Thursday, September 17, 2026
Thursday, September 17, 2026

S.N. Channabasappa ಯುವ ಕಂಟೆಂಟ್ ಕ್ರಿಯೇಟರುಗಳು ಶಿವಮೊಗ್ಗದ ಸಾಂಸ್ಕೃತಿಕ ವೈಭವ ಪರಿಚಯಿಸಲಿ- ಶಾಸಕ ಚನ್ನಬಸಪ್ಪ

Date:

S.N. Channabasappa ಶಿವಮೊಗ್ಗ ನಗರದ ಶಾಂತಿ, ಸುಭದ್ರತೆ ಹಾಗೂ ಸೋಷಿಯಲ್ ಮೀಡಿಯಾ ವೇದಿಕೆಗಳ ಜವಾಬ್ದಾರಿಯುತ ಬಳಕೆಯ ಕುರಿತು ಇಂದು ಶಿವಮೊಗ್ಗದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯಲ್ಲಿ ವಿಶೇಷ ಸಮಾಲೋಚನಾ ಸಭೆ ನಡೆಯಿತು. ಈ ಸಭೆಯಲ್ಲಿ ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಎಸ್.ಎನ್. ಚನ್ನಬಸಪ್ಪ ಅವರು ಪಾಲ್ಗೊಂಡು ಮಾರ್ಗದರ್ಶನ ನೀಡಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಶ್ರೀ ಬಿ. ನಿಖಿಲ್ ಅವರ ಸಮ್ಮುಖದಲ್ಲಿ ನಡೆದ ಈ ಸಭೆಯಲ್ಲಿ, ‘ಅನವರತ ಫೌಂಡೇಶನ್’ ಸದಸ್ಯರು ಹಾಗೂ ಶಿವಮೊಗ್ಗ ಜಿಲ್ಲೆಯ ಪ್ರಮುಖ ಸೋಷಿಯಲ್ ಮೀಡಿಯಾ ಇನ್‌ಫ್ಲುಯೆನ್ಸರ್‌ಗಳು ಮತ್ತು ಕಂಟೆಂಟ್ ಕ್ರಿಯೇಟರ್‌ಗಳು ಭಾಗವಹಿಸಿದ್ದರು.

ಸಭೆಯಲ್ಲಿ ನಗರದ ಸಂಚಾರ ನಿಯಮಗಳ ಜಾಗೃತಿ, ಸೈಬರ್ ಸುರಕ್ಷತೆ ಮತ್ತು ಗಾಂಜಾ ಗೆ ಸಂಬಂಧಿಸಿದಂತ ವಿಷಯಗಳಲ್ಲಿ ಪೊಲೀಸ್ ಇಲಾಖೆಯೊಂದಿಗೆ ಕಂಟೆಂಟ್ ಕ್ರಿಯೇಟರ್‌ಗಳು ಕೈಜೋಡಿಸುವ ಕುರಿತು ಚರ್ಚಿಸಲಾಯಿತು.

ನಮ್ಮ ನಗರದ ಸಾಂಸ್ಕೃತಿಕ ವೈಭವ ಮತ್ತು ಅಭಿವೃದ್ಧಿ ಕಾರ್ಯಗಳನ್ನು ಜಗತ್ತಿಗೆ ಪರಿಚಯಿಸುವ ಮೂಲಕ ‘ಸಕಾರಾತ್ಮಕ ಶಿವಮೊಗ್ಗ’ವನ್ನು ನಿರ್ಮಿಸಲು ಯುವ ಕ್ರಿಯೇಟರ್‌ಗಳಿಗೆ ಶಾಸಕರು ಕರೆ ನೀಡಿದರು.

S.N. Channabasappa ಸಭೆಯಲ್ಲಿ ಇನ್‌ಫ್ಲುಯೆನ್ಸರ್‌ಗಳು ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು ಹಾಗೂ ಜಿಲ್ಲಾಡಳಿತದೊಂದಿಗೆ ಸದಾ ಸಹಕರಿಸುವುದಾಗಿ ಭರವಸೆ ನೀಡಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...