Wednesday, April 22, 2026
Wednesday, April 22, 2026

Sri Shankaracharya Jayanti ಏ.21ರಂದು ಶ್ರೀ ಶಂಕರಾಚಾರ್ಯ ಜಯಂತಿ

Date:

Sri Shankaracharya Jayanti ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಏ.21 ರ ಬೆಳಗ್ಗೆ 11.00 ಕ್ಕೆ ಕುವೆಂಪು ರಂಗಮಂದಿರದಲ್ಲಿ ಶ್ರೀ ಶಂಕರಾಚಾರ್ಯ ಜಯಂತಿ ಕಾರ್ಯಕ್ರಮ ಏರ್ಪಡಿಸಲಾಗಿದೆ.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖಾ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ್ಪ ಇವರು ಕಾರ್ಯಕ್ರಮದ ಉದ್ಘಾಟನೆ ನೆರವೇರಿಸುವರು. ಶಾಸಕ ಎಸ್.ಎನ್. ಚನ್ನಬಸಪ್ಪರವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ತಂಗಡಗಿ ಶಿವರಾಜ್ ಸಂಗಪ್ಪರವರು ವಿಶೇಷ ಆಹ್ವಾನಿತರಾಗಿ ಉಪಸ್ಥಿತರಿರಲಿದ್ದಾರೆ.
ಕಾರ್ಯಕ್ರಮದಲ್ಲಿ ಸಂಸದರು, ವಿಧಾನಸಭಾ ಮತ್ತು ವಿಧಾನ ಪರಿಷತ್ ಶಾಸಕರು, ಪಾಲಿಕೆ ಮಹಾಪೌರರು, ಜನಪ್ರತಿನಿಧಿಗಳು, ವಿವಿಧ ನಿಗಮ, ಮಂಡಳಿ, ಪ್ರಾಧಿಕಾರಗಳ ಅಧ್ಯಕ್ಷರು, ಜಿಲ್ಲೆಯ ಎಲ್ಲಾ ಗೌರವಾನ್ವಿತ ಜನಪ್ರತಿನಿಧಿಗಳು, ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿವರ್ಗ ಮತ್ತು ವಿವಿಧ ಸಂಘಟನೆಗಳ ಮುಖಂಡರು, ಪದಾಧಿಕಾರಿಗಳು ಹಾಗೂ ಸದಸ್ಯರು, ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಜಿ.ಪಂ ಸಿಇಓ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ಹಾಗೂ ಮಹಾನಗರ ಪಾಲಿಕೆ ಆಯುಕ್ತರು ಹಾಗೂ ಜಿಲ್ಲೆಯ ಎಲ್ಲಾ ಗಣ್ಯರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.
Sri Shankaracharya Jayanti ಶಿವಮೊಗ್ಗದ ನಿವೃತ್ತ ಸಂಸ್ಕೃತ ಉಪನ್ಯಾಸಕ ಎ.ಎಸ್.ಕೃಷ್ಣಮೂರ್ತಿರವರಿಂದ ವಿಶೇಷ ಉಪನ್ಯಾಸ ಏರ್ಪಡಿಸಲಾಗಿದೆ ಎಂದು ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Chennasappa ಪೆಹಲ್ಗಾಮ್ ದುರಂತ. ಹುತಾತ್ಮ ಮಂಜುನಾಥ್ ಅವರನ್ನ ಸ್ಮರಿಸಿ, ಪ್ರಣಾಮ ಸಲ್ಲಿಸಿದ ಶಾಸಕ‌ ಚೆನ್ನಿ

S.N. Chennasappa ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭೀಕರ ಭಯೋತ್ಪಾದಕ...

Dr. Ambedkar ನಿರಾಶ್ರಿತರ ಕೇಂದ್ರದಲ್ಲಿ ಸೌರಮಾನ ಯುಗಾದಿ ಮತ್ತು ಡಾ.ಅಂಬೇಡ್ಕರ್ ದಿನಾಚರಣೆ

Dr. Ambedkar ಸೌರಮಾನ ಯುಗಾದಿ ಹಾಗೂ ಅಂಬೇಡ್ಕರ್ ಜಯಂತಿ ಪ್ರಯುಕ್ತ, ನಿರಾಶ್ರಿತರ...

CM Siddharamaiah ಮಾನವನಿಂದ ಪ್ರಕೃತಿಯ ಮೇಲಿನ ದಬ್ಬಾಳಿಕೆ ನಿಲ್ಲಬೇಕು- ಮುಖ್ಯಮಂತ್ರಿ ಸಿದ್ಧರಾಮಯ್ಯ

CM Siddharamaiah ಸಕಲ ಜೀವರಾಶಿಗಳಿಗೂ ವಾಸಿಸಲು ಯೋಗ್ಯವಿರುವ ಏಕೈಕ ಗ್ರಹ ಭೂಮಿ....