ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿ ಕಾಗೆಹಳ್ಳ ಗ್ರಾಮದಲ್ಲಿ ಹಳ್ಳಕ್ಕೆ ಬಸ್ ಉರುಳಿರುವ ಘಟನೆ ನಡೆದಿದೆ.
ಚಲಿಸುತ್ತಿದ್ದ ಖಾಸಗಿ ಬಸ್ ಏಕಾಏಕಿ ಹಳ್ಳಕ್ಕೆ ಉರುಳಿ ಬಿದ್ದು, 30ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡ ಘಟನೆ ನಡೆದಿದೆ. ಈ ಅಪಘಾತದಿಂದ ಭಾರೀ ದೊಡ್ಡ ಅವಘಡವಾಗಿದ್ದು, ಹಲವು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಭದ್ರಾವತಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಚನ್ನಗಿರಿಯಿಂದ ಭದ್ರಾವತಿಗೆ ಬರುತ್ತಿದ್ದ ಶ್ರೀ ರೇಣುಕಾಂಬ ಖಾಸಗಿ ಬಸ್ ಕಾಗೆಹಳ್ಳ ಬಳಿ ನಿಯಂತ್ರಣ ತಪ್ಪಿ ರಸ್ತೆಯ ಪಕ್ಕದ ಹಳ್ಳಕ್ಕೆ ಉರುಳಿದೆ.
ಬಸ್‌ನಲ್ಲಿ 30ಕ್ಕೂ ಹೆಚ್ಚು ಪ್ರಯಾಣಿಕರು ಇದ್ದರು. ಇದರಿಂದಾಗಿ ಅಪಘಾತದಲ್ಲಿ ಬಸ್ ತೀವ್ರವಾಗಿ ಹಾನಿಗೊಳಗಾಗಿದೆ. ಬಸ್ ಡ್ರೈವರ್ ನಿರ್ಲಕ್ಷದಿಂದ ಈ ಅಪಘಾತ ಸಂಭವಿಸಿದೆ ಎಂದು ಪ್ರಯಾಣಿಕರು ಆರೋಪಿಸಿದ್ದಾರೆ.
