Friday, August 7, 2026
Friday, August 7, 2026

Department of School Education and Literacy ಮೇ 2.ಶಿವಮೊಗ್ಗ ಬೊಮ್ಮನಕಟ್ಟೆ ಆಶ್ರಯ ಬಡಾವಣೆಗೆ” ದಿ.ಎಸ್.ಬಂಗಾರಪ್ಪ ಬಡಾವಣೆ” ನಾಮಕರಣ ಕಾರ್ಯಕ್ರಮ

Date:

Department of School Education and Literacy ಶಿವಮೊಗ್ಗ ಮಹಾನಗರ ಪಾಲಿಕೆಯ ವತಿಯಿಂದ ಮಹಾತ್ಮ ಗಾಂಧಿ ನಗರ ವಿಕಾಸ ಯೋಜನೆ (ಹಂತ-2), ಎನ್.ಜಿ.ಟಿ. ಅನುದಾನದ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಬೊಮ್ಮನಕಟ್ಟೆ ಆಶ್ರಯ ಬಡಾವಣೆಗೆ ಮಾಜಿ ಮುಖ್ಯಮಂತ್ರಿ “ದಿ|| ಶ್ರೀ ಎಸ್. ಬಂಗಾರಪ್ಪ ಬಡಾವಣೆ” ಎಂಬ ನಾಮಕರಣ ಸಮಾರಂಭವನ್ನು ಮೇ 02 ರಂದು ಬೆಳಗ್ಗೆ ಬೊಮ್ಮನಕಟ್ಟೆ ‘ಬಿ’ ಬ್ಲಾಕ್‌ನಲ್ಲಿ ಹಮ್ಮಿಕೊಳ್ಳಲಾಗಿದೆ.

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖಾ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧುಬಂಗಾರಪ್ಪ ಇವರು ಕಾರ್ಯಕ್ರಮದ ಉದ್ಘಾಟನೆ ನೆರವೇರಿಸುವರು. ಶಾಸಕ ಎಸ್.ಎನ್. ಚನ್ನಬಸಪ್ಪರವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.

ನಗರಾಭಿವೃದ್ಧಿ ಮತ್ತು ನಗರ ಯೋಜನಾ ಸಚಿವ ಬಿ.ಎಸ್. ಸುರೇಶ್‌ರವರು ವಿಶೇಷ ಆಹ್ವಾನಿತರಾಗಿ ಉಪಸ್ಥಿತರಿರಲಿದ್ದಾರೆ.
ಕಾರ್ಯಕ್ರಮದಲ್ಲಿ ಸಂಸದರು, ವಿಧಾನಸಭಾ ಮತ್ತು ವಿಧಾನ ಪರಿಷತ್ ಶಾಸಕರು, ಪಾಲಿಕೆ ಮಹಾಪೌರರು, ಜನಪ್ರತಿನಿಧಿಗಳು, ವಿವಿಧ ನಿಗಮ, ಮಂಡಳಿ, ಪ್ರಾಧಿಕಾರಗಳ ಅಧ್ಯಕ್ಷರು, ಜಿಲ್ಲೆಯ ಎಲ್ಲಾ ಗೌರವಾನ್ವಿತ ಜನಪ್ರತಿನಿಧಿಗಳು, ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿವರ್ಗ ಮತ್ತು ವಿವಿಧ ಸಂಘಟನೆಗಳ ಮುಖಂಡರು, ಪದಾಧಿಕಾರಿಗಳು ಹಾಗೂ ಸದಸ್ಯರು, ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಜಿ.ಪಂ ಸಿಇಓ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ಹಾಗೂ ಮಹಾನಗರ ಪಾಲಿಕೆ ಆಯುಕ್ತರು ಹಾಗೂ ಉಪ ಆಯುಕ್ತರು ಮತ್ತು ಪಾಲಿಕೆಯ ಅಧಿಕಾರಿ/ಸಿಬ್ಬಂದಿ ವರ್ಗದವರು ಮತ್ತು ಇನ್ನಿತರ ಗಣ್ಯರು, ಅಧಿಕಾರಿಗಳು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Jog Falls ಪ್ರತೀ ಶನಿವಾರ & ಭಾನುವಾರ ರಸ್ತೆ ಸಾರಿಗೆ ನಿಗಮದಿಂದಸಿಗಂದೂರು- ಜೋಗ ಪ್ರವಾಸಿ ಪ್ಯಾಕೇಜ್ ಘೋಷಣೆ.

Jog Falls ಪ್ರಸ್ತುತ ಮಳೆಗಾಲದಲ್ಲಿ ಪ್ರವಾಸಿಗರ ನೆಚ್ಚಿನ ತಾಣವಾಗಿರುವ ವಿಶ್ವವಿಖ್ಯಾತ ಜೋಗ್‌ಫಾಲ್ಸ್...

Shivamogga News ಥಣ್ಣಗಾಗುತ್ತಿರುವ ಸಚಿವಾಕಾಂಕ್ಷಿತನ..…ಶಿವಕೌಶಲ

Shivamogga News ರಾಜಕೀಯದಲ್ಲಿ ಸ್ಥಿರತೆ ಯಾವತ್ತಿಗೂ ನಿರೀಕ್ಷಿಸಲಾಗದು ಎಂಬ ಮುತ್ಸದ್ದಿಗಳ ಮಾತಿದೆ....