Sunday, August 2, 2026
Sunday, August 2, 2026

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Date:

Women’s Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಜೀವನ ಸಂಜೆ ವೃದ್ಧಾಶ್ರಮ ಗೋಪಾಳದಲ್ಲಿ ವಿಶೇಷವಾಗಿ ಆಚರಿಸಲಾಯಿತು.

ಈ ಸಂದರ್ಭದಲ್ಲಿ ವೈದ್ಯರಾದ ಪ್ರಿಯಾಂಕ ಚೌಹಾಣ್ ರವರು ಮಾತನಾಡಿ, ವೃದ್ಧಾಪ್ಯದಲ್ಲಿ ಬರಬಹುದಾದ ಸಾಮಾನ್ಯ ತೊಂದರೆಗಳು ಅದಕ್ಕೆ ಬೇಕಾದಂತಹ ಚಿಕಿತ್ಸೆಗಳನ್ನು ವಿಸ್ತಾರವಾಗಿ ತಿಳಿಸಿದರು.

ಭಾಗ್ಯಲಕ್ಷ್ಮಿ ಆಚಾರ್ ರವರು ಮಾತನಾಡಿ, ಮಹಿಳಾ ದಿನಾಚರಣೆಯನ್ನು ವೃದ್ಧಾಶ್ರಮದಲ್ಲಿ ಆಚರಿಸುವುದು ಅತ್ಯಂತ ಅರ್ಥಪೂರ್ಣ ಮತ್ತು ಮನಸಿಗೆ ಹತ್ತಿರವಾಗಿರುವ ಕಾರ್ಯವಾಗಿದೆ. ಸಮಾಜದಲ್ಲಿ ತಮ್ಮ ಜೀವನವನ್ನು ಕುಟುಂಬಕ್ಕೆ ಅರ್ಪಿಸಿದ ಅನೇಕ ವೃದ್ಧ ಮಹಿಳೆಯರು ವೃದ್ಧಾಶ್ರಮಗಳಲ್ಲಿ ವಾಸಿಸುತ್ತಿದ್ದಾರೆ. ಈ ವಿಶೇಷ ದಿನದಂದು ಅವರನ್ನು ಸ್ಮರಿಸಿ ಗೌರವಿಸುವುದು ನಮ್ಮ ಕರ್ತವ್ಯ ಎಂದು ತಿಳಿಸಿದರು.

ಸಹನ.ಇ.ವಿ. ಅವರು ಮಾತನಾಡಿ, ಪ್ರಸ್ತುತ ಹೆಣ್ಣು ಮಕ್ಕಳು ಸಾಕಷ್ಟು ಸಂಖ್ಯೆಯಲ್ಲಿ ಹೊರ ಪ್ರಪಂಚಕ್ಕೆ ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕೆಂದು ಸಲಹೆ ನೀಡಿದರು.

Women’s Day ಕಾರ್ಯಕಮ್ರದ ಅಧ್ಯಕ್ಷತೆ ವಹಿಸಿದ್ದ ಪೃಥ್ವಿ ನಾಗರಾಜ್ ಅವರು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ವಿಶೇಷತೆಯ ಕುರಿತು ಹೇಳಿದರು.

ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ವೈದ್ಯರಾದ ಪ್ರಿಯಾಂಕಾ ಚೌಹಾಣ್ ಹಾಗೂ ಗೌರವಾನ್ವಿತ ಅತಿಥಿಗಳಾಗಿ ಶ್ರೀಮತಿ ಸಹನಾ.ಇ.ವಿ., ನಿವೃತ್ತ ಪ್ರಾಂಶುಪಾಲೆ ಭಾಗ್ಯಲಕ್ಷ್ಮಿ ಆಚಾರ್, ಯಶೋದಮ್ಮನವರು ಹಾಗೂ ವಲಯ ಉಪಾಧ್ಯಕ್ಷರಾದ ಕುಮಾರ್ ಬೆಣ್ಣಿ, ಪೂರ್ವ ಅಧ್ಯಕ್ಷರಾದ ರುದ್ರೇಶ್ ಕೋರಿ ಹಾಗೂ ಕಾರ್ಯದರ್ಶಿ ಮಮತಾ ವಿ ಶಾನ್ಬೋಗ್, ಮಕ್ಕಳ ವಿಭಾಗದ ಜೆಸಿ ಕನಿಷ್ಕ.ವಿ, ಜೀವನ ಸಂಜೆ ವೃದ್ಧಾಶ್ರಮದ ಮುಖ್ಯಸ್ಥರಾದ ಹಾಲಪ್ಪನವರು ಹಾಗೂ ಚಿರಂತನದ ಎಲ್ಲಾ ಸದಸ್ಯರು ಭಾಗವಹಿಸಿದ್ದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...