Monday, April 27, 2026
Monday, April 27, 2026

B.Y. Raghavendra ಕಳೆದ ರಾತ್ರಿ ಜಿಲ್ಲೆಯಾದ್ಯಂತ ಸುರಿದ ಮಳೆ:ವಿವಿಧೆಡೆ ಹಾನಿ, ತಕ್ಷಣ ಕ್ರಮಕೈಗೊಳ್ಳಿ-ಸಂಸದ ರಾಘವೇಂದ್ರ

Date:

B.Y. Raghavendra ಶಿವಮೊಗ್ಗ ಜಿಲ್ಲೆಯಾದ್ಯಂತ ಕಳೆದ ರಾತ್ರಿ ಸುರಿದ ಭಾರೀ ಮಳೆ ಹಾಗೂ ಬಿರುಗಾಳಿಯಿಂದಾಗಿ ರೈತರ ಬೆಳೆ ಹಾನಿ, ಮನೆಗಳ ಮೇಲ್ಛಾವಣಿ ಕುಸಿತ ಹಾಗೂ ವಿದ್ಯುತ್ ವ್ಯತ್ಯಯದಂತಹ ಗಂಭೀರ ಸಮಸ್ಯೆಗಳು ಎದುರಾಗಿವೆ. ಈ ಕುರಿತು ಬಿ.ವೈ.ರಾಘವೇಂದ್ರ ಅವರು ಬಿಜೆಪಿ ಜಿಲ್ಲಾ ಘಟಕದ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿ, ತುರ್ತು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.

ತ್ವರಿತ ಸಮೀಕ್ಷೆ ಮತ್ತು ಪರಿಹಾರ: ಮಳೆಯಿಂದ ಮನೆ ಕಳೆದುಕೊಂಡವರಿಗೆ ಹಾಗೂ ಅಡಿಕೆ ಸೇರಿದಂತೆ ವಿವಿಧ ಬೆಳೆ ಹಾನಿಗೊಳಗಾದ ರೈತರಿಗೆ ಜಿಲ್ಲಾಡಳಿತವು ತಕ್ಷಣವೇ ಸಮೀಕ್ಷೆ ನಡೆಸಿ ಸೂಕ್ತ ಪರಿಹಾರ ವಿತರಿಸಬೇಕು. ವಿದ್ಯುತ್ ಸಂಪರ್ಕ ಪುನರ್ ಸ್ಥಾಪನೆ: ಜಿಲ್ಲೆಯ ಅನೇಕ ಕಡೆ ನೂರಾರು ವಿದ್ಯುತ್ ಕಂಬಗಳು ಧರೆಗುರುಳಿವೆ. ಮೆಸ್ಕಾಂ ಅಧಿಕಾರಿಗಳು ಯುದ್ಧೋಪಾದಿಯಲ್ಲಿ ಕೆಲಸ ನಿರ್ವಹಿಸಿ, ತುಂಡಾದ ತಂತಿಗಳನ್ನು ಸರಿಪಡಿಸಿ ಶೀಘ್ರವಾಗಿ ವಿದ್ಯುತ್ ಸಂಪರ್ಕ ಕಲ್ಪಿಸಬೇಕು.
ಸಾರ್ವಜನಿಕ ಸುರಕ್ಷತೆ: ರಸ್ತೆಗೆ ಬಿದ್ದಿರುವ ಮರಗಳನ್ನು ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಹಾಗೂ ತುಂಡಾಗಿ ಬಿದ್ದಿರುವ ತಂತಿಗಳಿಂದ ಜನ-ಜಾನುವಾರುಗಳಿಗೆ ತೊಂದರೆಯಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ಹೇಳಿದರು.

B.Y. Raghavendra ಜನಸಾಮಾನ್ಯರ ಈ ಸಂಕಷ್ಟಕ್ಕೆ ಜಿಲ್ಲಾಡಳಿತ ಮತ್ತು ಮೆಸ್ಕಾಂ ಅಧಿಕಾರಿಗಳು ಶೀಘ್ರವಾಗಿ ಸ್ಪಂದಿಸದಿದ್ದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಈ ಮೂಲಕ ಎಚ್ಚರಿಸಲಾಗಿದೆ. ಸಂಕಷ್ಟದಲ್ಲಿರುವ ಜಿಲ್ಲೆಯ ಜನರೊಂದಿಗೆ ನಾವಿದ್ದೇವೆ ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ನಾರಿ ಶಕ್ತಿ ವಂದನ ವಿರೋಧಿಸಿದ ಕಾಂಗ್ರೆಸ್ ವಿರುದ್ಧ ಶಾಸಕ ಚನ್ನಿ ಆಕ್ರೋಶ

S.N. Channabasappa ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಐತಿಹಾಸಿಕ 'ನಾರಿ ಶಕ್ತಿ...

Madhu Bangarappa ಗಾಳಿಮಳೆಯಿಂದಾದ ಹಾನಿಗೆ ಸೂಕ್ತ ಕ್ರಮಕ್ಕೆ ಸೂಚನೆ : ಎಸ್ಸೆಸ್ಎಲ್ಸಿ & ಪಿಯು ಅತ್ಯುತ್ತಮ ಫಲಿತಾಂಶ- ಮಧುಬಂಗಾರಪ್ಪ

Madhu Bangarappa ಶಿಕ್ಷಣ ಇಲಾಖೆಯಲ್ಲಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ರವರ ವಿಚಾರಧಾರೆಗಳನ್ನು...

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ : ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ (ರಿ.), ಶಿವಮೊಗ್ಗ ಜಿಲ್ಲಾ ಘಟಕದ ೨ನೇ...

Kuvempu University ಡಿವಿಎಸ್ ಕಾಲೇಜಿಗೆ “ಕಾಲೇಜು ಕ್ರೀಡಾಕೂಟ-26 “ಸಮಗ್ರ ಪ್ರಶಸ್ತಿ

Kuvempu University ಶಿವಮೊಗ್ಗ ನಗರದ ನೆಹರು ಕ್ರೀಡಾಂಗಣದಲ್ಲಿ ಆಯೋಜಿಸಿದ್ದ 38ನೇ ಅಂತರ...