Wednesday, August 26, 2026
Wednesday, August 26, 2026

Dr. B.R. Ambedkar ಏಪ್ರಿಲ್ 14. ಡಾ.ಅಂಬೇಡ್ಕರ್ಜನ್ಮ ದಿನಾಚರಣೆಗೆ ಜಿಲ್ಲಾಡಳಿತ‌ದಿಂದ ಸರ್ವಸಿದ್ಧತೆ.

Date:

Dr. B.R. Ambedkar ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರಪಾಲಿಕೆ, ಸಮಾಜ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ವಿವಿಧ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಏ.14 ರ ಬೆಳಗ್ಗೆ 11.00ಕ್ಕೆ ನಗರದ ಕುವೆಂಪು ರಂಗಮಂದಿರದಲ್ಲಿ ಸಂವಿಧಾನ ಶಿಲ್ಪಿ, ಭಾರತ ರತ್ನ ಬಾಬಾ ಸಾಹೇಬ್ ಡಾ|| ಬಿ.ಆರ್ ಅಂಬೇಡ್ಕರ್‌ರವರ 135ನೇ ಜನ್ಮ ದಿನಾಚರಣೆ ಕಾರ್ಯಕ್ರಮ ಏರ್ಪಡಿಸಲಾಗಿದೆ.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖಾ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ್ಪರವರು ಕಾರ್ಯಕ್ರಮವನ್ನು ಉದ್ಘಾಟಿಸಲಿರುವರು. ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ ಹೆಚ್.ಸಿ.ಮಹಾದೇವಪ್ಪ ವಿಶೇಷ ಆಹ್ವಾನಿತರಾಗಿ ಆಗಮಿಸಲಿದ್ದಾರೆ. ಶಿವಮೊಗ್ಗ ನಗರ ಕ್ಷೇತ್ರದ ಶಾಸಕ ಎಸ್.ಎನ್. ಚನ್ನಬಸಪ್ಪರವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.
ಕಾರ್ಯಕ್ರಮದಲ್ಲಿ ಸಂಸದರು, ವಿಧಾನಸಭಾ ಮತ್ತು ವಿಧಾನ ಪರಿಷತ್ ಶಾಸಕರು, ಪಾಲಿಕೆ ಮಹಾಪೌರರು, ಜನಪ್ರತಿನಿಧಿಗಳು, ವಿವಿಧ ನಿಗಮ, ಮಂಡಳಿ, ಪ್ರಾಧಿಕಾರಗಳ ಅಧ್ಯಕ್ಷರು, ಜಿಲ್ಲೆಯ ಎಲ್ಲಾ ಗೌರವಾನ್ವಿತ ಜನಪ್ರತಿನಿಧಿಗಳು, ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿವರ್ಗ ಮತ್ತು ವಿವಿಧ ಸಂಘಟನೆಗಳ ಮುಖಂಡರು, ಪದಾಧಿಕಾರಿಗಳು ಹಾಗೂ ಸದಸ್ಯರು, ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಜಿ.ಪಂ ಸಿಇಓ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ಹಾಗೂ ಮಹಾನಗರ ಪಾಲಿಕೆ ಆಯುಕ್ತರು ಮತ್ತು ಇನ್ನಿತರ ಗಣ್ಯರು, ಅಧಿಕಾರಿಗಳು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.
Dr. B.R. Ambedkar ಅಂದು ಬೆಳಗ್ಗೆ 9.00ಕ್ಕೆ ಮಹಾನಗರ ಪಾಲಿಕೆಯ ಆವರಣದಲ್ಲಿರುವ ಅಂಬೇಡ್ಕರ್ ಪುತ್ಥಳಿಗೆ ಪುಷ್ಪಾರ್ಜನೆ ಸಲ್ಲಿಸಿ, ಪಾಲಿಕೆ ಆವರಣದಿಂದ ಕುವೆಂಪು ರಂಗಮಂದಿರದವರೆಗೆ ಡಾ|| ಬಿ.ಆರ್. ಅಂಬೇಡ್ಕರ್‌ರವರ ಭಾವಚಿತ್ರ ಮೆರವಣಿಗೆ ಆಯೋಜಿಸಲಾಗಿದೆ.
ಶಿವಮೊಗ್ಗದ ಸೈನ್ಸ್ ಮೈದಾನದ ಸರ್ಕಾರಿ ಪದವಿಪೂರ್ವ ಕಾಲೇಜಿನ ಕನ್ನಡ ವಿಭಾಗದ ಉಪನ್ಯಾಸಕರಾದ ಡಾ. ನಾಗೇಶ್ ಬಿದರಗೋಡು ಇವರಿಂದ ವಿಶೇಷ ಉಪನ್ಯಾಸ ಏರ್ಪಡಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಬೈಂದೂರು ರೈಲ್ವೇ ನಿಲ್ದಾಣ ಅಭಿವೃದ್ಧಿಗೆ ₹86 ಕೋಟಿ ಪ್ರಸ್ತಾವನೆ: ಸಂಸದ ಬಿ.ವೈ.ರಾಘವೇಂದ್ರ ಭೇಟಿ

B.Y. Raghavendra ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮೂಕಾಂಬಿಕಾ ರೋಡ್ ಬೈಂದೂರು...

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...