Thursday, September 17, 2026
Thursday, September 17, 2026

ರಕ್ತದಾನದಿಂದ ಜನರನ್ನ ಉಳಿಸಿದ ಪುಣ್ಯ ದೊರೆಯುತ್ತದೆ-ಡಾ.ಬಸವ ಮರುಳಸಿದ್ಧಶ್ರೀ

Date:

ಎಲ್ಲಾ ದಾನಗಳಿಗಿಂತ ಪವಿತ್ರವಾದದ್ದು ರಕ್ತದಾನ, ರಕ್ತದಾನ ಮಾಡುವುದರಿಂದ ನಮ್ಮ ದೇಹ, ಮನಸ್ಸು ಹಾಗೂ ಆರೋಗ್ಯ ಸದೃಢವಾಗಿರುತ್ತದೆ ಎಂದು ಪೂಜ್ಯ ಶ್ರೀ ಮ. ನಿ. ಪ್ರ. ಡಾ.ಬಸವ ಮರುಳಸಿದ್ದ ಸ್ವಾಮಿಗಳು ನುಡಿದರು. ಅವರು ಬಸವ ಕೇಂದ್ರದಲ್ಲಿ ಬಸವ ಜಯಂತಿ ಅಂಗವಾಗಿ ಬಸವ ಕೇಂದ್ರ, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ, ಅಕ್ಕನ ಬಳಗ, ಕದಳಿ ವೇದಿಕೆ ಹಾಗೂ ವಿವಿಧ ಸಂಘಟನೆಗಳ ಆಶ್ರಯದಲ್ಲಿ ರಕ್ತದಾನ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು,
26ನೇ ಬಾರಿ ರಕ್ತದಾನ ಮಾಡುವುದರ ಮುಖಾಂತರ ಶಿಬಿರಕ್ಕೆ ಚಾಲನೆ ನೀಡಿದರು. ನಿರಂತರವಾಗಿ ರಕ್ತದಾನ ಮಾಡುವುದರಿಂದ ಒಳ್ಳೆಯ ಆರೋಗ್ಯವಂತ ಸಮಾಜ ನಿರ್ಮಾಣವಾಗುತ್ತದೆ ಹಾಗೂ ರಕ್ತದಾನದಿಂದ ಸಾಕಷ್ಟು ಜನರ ಪ್ರಾಣವನ್ನು ಉಳಿಸಿರುವ ಪುಣ್ಯ ನಮಗೆ ಲಭಿಸುತ್ತದೆ ಆದ್ದರಿಂದ ಪ್ರತಿಯೊಬ್ಬರೂ ರಕ್ತದಾನ ಮಾಡುವುದರ ಮುಖಾಂತರ ಸದೃಢವಾದ ಸಮಾಜವನ್ನು ನಿರ್ಮಾಣ ಮಾಡೋಣ ಎಂದು ಕರೆ ನೀಡಿದರು ಇದೇ ಸಂದರ್ಭದಲ್ಲಿ ಶಿವಮೊಗ್ಗ ಬಸವೇಶ್ವರ ವೀರಶೈವ ಲಿಂಗಾಯಿತ ಸೇವಾ ಸಂಘದ ಅಧ್ಯಕ್ಷರಾದ ಎಸ್ ಎಸ್ ಜ್ಯೋತಿಪ್ರಕಾಶ್. ಬಳ್ಳಕೆರೆ ಸಂತೋಷ್. ಎಸ್ ಪಿ ದಿನೇಶ್. ಎಚ್ ಸಿ ಯೋಗೇಶ್. ರಾಜ್ಯಾಧ್ಯಕ್ಷರಾದ ಷಡಕ್ಷರಿ.. ಡಾಕ್ಟರ್ ಧನಂಜಯ ಸರ್ಜಿ. ಜಿ ವಿಜಯಕುಮಾರ್.
ಮಹಾಸಭಾ ಅಧ್ಯಕ್ಷರು ರುದ್ರಮುನಿ ಸಜ್ಜನ್. ರಾಜಶೇಖರ್. ಮಲ್ಲಿಕಾರ್ಜುನ್ ಕಾನೂರ್. ಕೆ ಆರ್ ಸೋಮನಾಥ್. . ಬಸವ ಕೇಂದ್ರದ ಅಧ್ಯಕ್ಷರಾದ ಜಿ ಬೆನಕಪ್ಪ. ಚಂದ್ರಶೇಖರ್ ಹಾಲಸ್ವಾಮಿ. ಎಸ್ ಪಿ ದಿನೇಶ್ ಧರಣೇಂದ್ರ ದಿನಕರ್. ಹಾಗೂ ಶಂಕರ ಕಣ್ಣಿನ ಆಸ್ಪತ್ರೆಯ ಸಿಬ್ಬಂದಿ ವರ್ಗದವರು ಹಾಗೂ ಬಸವ ಕೇಂದ್ರದ ಭಕ್ತರು ಉಪಸ್ಥಿತರಿದ್ದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...