Thursday, September 17, 2026
Thursday, September 17, 2026

S.N. Channabasappa ನಗರದ ಬಡಾವಣೆಗಳಲ್ಲಿನ ಚರಂಡಿ ಸಮಸ್ಯೆ ತ್ವರಿತ ಬಗೆಹರಿಸಿ- ಶಾಸಕ ಎಸ್.ಎನ್.ಚನ್ನಬಸಪ್ಪ

Date:

S.N. Channabasappa ಶಿವಮೊಗ್ಗ ನಗರದ ಬಡಾವಣೆಗಳಲ್ಲಿನ ಚರಂಡಿ ವ್ಯವಸ್ಥೆ ಸುಧಾರಣೆಗೆ ಹೆಚ್ಚಿನ ಒತ್ತು ನೀಡಲಾಗುತ್ತಿದ್ದು, ಸಾರ್ವಜನಿಕರಿಗೆ ತೊಂದರೆಯಾಗದಂತೆ ಅಧಿಕಾರಿಗಳು ಎಚ್ಚರವಹಿಸಬೇಕು,” ಎಂದು ಶಿವಮೊಗ್ಗ ನಗರ ಶಾಸಕ ಶ್ರೀ ಎಸ್.ಎನ್. ಚನ್ನಬಸಪ್ಪ (ಚೆನ್ನಿ) ಅವರು ತಿಳಿಸಿದರು.

ಇಂದು ವಾರ್ಡ್ ಸಂಖ್ಯೆ 8ರ ವಿನೋಬನಗರ ಬಡಾವಣೆಗೆ ಭೇಟಿ ನೀಡಿ ಸ್ಥಳೀಯರ ಅಹವಾಲು ಸ್ವೀಕರಿಸಿ ಅವರು ಮಾತನಾಡಿದರು. ಬಡಾವಣೆಯ ನಿವಾಸಿಗಳು ಡ್ರೈನೇಜ್ ಸಮಸ್ಯೆಯಿಂದ ಎದುರಿಸುತ್ತಿರುವ ತೊಂದರೆಯನ್ನು ಶಾಸಕರ ಗಮನಕ್ಕೆ ತಂದರು. ಕೂಡಲೇ ಕಾರ್ಯಪ್ರವೃತ್ತರಾದ ಶಾಸಕರು, ಸ್ಥಳದಲ್ಲಿದ್ದ ಪಾಲಿಕೆ ಇಂಜಿನಿಯರ್‌ಗಳಿಗೆ ಸಮಸ್ಯೆಗಳನ್ನು ಶೀಘ್ರವೇ ಸರಿಪಡಿಸಲು ಆದೇಶಿಸಿದರು.

S.N. Channabasappa ಜನಸಂಪರ್ಕದ ಮೂಲಕ ಜನರ ಸಮಸ್ಯೆಗಳನ್ನು ನೇರವಾಗಿ ತಿಳಿದು ಪರಿಹರಿಸುವ ಕಾರ್ಯ ನಿರಂತರವಾಗಿ ನಡೆಯಲಿದೆ ಎಂದು ಅವರು ಈ ಸಂದರ್ಭದಲ್ಲಿ ಭರವಸೆ ನೀಡಿದರು. ಈ ವೇಳೆ ಪಾಲಿಕೆ ಅಧಿಕಾರಿಗಳು ಹಾಗೂ ಬಡಾವಣೆಯ ಪ್ರಮುಖರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...