Tuesday, September 29, 2026
Tuesday, September 29, 2026

Youth Hostel Association ಮೊಬೈಲ್, ಟೀವಿಗೆ ದಾಸರಾಗಿರುವ ಮಕ್ಕಳನ್ನು ಹೊರತರುವುದು ಕಷ್ಟ- ಸತೀಶ್ ಕುಮಾರ್

Date:

Youth Hostel Association ಮಕ್ಕಳಲ್ಲಿ ಉತ್ತಮ ವ್ಯಕ್ತಿತ್ವ ರೂಪಿಸಲು ಬೇಸಿಗೆ ಶಿಬಿರ ಅತ್ಯಂತ ಮಹತ್ತರ ಪಾತ್ರ ವಹಿಸುತ್ತದೆ ಎಂದು ಯೂತ್ ಹಾಸ್ಟೆಲ್ ಅಸೋಸಿಯೇಷನ್ ಸಾಗರ ಘಟಕದ ಸತೀಶ್‌ಕುಮಾರ್ ಹೇಳಿದರು.

ಸಾಗರ ತಾಲೂಕಿನ ಹೆಗ್ಗೋಡು ಸಮೀಪದ ನಂದಿಗೋಡಿನಲ್ಲಿ ಆಯೋಜಿಸಿದ್ದ ಬೇಸಿಗೆ ಶಿಬಿರದ ಸಮಾರೋಪದಲ್ಲಿ ಮಾತನಾಡಿ, ಮೊಬೈಲ್, ಟಿವಿಗೆ ದಾಸರಾಗಿರುವ ಮಕ್ಕಳನ್ನು ಹೊರ ತರುವುದು ಕಷ್ಟ. ಆದರೆ ಐದು ದಿನ ಮಕ್ಕಳಿಗೆ ಸಾಹಸ ಕ್ರೀಡೆ, ಈಜು, ಸಾಂಸ್ಕೃತಿಕ ಕಾರ್ಯಕ್ರಮಗಳಿಂದ ಮಕ್ಕಳ ಸರ್ವೋತ್ತಮ ಅಭಿವೃದ್ದಿಗೆ ಪೂರಕವಾದ ಕಾರ್ಯಕ್ರಮ ಆಯೋಜಿಸಲಾಗಿತ್ತು ಎಂದು ತಿಳಿಸಿದರು.

ಮಕ್ಕಳು ತಂದೆ ತಾಯಿಯಿಂದ ದೂರವಾಗಿ ಪರಿಚಯವೇ ಇಲ್ಲದವರೊಂದಿಗೆ ಸಂತೋಷದಿಂದ ಕಾಲ ಕಳೆಯುವ ಅವಕಾಶ ಮಾಡಿಕೊಟ್ಟೆವು. ಅದರ ಸದುಪಯೋಗ ಚೆನ್ನಾಗಿ ಆಗಿದೆ. ಆರು ದಿನ ಮಕ್ಕಳನ್ನು ಉತ್ತಮವಾಗಿ ನೋಡಿಕೊಳ್ಳಲು ಎಲ್ಲರ ಸದಸ್ಯರ ಸಹಕಾರ ಕಾರಣ ಎಂದು ಹೇಳಿದರು.

Youth Hostel Association ರಾಜ್ಯ ಘಟಕದ ಚೇರ್ಮನ್ ಸುದರ್ಶನ್ ಪೈ ಮಾತನಾಡಿ, ಯೂತ್ ಹಾಸ್ಟೆಲ್ಸ್ ಎಲ್ಲ ತರಹದ ಸಮಾಜಮುಖಿ ಕಾರ್ಯಕ್ರಮಗಳನ್ನು ದೇಶಾದ್ಯಂತ ನೆರವೇರಿಸುತ್ತಿದೆ. ಮಕ್ಕಳ ಬೀಸಿಗೆ ಶಿಬಿರ ಯಶಸ್ವಿಯಾಗಿ ನೆರವೇರಿಸಿದ ಸಾಗರ ಘಟಕದ ಎಲ್ಲಾ ಸದಸ್ಯರಿಗೂ ಅಭಿನಂದನೆ ಎಂದು ತಿಳಿಸಿದರು.

ರಾಷ್ಟ್ರೀಯ ಉಪಾಧ್ಯಕ್ಷ ರವಿಕುಮಾರ್, ಪುರುಷೋತ್ತಮ್, ರಾಜ್ಯ ಮಾಜಿ ಉಪಾಧ್ಯಕ್ಷ ಜಿ.ವಿಜಯಕುಮಾರ್, ಜಯರಾಮ್ ಪೂಜಾರಿ, ಎಸ್.ಎಸ್.ವಾಗೇಶ್, ಸುವರ್ಣ, ಮಲ್ಲಿಕಾರ್ಜುನ ಕಾನೂರ್, ರಾಜು ಅವರು ಭಾಗವಹಿಸಿದ ಮಕ್ಕಳಿಗೆ ನೆನಪಿನ ಕಾಣಿಕೆ ವಿತರಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

JCI Shivamogga ಕುಟುಂಬ ಮಿಲನದಿಂದ ಬಾಂಧವ್ಯ ವೃದ್ಧಿ, ಪ್ರತಿಭೆ ಅನಾವರಣ: ವಿಜಯಲಕ್ಷ್ಮಿ ಕಡಂಬ

JCI Shivamogga ಜೆಸಿಐ ಶಿವಮೊಗ್ಗ ವಿವೇಕ್ ಸಂಸ್ಥೆಯ ವತಿಯಿಂದ ಸ್ನೇಹ ಮಿಲನ...

B.Y. Raghavendra ಮಾನವ ದೀರ್ಘಕಾಲ ಸಮತೋಲನದಿಂದ ಬದುಲು ಆಯುರ್ವೇದ ಸಹಕಾರಿ : ಬಿ.ವೈ.ರಾಘವೇಂದ್ರ

B.Y. Raghavendra ಆಯುರ್ವೇದ ಭಾರತದ ಅತ್ಯಂತ ಪ್ರಾಚೀನ ಮತ್ತು ಸಾಂಪ್ರದಾಯಿಕ ವೈದ್ಯಕೀಯ...

B.Y. Raghavendra ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ: ವಿದ್ಯಾರ್ಥಿಗಳೊಂದಿಗೆ ಸಂವಾದ

B.Y. Raghavendra ​ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ...

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ವಾರ್ಷಿಕ ಮಹಾಸಭೆ, ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಣೆ

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ಕ್ಷೇಮಾಭಿವೃದ್ಧಿ ಸಂಘದ...