Shivamogga-Bangalore Train ಬೆಂಗಳೂರು ಮತ್ತು ತಾಳಗುಪ್ಪ ನಡುವೆ ಸಂಚರಿಸುವ ರೈಲು ಸಂಖ್ಯೆ 20651/20652 ಕ್ಕೆ ಇಂದಿನಿಂದ (ಮಾರ್ಚ್ 26, 2026) ಅತ್ಯಾಧುನಿಕ ಸೌಲಭ್ಯವುಳ್ಳ ಹೊಸ ಎಲ್‌ಎಚ್‌ಬಿ (LHB) ಬೋಗಿಗಳನ್ನು ಅಳವಡಿಸಿ ಚಾಲನೆ ನೀಡಲಾಗಿದೆ.
ನಮ್ಮ ಶಿವಮೊಗ್ಗ ಕ್ಷೇತ್ರದ ಜನರ ರೈಲ್ವೆ ಬೇಡಿಕೆಗಳನ್ನು ಈಡೇರಿಸಲು ಸತತವಾಗಿ ಶ್ರಮಿಸುತ್ತಿರುವ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರಿಗೆ, ಕೇಂದ್ರ ರೈಲ್ವೆ ಸಚಿವ ಶ್ರೀ ಅಶ್ವಿನಿ ವೈಷ್ಣವ್ ಅವರಿಗೆ ಹಾಗೂ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವರಾದ ಶ್ರೀ ವಿ. ಸೋಮಣ್ಣ ಅವರಿಗೆ ಶಿವಮೊಗ್ಗ ಸಂಸದರಾದ ಬಿ.ವೈ. ರಾಘವೇಂದ್ರ ಅವರು ಹೃತ್ಪೂರ್ವಕ ಧನ್ಯವಾದ ಹೇಳಿದ್ದಾರೆ.
