Thursday, June 18, 2026
Thursday, June 18, 2026

B.Y. Raghavendra ಸಾಗರ ಬೇಸೂರು ಗ್ರಾಮದಲ್ಲಿ ಅಣುವಿದ್ಯುತ್ ಸ್ಥಾವರ ಪ್ರಸ್ತಾವನೆ: ಸ್ಪಷ್ಟ ವಿರೋಧವಿದೆ- ಸಂಸದ ರಾಘವೇಂದ್ರ

Date:

B.Y. Raghavendra “ಸಾಗರ ತಾಲ್ಲೂಕು ಬೇಸೂರು ಗ್ರಾಮದಲ್ಲಿ ಅಣು ವಿದ್ಯುತ್ ಸ್ಥಾವರ; ಜನರು ಆತಂಕ ಪಡುವ ಅವಶ್ಯಕತೆಯಿಲ್ಲ”- ‘ಜನರಿಗೆ ಹಾಗೂ ಪರಿಸರಕ್ಕೆ ಹಾನಿಯಾಗುವ ಯೋಜನೆ ಜಾರಿಗೆ ನಮ್ಮ ವಿರೋಧವಿದೆ’

ಸಾಗರ ತಾಲ್ಲೂಕು ಬೇಸೂರು ಗ್ರಾಮದಲ್ಲಿ ಅಣು ವಿದ್ಯುತ್ ಸ್ಥಾವರ ಸ್ಥಾಪನೆ ಸಂಬಂಧ ಗ್ರಾಮೀಣ ಭಾಗದ ಜನರು ಆತಂಕದಲ್ಲಿದ್ದಾರೆ ಎಂದು ಪತ್ರಿಕೆಗಳಲ್ಲಿ ವರದಿಯಾಗಿದ್ದು, ಈ ಕೆಳಕಂಡ ಮಾಹಿತಿಯನ್ನು ಸಾರ್ವಜನಿಕರ ಗಮನಕ್ಕೆ ತರಲು ಬಯಸುತ್ತೇನೆ.

ಕೇಂದ್ರ ಸರ್ಕಾರ ಅಧೀನದ ಎನ್.ಟಿ.ಪಿ.ಸಿ (National Thermal Power Corporation) ಸಂಸ್ಥೆಯಿಂದ ರಾಜ್ಯದಲ್ಲಿ ಅಣು ವಿದ್ಯುತ್ ಸ್ಥಾವರ ಸ್ಥಾಪನೆಗಾಗಿ ವಿಜಯಪುರ, ಕೊಪ್ಪಳ, ಶಿವಮೊಗ್ಗ, ಉತ್ತರ ಕನ್ನಡ ಹಾಗೂ ರಾಯಚೂರು ಜಿಲ್ಲೆಗಳನ್ನು ಗುರುತಿಸಲಾಗಿದೆ. ಈ ಜಿಲ್ಲೆಗಳಲ್ಲಿ ಸೂಕ್ತ ಸ್ಥಳಗಳ ಆಯ್ಕೆಗಾಗಿ ಪ್ರಾಥಮಿಕ ಅಧ್ಯಯನಗಳು ಹಾಗೂ ಭೂ-ವೈಜ್ಞಾನಿಕ ಪರಿಶೀಲನೆಗಳನ್ನು ಕೈಗೊಳ್ಳಲು ರಾಜ್ಯ ಸರ್ಕಾರದ ಕಂದಾಯ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳಿಗೆ ನಿರ್ದೇಶನ ನೀಡಲಾಗಿದೆ.

B.Y. Raghavendra ವಿಷಯ ಗಮನಕ್ಕೆ ಬರುತ್ತಿದ್ದಂತೆ, ಶಿವಮೊಗ್ಗ ಜಿಲ್ಲಾಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದು, ಶಿವಮೊಗ್ಗ ಜಿಲ್ಲೆಯಲ್ಲಿ ಅಣು ವಿದ್ಯುತ್ ಸ್ಥಾವರ ಸ್ಥಾಪನೆ ಕುರಿತು ರಾಜ್ಯ ಸರ್ಕಾರಕ್ಕೆ ಯಾವುದೇ ಪ್ರಸ್ತಾವನೆ ಸಲ್ಲಿಸಲಾಗಿಲ್ಲವೆಂದು ಜಿಲ್ಲಾಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಶರಾವತಿ ಸಂತ್ರಸ್ತರಿಗೆ ಇಂದಿಗೂ ಸಮರ್ಪಕ ಭೂಪರಿಹಾರ ಒದಗಿಸಲಾಗಿಲ್ಲ ಹಾಗೂ ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಗೆ ಸಂಬಂಧಿಸಿದಂತೆ ಶಿವಮೊಗ್ಗ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಪರಿಸರ ಆಸಕ್ತರು ಮತ್ತು ಬುದ್ಧಿ ಜೀವಿಗಳು ವ್ಯಾಪಕ ವಿರೋಧ ವ್ಯಕ್ತಪಡಿಸಿರುತ್ತಾರೆ. ಈ ಸಂಬಂಧ ಕೇಂದ್ರ ಸಚಿವರಿಗೆ ಅಣು ವಿದ್ಯುತ್ ಸ್ಥಾವರ ಯೋಜನೆಯನ್ನು ಜಿಲ್ಲೆಯಲ್ಲಿ ಅನುಷ್ಟಾನಗೊಳಿದಂತೆ ಪ್ರಸ್ತಾವನೆಯನ್ನು ಕೈಬಿಡಲು ಮನವರಿಕೆ ಮಾಡಿಕೊಡಲಾಗುವುದು.

ಈ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಅಣು ವಿದ್ಯುತ್ ಸ್ಥಾವರ ಸ್ಥಾಪನೆ ಕುರಿತು ಸಾರ್ವಜನಿಕರು ಅನಾವಶ್ಯಕವಾಗಿ ಆತಂಕಕ್ಕೊಳಗಾಗುವ ಅಗತ್ಯವಿಲ್ಲ. ಪರಿಸರ ಹಾನಿ ಉಂಟಾಗುವ ಯಾವುದೇ ಯೋಜನೆಗೂ ತಮ್ಮ ಸ್ಪಷ್ಟ ವಿರೋಧವಿದ್ದು, ಜನರ ಹಿತಾಸಕ್ತಿ ಕಾಪಾಡಲು ಬದ್ಧರಾಗಿರುವುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...

ಸಮಾನತೆ, ಸ್ವಾವಲಂಬನೆ ಸಾಧಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಅಪಾರ : ಶ್ರೀರಂಭಾಪುರಿಶ್ರೀ

ಸಮಾನತೆ, ಸ್ವಾವಲಂಬನೆ ಸಾಧನೆಯಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವವಾದದು. ಅಭಿವೃದ್ಧಿಯನ್ನು ಸಾಧಿಸಲು...