Tuesday, April 28, 2026
Tuesday, April 28, 2026

Backward Classes Welfare Department ಭಾರತೀಯ ಸೇನೆ/ ಇತರೆ ಯೂನಿಫಾರ್ಮ್ ಸೇವೆಗೆ ಸೇರಬಯಸುವ ಅಭ್ಯರ್ಥಿಗಳಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಪ್ರಕಟಣೆ

Date:

Backward Classes Welfare Department ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಭಾರತೀಯ ಸೇನೆ/ಇತರೆ ಯೂನಿಫಾರ್ಮ ಸೇವೆಗಳಿಗೆ ಸೇರ ಬಯಸುವ ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 2(ಎ), 3(ಎ) ಹಾಗೂ 3(ಬಿ) ಗಳ ಅರ್ಹ ಅಭ್ಯರ್ಥಿಗಳಿಗೆ ಆಯ್ಕೆಯ ಪೂರ್ವಸಿದ್ದತೆ ಬಗ್ಗೆ ವೃತ್ತಿ ಮಾರ್ಗದರ್ಶನ ಹಾಗೂ ತರಬೇತಿಗೆ (ಬಾಲಕರಿಗೆ ಮಾತ್ರ) ಅರ್ಜಿ ಆಹ್ವಾನಿಸಿದೆ.

ಅಭ್ಯರ್ಥಿಗಳು ನಿಗದಿತ ನಮೂನೆ ಅರ್ಜಿಯನ್ನು ಆಯಾ ಜಿಲ್ಲೆಯ ಜಿಲ್ಲಾ/ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಗೆ ಅರ್ಜಿಯನ್ನು ಖುದ್ದಾಗಿ ಅಥವಾ ನೋಂದಾಯಿತ ಅಂಚೆಯ ಮೂಲಕ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ಸುವರ್ಣ ವಿಧಾನಸೌಧ, ಹಲಗಾ, ಬೆಳಗಾವಿ-590010 ಇಲ್ಲಿಗೆ ಮೇ.11 ರೊಳಗಾಗಿ ಸಲ್ಲಿಸುವುದು.

ಅಭ್ಯರ್ಥಿ ಮತ್ತು ಕುಟುಂಬದ ಒಟ್ಟು ಗರಿಷ್ಠ ವಾರ್ಷಿಕ ಆದಾಯ ಮಿತಿ ಪ್ರವರ್ಗ-1ಕ್ಕೆ ರೂ.2.50 ಲಕ್ಷ ಹಾಗೂ ಪ್ರವರ್ಗ-2(ಎ), 3(ಎ) ಮತ್ತು 3(ಬಿ) ಗಳಿಗೆ ರೂ.1 ಲಕ್ಷ ಒಳಗೊಂಡಿರಬೇಕು. ಅಭ್ಯರ್ಥಿಯು 10 ನೇ ತರಗತಿಯನ್ನು ಉತ್ತೀರ್ಣವಾಗಿದ್ದು, ಪ್ರತಿ ವಿಷಯದಲ್ಲಿ ಕನಿಷ್ಠ 33 ಅಂಕಗಳು ಮತ್ತು ಸರಾಸರಿ ಶೇ.45 ರಷ್ಟು ಅಂಕಗಳನ್ನು ಪಡೆದಿರಬೇಕು.

ಗ್ರೇಡಿಂಗ್ ಸಿಸ್ಟಮ್ ಇದ್ದಲ್ಲಿ ಮೇಲ್ಕಂಡಂತೆ ಸಮಾನವಾದ ಗ್ರೇಡ್ ಪಡೆದಿರಬೇಕು.

ಜನ್ಮ ದಿನಾಂಕ ಮತ್ತು ವಯಸ್ಸು ದಿ:11-05-2026 ಕ್ಕೆ ಅನ್ವಯಿಸುವಂತೆ ಅಭ್ಯರ್ಥಿಯುಘ ದಿ:11-05-2006 ರಿಂದ ದಿ:11-03-2009 ರ ನಡುವಿನ ಅವಧಿಯಲ್ಲಿ ಜನಿಸಿರಬೇಕು. ತರಬೇತಿಯನ್ನು ಬೆಳಗಾವಿಯಲ್ಲಿ ನೀಡಲಾಗುತ್ತಿದ್ದು, ಅರ್ಹ ಅಭ್ಯರ್ಥಿಗಳು ರ‍್ಯಾಲಿಯಲ್ಲಿ 10ನೇ ತರಗತಿ ಅಂಕಪಟ್ಟಿ, ಆಧಾರ್ ಕಾರ್ಡ್, ಜಾತಿ & ಆದಾಯ ಪ್ರಮಾಣ ಪತ್ರಗಳ ಮೂಲ ದಾಖಲೆಗಳೊಂದಿಗೆ ಭಾಗವಹಿಸುವಂತೆ ಇಲಾಖೆಯ ಜಿಲ್ಲಾ ಅಧಿಕಾರಿಗಳು ತಿಳಿಸಿರುತ್ತಾರೆ.

ತರಬೇತಿ ಅವಧಿಯು 4 ತಿಂಗಳುಗಳಾಗಿದ್ದು, ಅಭ್ಯರ್ಥಿಗಳಿಗೆ ತರಬೇತಿ ನೀಡಲು ತಗಲುವ ವಾಸ್ತವಿಕ ವೆಚ್ಚವನ್ನು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಭರಿಸಲಾಗುತ್ತದೆ. ಒಂದು ಜೊತೆ ಟ್ರಾಕ್ ಸೂಟ್, ಶೂ ಹಾಗೂ ದೈಹಿಕ ತರಬೇತಿಯ ಸಮವಸ್ತ್ರವನ್ನು ನೀಡಲಾಗುವುದು.

Backward Classes Welfare Department ತರಬೇತಿ ಅವಧಿಯಲ್ಲಿ ಅಭ್ಯರ್ಥಿಗಳು ಕಡ್ಡಾಯವಾಗಿ ತರಬೇತಿ ಕೇಂದ್ರದಲ್ಲಿಯೇ ಉಳಿದುಕೊಳ್ಳಬೇಕಾಗಿದ್ದು, ವಸತಿ ಮತ್ತು ಊಟದ ಸೌಲಭ್ಯವನ್ನು ಉಚಿತವಾಗಿ ನೀಡಲಾಗುವುದು. ತರಬೇತಿಯನ್ನು ಪೂರ್ಣಗೊಳಿಸದೆ ಮೊಟಕುಗೊಳಿಸಿದಲ್ಲಿ ಅಂತಹ ಅಭ್ಯರ್ಥಿಯ ತರಬೇತಿ ವೆಚ್ಚವನ್ನು ಆ ಅಭ್ಯರ್ಥಿ ಮತ್ತು ಅವರ ತಂದೆ/ತಾಯಿ/ಪೋಷಕರಿಂದ ವಸೂಲಿ ಮಾಡಲಾಗುವುದು.

ತರಬೇತಿಗೆ ಆಯ್ಕೆಯಾಗುವ ಅಭ್ಯಥಿಗಳಿಗೆ 4 ತಿಂಗಳ ಅವಧಿಯಲ್ಲಿ ದೈಹಿಕ ಸಹಿಷ್ಣುತೆ ಹಾಗೂ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ತರಬೇತಿ ನೀಡಲಾಗುವುದು.
ಹೆಚ್ಚಿನ ಮಾಹಿತಿಗಾಗಿ ದೂ.ಸಂ: 0831-2225078 ಮತ್ತು 08182-2407221 ಗಳನ್ನು ಸಂಪರ್ಕಿಸುವುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಏಪ್ರಿಲ್ 30. ಮಾಚೇನಹಳ್ಳಿ ಜಯಂತಿ ಗ್ರಾಮ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ, ಮೆಸ್ಕಾಂ ಪ್ರಕಟಣೆ

ಶಿವಮೊಗ್ಗ ಮಾಚೇನಹಳ್ಳಿ 110/11ಕೆವಿ ವಿದ್ಯುತ್ ವಿತರಣಾ ಕೇಂದ್ರ ಮಾರ್ಗಗಳಲ್ಲಿ ರಸ್ತೆ ಅಗಲೀಕರಣ...

JCI Shivamogga ಶಿವಮೊಗ್ಗದಲ್ಲಿ ಜೇಸೀಸ್ ಆಶ್ರಯದಲ್ಲಿ ಆ್ಯಕ್ಷನ್ ಫ್ರೇಮ್ ವರ್ಕ್ ಟ್ರೈನಿಂಗ್

JCI Shivamogga ಶಿವಮೊಗ್ಗ ನಗರದ ಜೆಸಿಐ ಶಿವಮೊಗ್ಗ ಭಾವನ ಮತ್ತು ಜೆಸಿಐ...

Rotary Shivamogga ಸಂಘ ಸಂಸ್ಥೆಗಳು ಸರ್ಕಾರಿ ಶಾಲೆಗಳಿಗೆ ಅಗತ್ಯ ಸೌಕರ್ಯ ಒದಗಿಸಬೇಕು- ಕೆ.ಫಾಲಾಕ್ಷ

Rotary Shivamogga ಗ್ರಾಮೀಣ ಭಾಗದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡುವುದು...

Kuvempu University ಕುವೆಂಪು ವಿವಿ, ಸಮಾಜಕಾರ್ಯ ವಿಭಾಗದಿಂದ ಪ್ರಶಿಕ್ಷಣ ಶಿಬಿರ

Kuvempu University ಕುವೆಂಪು ವಿಶ್ವವಿದ್ಯಾಲಯ ಸ್ನಾತಕೋತ್ತರ ಸಮಾಜಕಾರ್ಯ ವಿಭಾಗದಿಂದ ಕೋಮಾರನಹಳ್ಳಿ ಗ್ರಾಮ...