Ripponpet News ರಿಪ್ಪನ್‌ಪೇಟೆಯ ಶಿವಮೊಗ್ಗ ರಸ್ತೆಯಲ್ಲಿರುವ ಹೆಚ್‌ಪಿ ಪೆಟ್ರೋಲ್ ಬಂಕ್‌ನಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಗಾಗಿ ಜನರು ಮುಗಿಬಿದ್ದಿದ್ದು,
ಗಂಟೆಗಳ ಕಾಲ ಸಾಲಿನಲ್ಲಿ ನಿಂತು ಗ್ರಾಹಕರು ಇಂಧನ ಪಡೆದುಕೊಳ್ಳುತ್ತಿರುವ ದೃಶ್ಯ ಕಂಡುಬಂದಿವೆ.
ರಿಪ್ಪನ್‌ಪೇಟೆಯಲ್ಲಿ ಒಟ್ಟು ನಾಲ್ಕು ಪೆಟ್ರೋಲ್ ಬಂಕ್‌ಗಳು ಕಾರ್ಯನಿರ್ವಹಿಸುತ್ತಿವೆ.
ಅವುಗಳಲ್ಲಿ ಮೂರು ಬಂಕ್‌ಗಳಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಸಂಪೂರ್ಣ ಖಾಲಿ ಎಂಬ ಆತಂಕ ಮೂಡಿದೆ.
Ripponpet News ಈ ಹಿನ್ನೆಲೆ ಶಿವಮೊಗ್ಗ ರಸ್ತೆಯ ಹೆಚ್‌ಪಿ ಬಂಕ್ ನಲ್ಲಿ ಮಾತ್ರ ಇಂಧನ ಲಭ್ಯವಿದ್ದ ಕಾರಣ ಜನರು ದೌಡಾಯಿಸಿದ್ದಾರೆ.
ಕೆಲವರು ಖಾಲಿ ಬಾಟಲ್‌ಗಳು ಹಾಗೂ ಕ್ಯಾನ್‌ಗಳನ್ನು ತಂದು ಹೆಚ್ಚಿನ ಪ್ರಮಾಣದಲ್ಲಿ ಪೆಟ್ರೋಲ್ ಸಂಗ್ರಹ ಮಾಡುತ್ತಿದ್ದಾರೆ.
ಇದರಿಂದ ಇಂಧನ ಕೊರತೆ ಇನ್ನಷ್ಟು ತೀವ್ರವಾಗ ಬಹುದು ಎಂದು ಸ್ಥಳೀಯರು ಆತಂಕಗೊಂಡಿರುವುದು ವ್ಯಕ್ತವಾಗುತ್ತದೆ.
