Friday, May 1, 2026
Friday, May 1, 2026

Mysore Chamarajendra Government College of Visual Arts ಮೈಸೂರು ದೃಶ್ಯಕಲಾ ಕಾಲೇಜಿನಲ್ಲಿ 2026-27 ನೇ ಸಾಲಿಗೆ ಮಾತ್ರ ಅತಿಥಿ ಉಪನ್ಯಾಸಕ/ಸಂಪನ್ಮೂಲ ವ್ಯಕ್ತಿಗಳ ಸ್ಥಾನಕ್ಕೆ ನೇಮಕಾತಿ ಪ್ರಕಟಣೆ

Date:

Mysore Chamarajendra Government College of Visual Arts ಮೈಸೂರು ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜಿನಲ್ಲಿ 2026-27ನೇ ಶೈಕ್ಷಣಿಕ ಸಾಲಿಗೆ ಮಾತ್ರ ಅತಿಥಿ ಉಪನ್ಯಾಸಕ/ಸಂಪನ್ಮೂಲ ವ್ಯಕ್ತಿಗಳಾಗಿ ಬೋಧನೆ ಮಾಡಲು ಇಚ್ಛಿಸುವವರಿಂದ ಗೌರವ ಸಂಭಾವನೆ ಆಧಾರದ ಮೇಲೆ ಷರತ್ತು ಹಾಗೂ ನಿಬಂಧನೆಗಳನ್ವಯ ಕಾರ್ಯನಿರ್ವಹಿಸಲು ಅರ್ಜಿಗಳನ್ನು ಅಹ್ವಾನಿಸಿದೆ.

ಬಿ.ವಿ.ಎ/ಎಂ.ಬಿ.ಎ.ವಿದ್ಯಾರ್ಥಿಗಳು ಸೇರಿದಂತೆ ಅನ್ವಯ ಕಲೆ, ಚಿತ್ರಕಲೆ, ಶಿಲ್ಪಕಲೆ, ಅಚ್ಚುಕಲೆ(ಗ್ರಾಫಿಕ್ಸ್) ಛಾಯಾಚಿತ್ರ ಮತ್ತು ಛಾಯಾಚಿತ್ರ ಪತ್ರಿಕೋದ್ಯಮಗಳ ಪ್ರಾಯೋಗಿಕ ಮತ್ತು ಥಿಯರಿ, ಕಲಾ ಇತಿಹಾಸದ ಥಿಯರಿ ಬೋಧನೆಗೆ ಅಂಗೀಕೃತ ವಿಶ್ವವಿದ್ಯಾಲಯದಿಂದ ಸಂಬಂಧಪಟ್ಟ ವಿಷಯದಲ್ಲಿ ಸ್ನಾತಕೋತ್ತರ ಪದವಿಯಲ್ಲಿ ಕನಿಷ್ಠ 55%ರಷ್ಟು ಅಂಕಗಳನ್ನು ಪಡೆದು ಉತ್ತೀರ್ಣರಾಗಿರಬೇಕು.

ಕನ್ನಡ, ಇಂಗ್ಲೀಷ್, ಹಿಂದಿ ಭಾಷಾ ವಿಷಯಗಳಿಗೆ ಸಂಬಂಧಿಸಿದಂತೆ ಆಯಾ ಭಾಷಾ ಸ್ನಾತಕೋತ್ತರ ಪದವಿ ಪಡೆದಿರಬೇಕು. ಭಾರತ ಮತ್ತು ಭಾರತೀಯ ಸಂವಿಧಾನ ಹಾಗೂ ಸಂವಿಧಾನದ ಮೌಲ್ಯಗಳು ವಿಷಯಕ್ಕೆ ಸಂಬಂಧಿಸಿದಂತೆ ಕಾನೂನು ವಿಷಯದಲ್ಲಿ ಸ್ನಾತಕೋತ್ತರ ಪದವಿ ಮತ್ತು ಮತ್ತು ಪರಿಸರ ಅಧ್ಯಯನಕ್ಕೆ ಸಂಬಂಧಿಸಿದಂತೆ ಎಂ.ಎಸ್‌ಸಿ (ಇವಿಎಸ್) ಸ್ನಾತಕೋತ್ತರ ಪದವಿ ಪಡೆದಿರಬೇಕು.

chamarajendra Government College of Visual Arts ಆಸಕ್ತರು ಕರ್ನಾಟಕ ಸರ್ಕಾರದ ಅಂತರ್ಜಾಲ www.mysore.nic.in ಮತ್ತು www.cavamysore.karnataka.gov.in ದ ಮೂಲಕ ಮಾಹಿತಿ ಪಡೆದು ಅರ್ಜಿಯನ್ನು ಮೇ 15 ರೊಳಗಾಗಿ ಸಲ್ಲಿಸುವುದು. ಮೇ 19 ರಂದು 11.00ಕ್ಕೆ ಸಂಸ್ಥೆಯಲ್ಲಿ ಸಂದರ್ಶನ ನಡೆಸಿ ತರಗತಿಗಳು ಅನ್ವಯವಾಗುವಂತೆ ಕಾರ್ಯ ನಿರ್ವಹಿಸಲು ತಿಳಿಸಲಾಗುವುದು ಎಂದು ಮೈಸೂರು ಕಾವಾ ಡೀನ್ ತಿಳಿಸಿರುತ್ತಾರೆ.

ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್ ಹಾಗೂ ದೂ.ಸಂ.: 0821-2438931 ನ್ನು ಸಂಪರ್ಕಿಸುವುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kuvempu University ಶಿವಮೊಗ್ಗ ಸಹ್ಯಾದ್ರಿ ವಿಜ್ಞಾನ ಕಾಲೇಜಿನಲ್ಲಿ ಬಿಎಸ್ಸಿ,/ಬಿಸಿಎ ಪದವಿಗೆ ಪ್ರವೇಶಾತಿಗೆ ಅರ್ಜಿ ಆಹ್ವಾನ

Kuvempu University ಕುವೆಂಪು ವಿಶ್ವವಿದ್ಯಾನಿಲಯದ ಘಟಕ ಕಾಲೇಜಾದ ಶಿವಮೊಗ್ಗ ಸಹ್ಯಾದ್ರಿ ವಿಜ್ಞಾನ...

Shivamogga District Police ಸಾರ್ವಜನಿಕ ಸ್ಥಳದಲ್ಲಿ ಮದ್ಯಪಾನ: ಡ್ರೋನ್ ಮೂಲಕ ಪತ್ತೆ. ಮೂವರ ಬಂಧನ.

Shivamogga District Police ಶಿವಮೊಗ್ಗ ಜಿಲ್ಲಾ ಪೊಲೀಸ್ ವತಿಯಿಂದ ಕಾನೂನು ಬಾಹೀರ...

B.Y. Raghavendra ಶಂಕರಘಟ್ಟದ ಕಾಲೇಜಿನ ವಿದ್ಯಾರ್ಥಿಗಳ ಪ್ರವಾಸಿ ಬಸ್ ಅಪಘಾತದಲ್ಲಿ ಈರ್ವರ ಸಾವು : ಸಂಸದ ರಾಘವೇಂದ್ರ ಸಂತಾಪ

B.Y. Raghavendra ಕುಂದಾಪುರ ತಾಲ್ಲೂಕಿನ ಮರವಂತೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ...