Shivamogga District Tourism Department ಶಿವಮೊಗ್ಗ ಜಿಲ್ಲಾ ಪ್ರವಾಸೋದ್ಯಮ ಇಲಾಖೆಯು ಎಸ್.ಸಿ/ಎಸ್.ಟಿ/ಟಿಎಸ್‌ಪಿ ಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಪ್ರವಾಸೋದ್ಯಮದ ಆತಿಥ್ಯ ಕ್ಷೇತ್ರದಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮ ಆಯೋಜಿಸಿದ್ದು, ಜಿಲ್ಲೆಯಲ್ಲಿನ 20 ರಿಂದ 45 ವರ್ಷ ವಯೋಮಿತಿಯ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
Shivamogga District Tourism Department 8ನೇ ತರಗತಿ ಪಾಸಾದವರಿಗೆ 5 ತಿಂಗಳ ವಿವಿಧ ಆಹಾರ ತಯಾರಕರು (Multi Cuisine Cook) ಮತ್ತು 5 ತಿಂಗಳ ಕೊಠಡಿ ನಿರ್ವಾಹಕರು (Room Attendant) ಹಾಗೂ 10ನೇ ತರಗತಿ ಪಾಸಾದವರಿಗೆ 4 ತಿಂಗಳ ಆಹಾರ ಮತ್ತು ಪಾನೀಯಗಳ ವಿತರಣೆ (Food & Beverage Service Steward) ತರಬೇತಿ ನೀಡಲಾಗುತ್ತಿದ್ದು, ಆಸಕ್ತರು ನಿಗದಿತ ನಮೂನೆ ಅರ್ಜಿಯನ್ನು ಸಹಾಯಕ ನಿರ್ದೇಶಕರು, ಪ್ರವಾಸೋದ್ಯಮ ಇಲಾಖೆ, ಶಿವಮೊಗ್ಗ ಕಚೇರಿಯಿಂದ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಆಧಾರ್ ಕಾರ್ಡ್ ಪ್ರತಿ, ಜಾತಿ ಪ್ರಮಾಣ ಪತ್ರ, ವಿದ್ಯಾರ್ಹತೆಯ ಅಂಕ ಪಟ್ಟಿ ಹಾಗೂ 2 ಭಾವಚಿತ್ರಗಳೊಂದಿಗೆ ಮೇ 31ರೊಳಗಾಗಿ ಸಲ್ಲಿಸುವಂತೆ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ ದೂ.ಸಂ.: 08182-251444 ನ್ನು ಸಂಪರ್ಕಿಸುವುದು.
