Wednesday, September 16, 2026
Wednesday, September 16, 2026

ಪಶ್ಚಿಮ ಘಟ್ಟ ಗಳ ಕಾರ್ಯಪಡೆ ಅಧ್ಯಕ್ಷರ ಶಿವಮೊಗ್ಗ ಜಿಲ್ಲಾ ಪ್ರವಾಸ ಮಾಹಿತಿ

Date:

ಕರ್ನಾಟಕ ರಾಜ್ಯ ಪಶ್ಚಿಮ ಘಟ್ಟಗಳ ಸಂರಕ್ಷಣೆ ಕಾರ್ಯಪಡೆ ಸಮಿತಿ ಅಧ್ಯಕ್ಷ ಮೊಹಮ್ಮದ್ ತಬ್ರೇಝ್ ಅಲಂ ಶರೀಫ್‌ರವರು ಏ.20 ರಿಂದ 23ರವರೆಗೆ ಶಿವಮೊಗ್ಗ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.
ಏ. 20 ರಂದು ಮಧ್ಯಾಹ್ನ 3.00ಕ್ಕೆ ಭದ್ರಾವತಿಗೆ ಆಗಮಿಸಿ ಭದ್ರಾವತಿ ಪ್ರಾದೇಶಿಕ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ಕಚೇರಿಗೆ ಭೇಟಿ ನೀಡಿ ಅಧಿಕಾರಿಗಳೊಂದಿಗೆ ಸಮಾಲೋಚನೆ ಮಾಡಲಿದ್ದಾರೆ. ಮಧ್ಯಾಹ್ನ 4.00ಕ್ಕೆ ದೊಡ್ಡೆರಿ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ಸ್ಥಳೀಯರೊಂದಿಗೆ ಸಮಾಲೋಚನೆ ನಡೆಸಲಿದ್ದಾರೆ. ಸಂಜೆ 6.00ಕ್ಕೆ ಶಿವಮೊಗ್ಗಕ್ಕೆ ಆಗಮಿಸಿ ವಾಸ್ತವ್ಯ ಮಾಡಲಿದ್ದಾರೆ.
ಏ. 21 ರಂದು ಬೆಳಗ್ಗೆ 11.00ಕ್ಕೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮಲೆಶಂಕರದಲ್ಲಿ ಮೇ ಮಾಹೆಯಲ್ಲಿ ನಡೆಯಲಿರುವ ಕಾರ್ಯಕ್ರಮದ ಬಗ್ಗೆ ಪೂರ್ವಬಾವಿ ಸಭೆ ನಡೆಸಲಿದ್ದಾರೆ. ಸಂಜೆ 4.00ಕ್ಕೆ ಅಮ್ಮನಘಟ್ಟ ಗ್ರಾಮದಲ್ಲಿ ಗ್ರಾಮೀಣ ಜನಗಳ ಕುಂದುಕೊರತೆಗಳ ಬಗ್ಗೆ ಸಮಾಲೋಚನೆ ನಡೆಸಲಿದ್ದಾರೆ. ಸಂಜೆ 5.30ಕ್ಕೆ ಹುಂಚ ಗ್ರಾಮದಲ್ಲಿ ಸ್ಥಳೀಯ ಜನರೊಂದಿಗೆ ಕುಂದುಕೊರತೆಗಳ ಬಗ್ಗೆ ಸಮಾಲೋಚನೆ ನಡೆಸಲಿದ್ದಾರೆ ಹಾಗೂ ಕಾರ್ಗಲ್ ತೆರಳಿ ವಾಸ್ತವ್ಯ ಮಾಡಲಿದ್ದಾರೆ.
ಏ. 22 ರಂದು ಬೆಳಗ್ಗೆ ಜೋಗದ ಸರ್ಕ್ಯೂಟ್ ಹೌಸ್ ಸಭಾಂಗಣದಲ್ಲಿ ಕೆಪಿಟಿಸಿಎಲ್ ಅಧಿಕಾರಿಗಳ, ಸಾಗರ ಉಪವಿಭಾಗಾಧಿಕಾರಿ ಹಾಗೂ ಅರಣ್ಯ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ. ಮಧ್ಯಾಹ್ನ 2.00ಕ್ಕೆ ಉ.ಕ ಸಿದ್ದಾಪುರ ತಾಲೂಕಿನ ಗೇರುಸೊಪ್ಪೆ ಗ್ರಾಮದಲ್ಲಿ ಸ್ಥಳ ವೀಕ್ಷಣೆ ಹಾಗೂ ಸ್ಥಳೀಯರೊಂದಿಗೆ ಮತ್ತು ಅಧಿಕಾರಿಗಳೊಂದಿಗೆ ಸಮಾಲೋಚನೆ ಮಾಡಲಿದ್ದಾರೆ. ಸಂಜೆ 6.00ಕ್ಕೆ ಮುರುಡೇಶ್ವರ, ಭಟ್ಕಳದಲ್ಲಿ ಅರಣ್ಯ ಅಧಿಕಾರಿಗಳೊಂದಿಗೆ ಸಮಾಲೋಚನೆ ಮಾಡಲಿದ್ದಾರೆ. ಸಂಜೆ 7.00ಕ್ಕೆ ಕೊಲ್ಲೂರಿಗೆ ತೆರಳಿ ವಾಸ್ತವ್ಯ ಮಾಡಲಿದ್ದಾರೆ.
ಏ. 23 ರಂದು ಬೆಳಗ್ಗೆ 10.00ಕ್ಕೆ ಕೊಲ್ಲೂರು ಹಾಗೂ ಬೆಳಗ್ಗೆ 11.00ಕ್ಕೆ ಸಿಗಂದೂರು ತೆರೆಳಿ ಅಲ್ಲಿನ ಸ್ಥಳೀಯರೊಂದಿಗೆ ಹಾಗೂ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಲಿದ್ದಾರೆ. ಬೆಳಗ್ಗೆ 11.30ಕ್ಕೆ ಕೊಡಚಾದ್ರಿ ತೆರಳಿ ಕೊಡಚಾದ್ರಿ ತೀರದ ಸ್ಥಳ ವೀಕ್ಷಣೆ ಮಾಡಲಿದ್ದಾರೆ. ಸಂಜೆ 4.30ಕ್ಕೆ ಚಕ್ರನಗರದ ಅರಣ್ಯ ತರಬೇತಿ ಕೇಂದ್ರಕ್ಕೆ ಭೇಟಿ ನೀಡಲಿದ್ದಾರೆ. ಸಂಜೆ 6.30ಕ್ಕೆ ಬೆಂಗಳೂರಿಗೆ ವಾಪಾಸ್ಸು ತೆರಳಲಿದ್ದಾರೆ ಎಂದು ಅಪರ ಜಿಲ್ಲಾಧಿಕಾರಿಗಳು ತಿಳಿಸಿರುತ್ತಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...