Friday, August 28, 2026
Friday, August 28, 2026

ಉಪನ್ಯಾಸಕ ಸುರೇಶ್ ಅವರ ದಾರುಣ ಮರಣ.ಸುಟ್ಟು ಕರುಕಲಾದ ಸ್ಥಿತಿಯಲ್ಲಿ ದೇಹ ಪತ್ತೆ

Date:

ಅಡಿಕೆ ತೋಟವೊಂದರಲ್ಲಿ ಖಾಸಗಿ ಕಾಲೇಜಿನ ಉಪನ್ಯಾಸಕರೊಬ್ಬರ ಮೃತದೇಹ ಸಂಪೂರ್ಣ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಈ ಘಟನೆ ಹೊಳೆಹೊನ್ನೂರು ಸಮೀಪದ ಹನುಮಂತಾಪುರದಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಸುರೇಶ್ ಕುಮಾರ್ ಎಂದು ಗುರುತಿಸಲಾಗಿದ್ದು, ಇವರು ಶಿವಮೊಗ್ಗದ ಖಾಸಗಿ ಕಾಲೇಜೊಂದರಲ್ಲಿ ಉಪನ್ಯಾಸಕರಾಗಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ.

ಶನಿವಾರ ಮನೆಯಿಂದ ಹೊರಟಿದ್ದ ಶಿವಕುಮಾ‌ರ್ ಅವರು ಮನೆಯವರಿಗೆ ಮದುವೆ ಕಾರ್ಯಕ್ರಮಕ್ಕೆ ಹೋಗುತ್ತಿರುವುದಾಗಿ ಹೇಳಿದ್ದರು ಎನ್ನಲಾಗಿದೆ.

ಆದರೆ, ಭಾನುವಾರ ಬೆಳಿಗ್ಗೆ ಅವರದೇ ಅಡಿಕೆ ತೋಟದಲ್ಲಿ ಸುಟ್ಟ ಸ್ಥಿತಿಯಲ್ಲಿದ್ದ ಶವ ಪತ್ತೆಯಾಗಿದ್ದು, ಘಟನೆ ಹಲವು ಅನುಮಾನಗಳನ್ನು ಹುಟ್ಟು ಹಾಕಿದೆ. ಅವರ ತೋಟದಲ್ಲೇ ಶವ ಬೆಂಕಿ ಹೊತ್ತಿ ಉರಿಯುತ್ತಿರುವ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಅಕ್ಕಪಕ್ಕದ ತೋಟದವರು ಬೆಂಕಿಯಲ್ಲಿ ದೇಹ ಉರಿಯುತ್ತಿರುವುದನ್ನು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕಾಗಮಿಸಿದ ಹೊಳೆಹೊನ್ನೂರು ಠಾಣೆ ಪೊಲೀಸರು ಬೆಂಕಿ ನಂದಿಸಿದ್ದಾರೆ. ಅಷ್ಟರಲ್ಲಾಗಲೇ ಮೃತದೇಹ ಭಾಗಶಃ ಸುಟ್ಟು ಕರಕಲಾಗಿತ್ತು ಎನ್ನಲಾಗಿದೆ. ಸ್ಥಳಕ್ಕೆ ಜಿಲ್ಲಾ ರಕ್ಷಣಾಧಿಕಾರುಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸ್ಥಳದಲ್ಲೇ ಮೃತ ವ್ಯಕ್ತಿಯ ಬೈಕ್ ಮತ್ತು ಬ್ಯಾಗ್‌’ನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಕಾ.ತ.ಚಿಕ್ಕಣ್ಣನವರ ‘ಮನಸು ಮುಗಿಲು’

-ಡಾ. ರವಿ ಎಂ. ಸಿದ್ಲಿಪುರ Klive Special Article ಕನ್ನಡ ಸಣ್ಣಕಥಾ ಪರಂಪರೆಯಲ್ಲಿ...

Rotary Club Shimoga ಇಂಟರಾಕ್ಟ್ ಕ್ಲಬ್ ಗಳು ವಿದ್ಯಾರ್ಥಿಗಳಿಗೆ ವ್ಯಕ್ತಿತ್ವ ವಿಕಸನಕ್ಕೆ ಅತ್ಯುತ್ತಮ ವೇದಿಕೆ: ಸುಮತಿ ಜಿ.ಕುಮಾರಸ್ವಾಮಿ

Rotary Club Shimoga ಇಂಟರಾಕ್ಟ್ ಕ್ಲಬ್‌ಗಳು ವಿದ್ಯಾರ್ಥಿಗಳಿಗೆ ಶಾಲಾ ಹಂತದಲ್ಲಿಯೇ ಸಾರ್ವಜನಿಕ...

S.N. Channabasappa “ಮನರಂಜನೆ” ಮನುಷ್ಯ ಜೀವನದ ಭಾಗ.ಆ ಸಾಂಸ್ಕೃತಿಕ ಸೊಬಗು ಜೀವನದಲ್ಲಿ ಅಡಕವಾಗಿರಬೇಕು- ಎಸ್.ಎನ್.ಚನ್ನಬಸಪ್ಪ

S.N. Channabasappa ಮಾರ್ನಾಮಿಬೈಲು ಎನ್ನುವುದು ಒಂದು ಇತಿಹಾಸ ಪ್ರಸಿದ್ದತೆ ಪಡೆದಿದೆ, ನಗರದ...