Saturday, July 11, 2026
Saturday, July 11, 2026

Adichunchabagiri Education Trust ದೇಹ ಆರೋಗ್ಯವಾಗಿದ್ದರೆ, ದೇಶವೂ ಆರೋಗ್ಯ- ಶ್ರೀನಾದಮಾಯಾನಂದನಾಥಶ್ರೀ

Date:

ದೇಹದ ಆರೋಗ್ಯ ಉತ್ತಮವಾಗಿದ್ದರೆ, ದೇಶದ ಆರೋಗ್ಯವೂ ಚೆನ್ನಾಗಿರುತ್ತದೆ ಎಂದು ಶ್ರೀ ಆದಿ ಚುಂಚನಗಿರಿ ಶಾಖಾ ಮಠದ ಪೂಜ್ಯ ಶ್ರೀ ಶ್ರೀ ನಾದಮಯಾನಂದನಾಥ ಸ್ವಾಮೀಜಿ ಹೇಳಿದರು.
ಅವರು ಇಂದು ಭಾರತ ಸರ್ಕಾರ, ಆಯುಷ್ ಸಚಿವಾಲಯ, ಮೊರಾರ್ಜಿ ದೇಸಾಯಿ ರಾಷ್ಟ್ರೀಯ ಯೋಗ ಸಂಸ್ಥೆ, ನವದೆಹಲಿ, ಶ್ರೀ ಆದಿಚುಂಚಬಗಿರಿ ಶಿಕ್ಷಣ ಟ್ರಸ್ಟ್ (ರಿ) ಶಿವಮೊಗ್ಗ. ಹಾಗೂ ಶ್ರೀ ವೇದವ್ಯಾಸ ಯೋಗ ಪ್ರತಿಷ್ಠಾನ (ರಿ), ಮೈಸೂರು ಇವರ ಸಹಯೋಗದೊಂದಿಗೆ ಇಂದು ಶರಾವತಿ ನಗರದ ಶ್ರೀ ಆದಿಚುಂಚನಗಿರಿ ಶಿಕ್ಷಣ ಸಂಸ್ಥೆಯಲ್ಲಿ ರಾಷ್ಟ್ರೀಯ ಯೋಗೋತ್ಸವ – ೨೦೨೬ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಆಶೀರ್ವಚನ ನೀಡಿದ ಅವರು, ಅಂತರಾಷ್ಟ್ರೀಯ ಯೋಗ ದಿನಾಚರಣೆ ಹಾಗೂ ಯೋಗ ಶಿಬಿರವನ್ನು ಉದ್ಘಾಟಿಸಿದರು. ಪ್ರತಿಯೊಬ್ಬರ ಆರೋಗ್ಯ ಚೆನ್ನಾಗಿದ್ದರೆ ಸದೃಢವಾದ ಮತ್ತು ಭವ್ಯ ಭಾರತವನ್ನು ಕಟ್ಟಬಹುದಾಗಿದೆ ಎಂದು ಹೇಳಿದರು.
ಪ್ರಸ್ತುತ ದಿನಮಾನಗಳಲ್ಲಿ ಶುದ್ದವಾದ ಗಾಳಿಗೂ ಕೂಡ ಪರಿತಪಿಸುವಂತಾಗಿದೆ. ಶ್ವಾಸ ನಿಶ್ವಾಸದ ಮೇಲೆ ನಮ್ಮ ಬದುಕು ನಿಂತಿದೆ. ಸರಿಯಾದ ಮಾರ್ಗದರ್ಶನದಲ್ಲಿ ನಾವುಗಳೂ ಯೋಗಾಭ್ಯಾಸ ಮಾಡಿದ್ದೇ ಆದರೆ ಯಾವುದೇ ಮದ್ದಿಲ್ಲದೇ ರೋಗವನ್ನು ಹೋಗಲಾಡಿಸಬಹುದಾಗಿದೆ. ಆದ್ದರಿಂದ ಪ್ರತಿಯೊಬ್ಬರೂ ಯೋಗದ ಅಭ್ಯಾಸವನ್ನು ಮಾಡಿಕೊಳ್ಳಬೇಕು ಎಂದರು.
ಯೋಗಾಭ್ಯಾಸ ಜೀವನದ ಅವಿಭಾಜ್ಯ ಅಂಗವಾಗಿದೆ ಎಂದು ಆಗ ಮಾತ್ರ ನಮ್ಮ ದೇಹ ಗಟ್ಟಿಮುಟ್ಟಾಗಿದೆ ಎಂದು ಹೇಳಿದರು.
ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದ , ಮೈಸೂರಿನ ಶ್ರೀ ವೇದವ್ಯಾಸ ಯೋಗ ಪ್ರತಿಷ್ಠಾನದ ಅಧ್ಯಕ್ಷ ಡಾ. ವಸಂತಕುಮಾರ್ ಪೈ Adichunchabagiri Education Trust ಅವರು ಈ ಕಾರ್ಯಕ್ರಮಕ್ಕೆ ಶುಭ ಪ್ರಶಂಸೆಗೈಯುತ್ತಾ ವಿಶ್ವಮಾನ್ಯತೆ ಪಡೆದ ಯೋಗಕ್ಕೆ ಈಗ ಯೋಗ ಬಂದಿದೆ ಎಂದರು. ಯೋಗದಿಂದ ಸ್ವಾಸ್ಥ್ಯದ ಜೊತೆಗೆ, ಸರ್ವಾಂಗೀಣ ವ್ಯಕ್ತಿತ್ವವನ್ನು ನಿರ್ಮಿಸಿಕೊಳ್ಳಲು ಸಾಧ್ಯ ಎಂದರು.
ರಾಷ್ಟ್ರೀಯ ಯೋಗ ಸಂಚಾಲಕ ರಾಘವೇಂದ್ರ ಪೈ ಪ್ರಾಸ್ತಾವಿಕವಾಗಿ ಮಾತನಾಡಿ, ಸಾಮೂಹಿಕ ಯೋಗಾಭ್ಯಾಸ, ಯೋಗ ವಿಚಾರ ಸಂಕಿರಣ. ಯೋಗ ಪ್ರದರ್ಶನ,ಯೋಗದಿಂದ ಆಗುವ ಪ್ರಯೋಜನಗಳ ಬಗ್ಗೆ ಸವಿಸ್ತಾರ ಬಗ್ಗೆ ತಿಳಿಸಿದರು.
ಇಂದು ಯೋಗದಲ್ಲಿ ೪೦೦ ಕ್ಕೂ ಹೆಚ್ಚಿನ ಯೋಗಪಟುಗಳು ಭಾಗವಹಿಸಿದ್ದರು. ಭಾಗವಹಿಸಿದ ಎಲ್ಲರಿಗೂ ಪ್ರಶಸ್ತಿ ಪತ್ರಗಳನ್ನು ನೀಡಿ ಗೌರವಿಸಲಾಯಿತು.
ಇದೇ ಸಂಧರ್ಭದಲ್ಲಿ ಸಂದರ್ಭದಲ್ಲಿ ಯೋಗಪಟುಗಳಾದ ಶ್ರೀ ಬ.ಮ. ಶ್ರೀಕಂಠ ಇವರಿಗೆ ಯೋಗಭೂಷಣ ಪ್ರಶಸ್ತಿ ಹಾಗೂ ಡಾ. ಮಣೂರು ಪ್ರಭಾಕರ ಪ್ರಭು ಇವರಿಗೆ ಕರ್ಮಯೋಗ ಭೂಷಣ ಪ್ರಶಸ್ತಿಯನ್ನು ಜೀವಮಾನದ ಸಾಧನೆಗಾಗಿ ರಾಷ್ಟ್ರೀಯ ಪುರಸ್ಕಾರವನ್ನು ನೀಡಿ ಗೌರವಿಸಲಾಯಿತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Drinking Water Supplier Shivamogga ಶಿವಮೊಗ್ಗ ಕೆ.ಆರ್. ಜಲಶುದ್ಧೀಕರಣ ಘಟಕ ದುರಸ್ತಿ.: ಕುಡಿಯುವ ನೀರು ಸರಬರಾಜಿನಲ್ಲಿ ಅನಿರ್ದಿಷ್ಟ ಅವಧಿ ವ್ಯತ್ಯಯ.

Drinking Water Supplier Shivamogga ಶಿವಮೊಗ್ಗ ನಗರದ ಕೃಷ್ಣರಾಜೇಂದ್ರ ಜಲಶುದ್ಧೀಕರಣ ಘಟಕದಲ್ಲಿರುವ...

Rotary Shivamogga ಪರಿಸರ ಮಾಲಿನ್ಯದಿಂದಾಗಿ ನಮ್ಮ ಜೀವಿತ ಅವಧಿಕಡಿಮೆಯಾಗುತ್ತಿದೆ- ಡಿ.ಕೆ.ಶೇಷಗಿರಿ.

Rotary Shivamogga ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಆದ್ಯ ಕರ್ತವ್ಯ ಪರಿಸರವನ್ನು ಸರಿಯಾಗಿ ಸಂರಕ್ಷಣೆ...