Thursday, March 19, 2026
Thursday, March 19, 2026

Keladi Shivappa Nayaka Agriculture University ಮಾರ್ಚ್ 23 ರಿಂದ ನವಿಲೆ ಕೃಷಿ ಮಹಾವಿದ್ಯಾಲಯದಲ್ಲಿ ವಿಕಸಿತ ಭಾರತ ರಾಷ್ಟ್ರೀಯ ಸಮ್ಮೇಳನ.

Date:

Keladi Shivappa Nayaka Agriculture University ರಾಜ್ಯದಲ್ಲಿ ಮೊಟ್ಟ ಮೊದಲ ಬಾರಿಗೆ ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಭಾರತೀಯ ಅಲಂಕಾರಿಕ ತೋಟಗಾರಿಕೆ ಸಂಘ, ಐಸಿಎಆರ್-ಐಎಆರ್‌ಐ ನವದೆಹಲಿ, ಐಸಿಎಆರ್-ಪುಷ್ಪ ಕೃಷಿ ಸಂಶೋಧನಾ ನಿರ್ದೇಶನಾಲಯ ಪುಣೆ, ಬಾಗಲಕೋಟೆ ತೋಟಗಾರಿಕೆ ವಿಶ್ವವಿದ್ಯಾಲಯ ಹಾಗೂ ಐಸಿಎಆರ್-ಭಾರತೀಯ ತೋಟಗಾರಿಕೆ ಸಂಶೋಧನಾ ಸಂಸ್ಥೆ ಬೆಂಗಳೂರು ಈ ಸಂಸ್ಥೆಗಳ ಸಹಯೋಗದೊಂದಿಗೆ ಮಾರ್ಚ್ 23 ರಿಂದ 25 ರವರೆಗೆ ಶಿವಮೊಗ್ಗದ ನವಿಲೆ ಕೃಷಿ ಮಹಾವಿದ್ಯಾಲಯ ಆವರಣದಲ್ಲಿ ಮೂರು ದಿನಗಳ ಕಾಲ ವಿಕಸಿತ ಭಾರತ@2047ರ ಪುಷ್ಪ ಕೃಷಿ ಮತ್ತು ಭೂದೃಶ್ಯ ಕುರಿತ ರಾಷ್ಟ್ರೀಯ ಸಮ್ಮೇಳನ ಏರ್ಪಡಿಸಲಾಗಿದೆ.

ಈ ಸಮ್ಮೇಳನವು ಭಾರತದಲ್ಲಿನ ಪುಷ್ಪ ಕೃಷಿ ಮತ್ತು ಭೂದೃಶ್ಯ ವಲಯವನ್ನು ಬಲಪಡಿಸಲು, ವಿಚಾರಗಳನ್ನು ವಿನಿಮಯ ಮಾಡಿಕೊಳ್ಳಲು, ನಾವೀನ್ಯತೆಗಳನ್ನು ಪರಸ್ಪರ ಹಂಚಿಕೊಳ್ಳಲು ಹಾಗೂ ಹೊಸ ತಂತ್ರಜ್ಞಾನಗಳನ್ನು ಅನ್ವೇಷಿಸಲು ಒಂದು ಪ್ರಮುಖ ವೇದಿಕೆಯಾಗಲಿದೆ. ಈ ವಿಶಿಷ್ಟ ವಲಯದಲ್ಲಿನ ಸಂಶೋಧನೆ, ತಂತ್ರಜ್ಞಾನಗಳ ಅಳವಡಿಕೆ ಹಾಗೂ ಸುಸ್ಥಿರ ಅಭಿವೃದ್ಧಿಯನ್ನು ಮುನ್ನಡೆಸುವತ್ತ ಗಮನಾರ್ಹವಾಗಿ ಕೊಡುಗೆ ನೀಡುವಲ್ಲಿ ಈ ಸಮ್ಮೇಳನವನ್ನು ಆಯೋಜಿಸಲಾಗಿದೆ.

ಕರ್ನಾಟಕವು ಭಾರತದ ವಾಣಿಜ್ಯ ಪುಷ್ಪ ಕೃಷಿಯ ರಾಜಧಾನಿ ಎಂದೇ ಹೆಸರಾಗಿದೆ. ಅಂತಾರಾಷ್ಟ್ರೀಯ ಗುಣಮಟ್ಟದ ಹೂವುಗಳನ್ನು ವೈಜ್ಞಾನಿಕವಾಗಿ ಬೆಳೆದು ರಫ್ತು ಮಾಡುವ ಬೃಹತ್ ಉದ್ಯಮವಾಗಿ ಇದು ರಾಜ್ಯದಲ್ಲಿ ಬೆಳೆದಿದೆ. ಚೀನಾ ನಂತರ ಭಾರತವು ವಿಶ್ವದ ಎರಡನೇ ಅತಿದೊಡ್ಡ ಪುಷ್ಪಕೃಷಿ ಉದ್ಯಮವಾಗಿ ಬೆಳೆದಿದಿದೆ. ಈ ವಾಣಿಜ್ಯ ಪುಷ್ಪ ಕೃಷಿ ರಾಜ್ಯದ ಆರ್ಥಿಕತೆ, ಕೃಷಿ ವಲಯದ ಪ್ರಗತಿ ಮತು ಗ್ರಾಮೀಣಾಭಿವೃದ್ಧಿಯಲ್ಲಿ ಅತ್ಯಂತ ಪ್ರಮುಖ ಪಾತ್ರವನ್ನು ವಹಿಸುತ್ತಿದೆ. ಹವಾಮಾನ ವೈಪರೀತ್ಯ ಅಥವಾ ಮಾರುಕಟ್ಟೆ ಬೆಲೆ ಕುಸಿತದ ಸಂದರ್ಭದಲ್ಲಿ ಬಹುಬೆಳೆ ಪದ್ಧತಿಯಲ್ಲಿನ ಪುಷ್ಪ ಕೃಷಿಯು ರೈತರಿಗೆ ಆರ್ಥಿಕ ನಷ್ಟದ ಅಪಾಯವನ್ನು ತಗ್ಗಿಸುವಲ್ಲಿ ನೆರವಾಗುತ್ತದೆ.

ಬೆಂಗಳೂರಿನಲ್ಲಿರುವ ಅಂತಾರಾಷ್ಟ್ರೀಯ ಹೂವು ಹರಾಜು ಮಂಡಳಿ ಇಂಟರ್‌ನ್ಯಾಷನಲ್ ಫ್ಲವರ್ ಆಕ್ಷನ್ ಬೆಂಗಳೂರು(ಐಎಫ್‌ಎಬಿ) ಏಷ್ಯಾದಲ್ಲೇ ಮೊಟ್ಟಮೊದಲ ‘ಡಚ್ ಮಾದರಿ’ಯ ಹೂವಿನ ಹರಾಜು ಕೇಂದ್ರವಾಗಿದ್ದು, ಇದು ಮಧ್ಯವರ್ತಿಗಳ ಹಾವಳಿಯನ್ನು ತಪ್ಪಿಸಿ, ರೈತರಿಗೆ ತಾವು ಬೆಳೆದ ಹೂವುಗಳಿಗೆ ನೇರವಾಗಿ ಅತ್ಯುತ್ತಮ ಹಾಗೂ ಸ್ಪರ್ಧಾತ್ಮಕ ಬೆಲೆ ದೊರೆಯುತ್ತ್ತಿದೆ. ಕರ್ನಾಟಕವು ವಾಣಿಜ್ಯ ಪುಷ್ಪಗಳನ್ನು ರಫ್ತು ಮಾಡುವಲ್ಲಿ ಅಗ್ರಸ್ಥಾನದಲ್ಲಿದ್ದು, ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿರುವ ಶೀತಲೀಕರಣ ಘಟಕಗಳ ಮೂಲಕ ನೆದರ್ಲ್ಯಾಂಡ್, ಜಪಾನ್, ಆಸ್ಟ್ರೇಲಿಯಾ, ಯುಎಇ, ಮತ್ತು ಯುರೋಪ್ ರಾಷ್ಟ್ರಗಳಿಗೆ ಕೋಟ್ಯಂತರ ರೂಪಾಯಿ ಮೌಲ್ಯದ ಹೂವುಗಳು ರಫ್ತಾಗುತ್ತವೆ.

Keladi Shivappa Nayaka Agriculture University ಶಿವಮೊಗ್ಗ ಜಿಲ್ಲೆಯಲ್ಲಿ ಪುಷ್ಪ ಕೃಷಿಯನ್ನು ಹೆಚ್ಚಾಗಿ ಮಾಡಲಾಗುತ್ತ್ತಿದೆ. ಗುಲಾಬಿ, ಮಲ್ಲಿಗೆ, ಆಸ್ಟರ್, ಕನಕಾಂಬರ ಮತ್ತು ಸುಗಂಧರಾಜ ನಂತಹ ಹೂವಿನ ಬೆಳೆಗಳನ್ನು ಬೆಳೆಯಲಾಗುತ್ತಿದೆ. ಅಲ್ಲದೆ ಅಂಥೂರಿಯ ಮತ್ತು ಜರ್ಬೆರಾಕೂಡ ಬೆಳೆಯುತ್ತಿದ್ದಾರೆ. ಇವುಗಳನ್ನು ಹೆಚ್ಚಾಗಿ ಹಸಿರುಮನೆಗಳಲ್ಲಿ, ಪಾಲಿಹೌಸ್‌ಗಳಲ್ಲಿ ಬೆಳೆಯಲಾಗುತ್ತದೆ.

ಜೊತೆಗೆ ರಾಜ್ಯ ತೋಟಗಾರಿಕೆ ಇಲಾಖೆ ಶಿವಮೊಗ್ಗದಲ್ಲಿ “ಪುಷ್ಪ ಕೃಷಿಗಾಗಿ ಶ್ರೇಷ್ಠತಾಕೇಂದ್ರ”ವನ್ನು ಸ್ಥಾಪಿಸಿರುತ್ತದೆ. ಈ ಮೂಲಕ ಪುಷ್ಪ ಕೃಷಿ ಬೆಳೆಗಳನ್ನು ಅಭಿವೃದ್ಧಿಪಡಿಸುವಲ್ಲಿ ಹಾಗೂ ರೈತರಿಗೆ ತಾಂತ್ರಿಕ ಮಾಹಿತಿಯನ್ನು ಒದಗಿಸುತ್ತಿರುವುದುಆಶಾದಾಯಕ ಬೆಳವಣಿಗೆಯಾಗಿದೆ.
ಈ ಸಮ್ಮೇಳನದಲ್ಲಿ ಎರಡು ಪುಸ್ತಕಗಳನ್ನು ಬಿಡುಗಡೆಗೊಳಿಸಲಾಗುತ್ತಿದ್ದು, “ವಿಕಸಿತ ಭಾರತ@2047ರ ಪುಷ್ಪ ಕೃಷಿ ಮತ್ತು ಭೂ ವಿನ್ಯಾಸ್ಯ” ಕುರಿತ ಸ್ಮರಣ ಸಂಚಿಕೆಯನ್ನು ಹಾಗೂ “ಜಿಯೋಗ್ರಾಫಿಕಲ್ ಇಂಡಿಕೇಶನ್ ಫ್ಲರ‍್ಸ್ ಆಫ್ ಇಂಡಿಯಾ” ಎಂಬ ಕೃತಿಗಳನ್ನು ಬಿಡುಗಡೆಗೊಳಿಸಲಾಗುತ್ತಿದೆ.
ಈ ಸಮ್ಮೇಳನದಲ್ಲಿ ವಿಶೇಷವಾಗಿ 6 ಮಂದಿ ವಿಜ್ಞಾನಿಗಳಿಗೆ ಜೀವಮಾನ ಸಾಧನೆ ಪ್ರಶಸ್ತಿಯನ್ನು ನೀಡಿಗೌರವಿಸಲಾಗುತ್ತಿದೆ.

ಮೂರು ಮಂದಿ ಪುಷ್ಪ ಕೃಷಿ ವಿಜ್ಞಾನಿಗಳಿಗೆ ಲೋಟಸ್ ಪುಸ್ಕಾರ ನೀಡಿಗೌರವಿಸಲಾಗುತ್ತಿದೆ. ಸಣ್ಣ ರೈತ ವರ್ಗದ ಮೂರು ಮಂದಿ ಅತ್ಯುತ್ತಮ ಗುಲಾಬಿ ಬೆಳೆಗಾರರನ್ನು ಗುರುತಿಸಿ, ರೋಸ್ ಪುರಸ್ಕಾರ ಹಾಗೂ ದೊಡ್ಡ ಪ್ರಮಾಣದ ರೈತ ವರ್ಗದ ಮೂರು ಮಂದಿ ಅತ್ಯುತ್ತಮ ಗುಲಾಬಿ ಬೆಳೆಗಾರರು ಮತ್ತುರಫ್ತುದಾರರಿಗೆ ರೋಸ್ ಪುರಸ್ಕಾರ ನೀಡಿ ಗೌರವಿಸಲಾಗುತ್ತಿದೆ.

ಈ ಸಮ್ಮೇಳನದಲ್ಲಿ ಭಾರತೀಯ ಅಲಂಕಾರಿಕತೋಟಗಾರಿಕೆ ಸಂಘದ ವತಿಯಿಂದ 5 ಮಂದಿ ಪುಷ್ಪ ಕೃಷಿ ವಿಜ್ಞಾನಿಗಳಿಗೆ ಫೆಲೋಷಿಪ್ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುತ್ತಿದೆ. ಇಬ್ಬರು ಪಿಎಚ್.ಡಿ. ವಿದ್ಯಾರ್ಥಿಗಳಿಗೆ ಡಾಕ್ಟೋರಲ್ ಸಂಶೋಧನಾ ಪ್ರಬಂಧಕ್ಕೆ ಅತ್ಯುತ್ತಮ ಸಂಶೋಧನಾ ಪ್ರಬಂಧ ಪ್ರಶಸ್ತಿಯನ್ನು ಹಾಗೂ 4 ಮಂದಿ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಸ್ನಾತಕೋತ್ತರ ಸಂಶೋಧನಾ ಪ್ರಬಂಧಕೆ ಅತ್ಯುತ್ತಮ ಪ್ರಬಂಧ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುತ್ತಿದೆ.

ಈ ಸಂದರ್ಭದಲ್ಲಿ ಇಬ್ಬರಿಗೆ ಅತ್ಯುತ್ತಮ ಸಂಶೋಧನಾ ಪ್ರಬಂಧ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುವುದು.
ಈ ಸಮ್ಮೇಳನಕ್ಕೆ, ದೇಶದ ವಿವಿಧ ರಾಜ್ಯಗಳ 180ಕ್ಕೂ ಹೆಚ್ಚು ವಿದ್ಯಾರ್ಥಿಗಳು, ವಿಜ್ಞಾನಿಗಳು, ಕಾರ್ಪೂರೇಟರ್ ವಲಯದ ತಜ್ಞರು, ಪ್ರಗತಿಪರ ರೈತರು, ಉದ್ದಿಮೆದಾರರು, ಮಾರುಕಟ್ಟೆ ತಜ್ಞರು ಹಾಗೂ ಪುಷ್ಪ ಕೃಷಿ ರೈತರು, ಆಸಕ್ತರು ಭಾಗವಹಿಸಿ ಇದರ ಪ್ರಯೋಜನ ಪಡೆಯಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...