರಾಹಕರು ಸಾಮಾಜಿಕ ಜಾಲ ತಾಣಗಳಲ್ಲಿ ಹರಿದಾಡುತ್ತಿರುವ ವದಂತಿಗಳಿಗೆ ಕಿವಿಗೊಡಬಾರದು ಮತ್ತು ಗಾಬರಿ, ಆತಂಕ ಪಡದೇ ಹೆಚ್ಚುವರಿಯಾಗಿ ದಾಸ್ತಾನು ಮಾಡಿಕೊಳ್ಳಬಾರದೆಂದು ಜಿಲ್ಲಾಧಿಕಾರಿಗಳಾದ ಪ್ರಭುಲಿಂಗ ಕವಳಿಕಟ್ಟಿ ಜಿಲ್ಲೆಯ ಗ್ರಾಹಕರಿಗೆ ತಿಳಿಸಿದ್ದಾರೆ.

ಹೆಚ್ಚಿನ ಗ್ರಾಹಕರು ಒಂದು ರಿಫಿಲ್ಲಿಂಗ್ ಸಿಲಿಂಡರ್ ಪಡೆದ ನಂತರ ಸಿಂಗಲ್ ಗೃಹ ಬಳಕೆ ಸಿಲಿಂಡರ್‌ಗಾಗಿ 25 ದಿನಗಳ ಅಂತರದ ನಂತರ ಮತ್ತು ಡಬ್ಬಲ್ ಸಿಲಿಂಡರ್ ಗೃಹ ಬಳಕೆಯವರು 30 ದಿನಗಳ ನಂತರ ಮತ್ತೊಂದು ಸಿಲಿಂಡರ್‌ಗಾಗಿ ಬುಕ್ಕಿಂಗ್ ಮಾಡಬೇಕು. ಅದಕ್ಕೂ ಮುಂಚಿತವಾಗಿ ಬುಕ್ಕಿಂಗ್ ಮಾಡಬಾರದು. ಎಲ್.ಪಿ.ಜಿ ಅಡುಗೆ ಅನಿಲ ಸಿಲಿಂಡರ್‌ಗೆ ಸಂಬಂಧಿಸಿದಂತೆ ಉಪನಿರ್ದೇಶಕರು, ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಶಿವಮೊಗ್ಗ ಇಲ್ಲಿ ಸಹಾಯವಾಣಿಯನ್ನು ತೆರೆಯಲಾಗಿದ್ದು, ಮೊ.ಸಂ:9148267229 ಮತ್ತು 9844214270ಗೆ ಕರೆ ಮಾಡಿ ಗ್ರಾಹಕರು ಮಾಹಿತಿ ಪಡೆಯಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa “ಸಹ್ಯಾದ್ರಿ ಉತ್ಸವ” ಕ್ಕೆ ಸರ್ಕಾರವು ಮತ್ತೆ ಚಾಲನೆ ನೀಡಲು ಒತ್ತಾಯಿಸುತ್ತೇನೆ- ಶಾಸಕ ಎಸ್.ಎನ್. ಚನ್ನಬಸಪ್ಪ

S.N. Channabasappa ಶಿವಮೊಗ್ಗ ಜಿಲ್ಲೆಯ ಸಮೃದ್ಧ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯನ್ನು...

Madhu Bangarappa ಎಸ್ಎಸ್ಎಲ್ ಸಿ ಪರೀಕ್ಷಾರ್ಥಿಗಳಿಗೆ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

Madhu Bangarappa ರಾಜ್ಯಾದ್ಯಂತ ಇಂದಿನಿಂದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1...

Jawahar Navodaya Vidyalaya ಕುಂದಗಸವಿಯ ಎಂ.ಎನ್.ಅಪೂರ್ವ ನವೋದಯ ವಿದ್ಯಾಲಯಕ್ಕೆ ಆಯ್ಕೆ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯ ನಡೆಸುವ ಪ್ರಸಕ್ತ ಸಾಲಿನ...