Sandalwood Trees ಶಿವಮೊಗ್ಗ ಎಲ್‌ಬಿಎಸ್ ನಗರದಲ್ಲಿರುವ ಶ್ರೀ ಚೌಡೇಶ್ವರಿ ದೇವಾಲಯದ ಆವರಣದಲ್ಲಿದ್ದ ಶ್ರೀಗಂಧದ ಮರವನ್ನು ಯಾರೋ ಕಳ್ಳರು ಕಡಿದು ಕದ್ದೊಯ್ದಿದ್ದಾರೆ. ಘಟನೆ ನಡೆದು ಎರಡು ದಿನಗಳು ಕಳೆದರೂ ಇದುವರೆಗೂ ಅರಣ್ಯ ಇಲಾಖೆಯವರು ಯಾವುದೇ ಕ್ರಮ ಕೈಗೊಂಡಿಲ್ಲವೆಂದು ಸ್ಥಳೀಯ ನಿವಾಸಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಕ್ಷಣ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕಾಗಮಿಸಿ ಪರಿಶೀಲಿಸಿ ದುಷ್ಕರ್ಮಿಗಳನ್ನು ಬಂಧಿಸದಿದ್ದಲ್ಲಿ ದೇವಸ್ಥಾನದ ಕಮಿಟಿಯ ಅಧ್ಯಕ್ಷ ರಾಮಣ್ಣ ಹಾಗೂ ಮತ್ತಿತರರು ಉಗ್ರ ಹೋರಾಟ ನಡೆಸುವ ಎಚ್ಚರಿಕೆ ನೀಡಿದ್ದಾರೆ.
Sandalwood Trees ಶಿವಮೊಗ್ಗದ ಎಲ್ ಬಿ ಎಸ್ ನಗರದಲ್ಲಿ ಶ್ರೀಗಂಧ ಮರ ಕಡಿತಲೆ. ಕ್ರಮ ಕೈಗೊಳ್ಳಲು ನಿವಾಸಿಗಳ ಆಕ್ರೋಶ.
Date:
