ರಾಜ್ಯದ ಹಲವು ಜಿಲ್ಲೆಗಳಲ್ಲಿ ಕಾರಾಗೃಹ ಮತ್ತು ಸುಧಾರಣಾ ಸೇವಾ ಇಲಾಖೆಯಲ್ಲಿ ಖಾಲಿಯಿರುವ ವೀಕ್ಷಕರ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೆ ತಾತ್ಕಾಲಿಕವಾಗಿ 11 ತಿಂಗಳ ಗುತ್ತಿಗೆ ಆಧಾರದ ಮೇಲೆ ಮಾಜಿ ಸೈನಿಕರನ್ನು ನೇಮಿಸಿಕೊಳ್ಳಲು ಅರ್ಜಿ ಆಹ್ವಾನಿಸಿದೆ.
ಶಿವಮೊಗ್ಗ, ದಾವಣಗೆರೆ ಹಾಗೂ ಚಿತ್ರದುರ್ಗ ಜಿಲ್ಲೆಯ ಆಸಕ್ತ ಮಾಜಿ ಸೈನಿಕರು ಸ್ವಯಂ ವಿವರಗಳನ್ನೊಳಗೊಂಡ ಲಿಖಿತ ಅರ್ಜಿಯನ್ನು ಏಪ್ರಿಲ್ 24 ರೊಳಗಾಗಿ ಉಪ ನಿರ್ದೇಶಕರ ಕಛೇರಿ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಶಿವಮೊಗ್ಗ ಇವರಿಗೆ ಖುದ್ದಾಗಿ ಸಲ್ಲಿಸುವಂತೆ ಶಿವಮೊಗ್ಗ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪ ನಿರ್ದೇಶಕ ಡಾ. ಸಿ.ಎ.ಹಿರೇಮಠ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಈಮೇಲ್ soldiersshimoga@gmail.com ಸಂಖ್ಯೆ 08182-220925 ಯನ್ನು ಕಛೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ.
