Monday, May 25, 2026
Monday, May 25, 2026

DC Shivamogga ಗಣತಿ ಸಂದರ್ಭದಲ್ಲಿ ಕುಟುಂಬದ ಮಾಹಿತಿ,ಜಾತಿ,ಉಪಜಾತಿ,ಹೆಸರುಗಳ ಗೊಂದಲ ಆಗದಂತೆ ಜಾಗ್ರತೆಯಿಂದ ಕಾರ್ಯ ನಿರ್ವಹಿಸಿ- ಪ್ರಭುಲಿಂಗ ಕವಳಿಕಟ್ಟಿ

Date:

DC Shivamogga ಜನ ಗಣತಿ ಪ್ರಕ್ರಿಯೆಯನ್ನು ಪಾರದರ್ಶಕವಾಗಿ ಮತ್ತು ನಿಖರವಾಗಿ ನಡೆಸುವಂತೆ ಗಣತಿದಾರರು ಮತ್ತು ಮೇಲ್ವಿಚಾರಕರಿಗೆ ಜಿಲ್ಲಾಧಿಕಾರಿಳಾದ ಪ್ರಭುಲಿಂಗ ಕವಳಿಕಟ್ಟಿಯವರು ನಿರ್ದೇಶನ ನೀಡಿದರು.
ಶಿವಮೊಗ್ಗ ನಗರದ ಬಿ ಹೆಚ್ ರಸ್ತೆಯಲ್ಲಿರುವ ಸರ್ಕಾರಿ ಪದವಿಪೂರ್ವ ಬಾಲಕಿಯರ ಕಾಲೇಜಿನಲ್ಲಿ ಶಿವಮೊಗ್ಗ ಗ್ರಾಮಾಂತರ ವಿಭಾಗದ ಗಣತಿದಾರರು ಮತ್ತು ಮೇಲ್ವಿಚಾರಕರಿಗೆ ಏರ್ಪಡಿಸಲಾಗಿದ್ದ ಕಾರ್ಯಾಗಾರದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಗಣತಿ ಸಂದರ್ಭದಲ್ಲಿ ಪ್ರತಿಯೊಂದು ಕುಟುಂಬದ ಸದಸ್ಯರು ನೀಡುವ ಮಾಹಿತಿ ಅತ್ಯಂತ ನಿಖರವಾಗಿರಬೇಕು. ಉಪಜಾತಿ ಮತ್ತು ಪರ್ಯಾಯ ಹೆಸರುಗಳ ಬಗ್ಗೆ ಗೊಂದಲ ಉಂಟಾಗದಂತೆ ಎಚ್ಚರಿಕೆ ವಹಿಸಲು ಸೂಚಿಸಿದ ಅವರು ಸ್ವಯಂ ಗಣತಿ ಬಗ್ಗೆ ಹೆಚ್ಚಿನ ಅರಿವು ಮೂಡಿಸಬೇಕು ಎಂದರು.
DC Shivamogga ಜಿಲ್ಲೆಯ ಪ್ರತಿಯೊಂದು ಮನೆ ಮತ್ತು ಪ್ರದೇಶದ ನಿವಾಸಿಗಳನ್ನು ಈ ಸಮೀಕ್ಷೆಯಲ್ಲಿ ಕಡ್ಡಾಯವಾಗಿ ಒಳಪಡಿಸಬೇಕು. ಯಾವುದೇ ಒಂದು ಕುಟುಂಬವೂ ಗಣತಿಯಿಂದ ವಂಚಿತವಾಗಬಾರದು ಎಂದು ತಿಳಿಸಿದ ಅವರು ಗಣತಿಗಾಗಿ ಬಳಸಲಾಗುವ ಡಿಜಿಟಲ್ ಪೋರ್ಟಲ್‌ಗಳಲ್ಲಿ ದತ್ತಾಂಶವನ್ನು ದಾಖಲಿಸುವಾಗ ತಾಂತ್ರಿಕ ದೋಷಗಳಾಗದಂತೆ ನೋಡಿಕೊಳ್ಳಲು ಸೂಚನೆ ನೀಡಿದರು.
ಸಾರ್ವಜನಿಕರು ನೀಡುವ ವೈಯಕ್ತಿಕ ಮತ್ತು ಸಾಮಾಜಿಕ ಮಾಹಿತಿಯ ಗೌಪ್ಯತೆಯನ್ನು ಕಾಪಾಡುವುದು ಸರ್ಕಾರದ ಜವಾಬ್ದಾರಿಯಾಗಿದೆ ಎಂದು ಭರವಸೆ ನೀಡಿದ ಅವರು ತಹಶೀಲ್ದಾರ್‌ಗಳು, ಮೇಲ್ವಿಚಾರಕರು ಮತ್ತು ಗಣತಿದಾರರು ಸಮನ್ವಯತೆಯಿಂದ ಕೆಲಸ ಮಾಡಬೇಕು ಎಂದು ತಿಳಿಸಿದರು.
ಈ ವೇಳೆ ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ, ಶಿವಮೊಗ್ಗ ತಹಶೀಲ್ದಾರ್ ರಾಜೀವ್, ಇತರೆ ಅಧಿಕಾರಿಗಳು ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Dinesh Gundu Rao ಎಬೊಲಾ ಸೋಂಕು ಬಾರದಂತೆ ಆರೋಗ್ಯ ಇಲಾಖೆ ಅಗತ್ಯ ಕ್ರಮ.- ದಿನೇಶ್ ಗುಂಡೂರಾವ್

Dinesh Gundu Rao ಎಬೋಲಾ ಸೋಂಕು ಬಾರದಂತೆ ತಡೆಯಲು ಆರೋಗ್ಯ ಇಲಾಖೆಯಿಂದ...

Madhu Bangarappa ಶಿವಮೊಗ್ಗಕ್ಕೆ ಜೂನ್ 1 ರಂದು ಸೀಎಮನ ಭೇಟಿ: ಮಧು ಬಂಗಾರಪ್ಪ ಅವರಿಂದ ಪೂರ್ವಸಿದ್ಧತೆ ಪರಿಶೀಲನೆ

Madhu Bangarappa ಜೂನ್ 01 ರಂದು ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯನವರು ನೆರವೇರಿಸಲಿರುವ...

Madhu Bangarappa ಜಿಲ್ಲಾ ಪ್ರಗತಿ ಪರಿಶಿಲನಾ ಸಭೆ. ವಿವಿಧ ಸಮಸ್ಯೆಗಳ ಬಗ್ಗೆ ಪಕ್ಷಾತೀತ ನಿರ್ಣಯ- ಮಧು ಬಂಗಾರಪ್ಪ.

Madhu Bangarappa ಇಂದು ಶಿವಮೊಗ್ಗದ ಜಿಲ್ಲಾ ಪಂಚಾಯತ್‌ನ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ...

CM Siddharamaiah ಸಮಗ್ರ ಅಭಿವೃದ್ಧಿಗೆ ನಾವು ಮುಂದಡಿ ಇಟ್ಟಿದ್ದೇವೆ- ಸಿದ್ಧರಾಮಯ್ಯ

CM Siddharamaiah ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ,...