Chamber of Commerce Shivamogga ಹೈಕೋರ್ಟ್ ಸಂಚಾರಿ ಪೀಠ ಶಿವಮೊಗ್ಗದಲ್ಲಿ ಸ್ಥಾಪನೆಯಾಗಬೇಕು ಎಂದು ಶಿವಮೊಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಬಿ.ಗೋಪಿನಾಥ್ ಒತ್ತಾಯಿಸಿದ್ದಾರೆ.
ಹೈಕೋರ್ಟ್ ಸಂಚಾರಿ ಪೀಠ ಶಿವಮೊಗ್ಗದಲ್ಲಿ ಸ್ಥಾಪನೆ ಆಗಬೇಕು. ಬೇರೆ ಜಿಲ್ಲೆಗೆ ಯಾವುದೇ ಕಾರಣಕ್ಕೂ ವರ್ಗಾವಣೆ ಆಗಬಾರದು ಎನ್ನುವ ವಕೀಲರ ಸಂಘದ ಹೋರಾಟಕ್ಕೆ ಶಿವಮೊಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಪೂರ್ಣ ಬೆಂಬಲವಿದೆ ಎಂದು ತಿಳಿಸಿದ್ದಾರೆ.
ಕಂಠೀರವ ಸ್ಟುಡಿಯೋಸ್ ಅಧ್ಯಕ್ಷರ ಆಶಯದಂತೆ ಸ್ಟುಡಿಯೋದ ನೂತನ ಘಟಕ ಸ್ಥಾಪಿಸಲು ಹಾರನಹಳ್ಳಿ ಹೋಬಳಿಯ ಜಾಜುಹಳ್ಳಿ ಗ್ರಾಮದಲ್ಲಿ ಲಭ್ಯವಿರುವ 25 ಎಕರೆ ಜಮೀನು ಮಂಜೂರಾತಿ ಪ್ರಸ್ತಾಪಕ್ಕೆ ಒಪ್ಪಿಗೆ ನೀಡಬೇಕು. ಶಿವಮೊಗ್ಗದ ನೈಸರ್ಗಿಕ ಸೌಂದರ್ಯವು ಹೊರಾಂಗಣ ಚಿತ್ರೀಕರಣಕ್ಕೆ ಪೂರಕವಾಗಿದೆ. ಉಡುಪಿ, ಮಂಗಳೂರು, ಚಿಕ್ಕಮಗಳೂರು ಮತ್ತು ಕಾರವಾರ ಜಿಲ್ಲೆಗಳು ಸಮೀಪ ಇರುವ ಕಾರಣ ಈ ಸ್ಥಳ ಆಯ್ಕೆ ಮಾಡಲಾಗಿದೆ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕಾರ್ಯದರ್ಶಿ ಪತ್ರ ಬರೆದಿದ್ದು, ಜಿಲ್ಲಾಧಿಕಾರಿಗಳು ಆದಷ್ಟು ಬೇಗ ಜಮೀನು ಮಂಜೂರು ಮಾಡಬೇಕು ಎಂದಿದ್ದಾರೆ.
ಬೆಂಗಳೂರು ಶಿವಮೊಗ್ಗ ನಡುವೆ ವಿಮಾನ ಸಂಚಾರ ಸೇವೆ ಮುಂದುವರೆಯಬೇಕು. ಶಿವಮೊಗ್ಗ ನಗರದಲ್ಲಿ ರಾಜ್ಯ ನೌಕರರ ವಿಮಾ ನಿಗಮದ ಉಪ ಪ್ರಾದೇಶಿಕ ಕಚೇರಿ ತೆರೆಯಬೇಕು. ಸರಕು ಮತ್ತು ಸೇವಾ ತೆರಿಗೆ ಮೇಲ್ಮನವಿಯ ನ್ಯಾಯಮಂಡಳಿ ಸ್ಥಾಪಿಸಬೇಕು. ಶಿವಮೊಗ್ಗದಲ್ಲಿ ಶುದ್ಧ ಕುಡಿಯ ನೀರು ಸರಬರಾಜು ಆಗಬೇಕು. ಮಹಾನಗರ ಪಾಲಿಕೆ ವ್ಯಾಪ್ತಿಯ ದೀಪಗಳ ನಿರ್ವಹಣೆಯನ್ನು ಸರಿಪಡಿಸಬೇಕು. ಸೋಗಾನೆ ವಿಮಾನ ನಿಲ್ದಾಣದಲ್ಲಿ ನೈಟ್ ಲ್ಯಾಂಡಿಂಗ್ ಸೌಲಭ್ಯ ಆದಷ್ಟು ಬೇಗ ಪೂರ್ಣಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
Chamber of Commerce Shivamogga ವಿಜಯ ಸೌಹಾರ್ದ ಕ್ರೆಡಿಟ್ ಸಹಕಾರ ಸಂಘದ 71ನೇ ಶಾಖೆಯನ್ನು ಶಿವಮೊಗ್ಗದಲ್ಲಿ ತೆರೆಯುವ ಮೂಲಕ ರಾಜ್ಯದ ಪ್ರಮುಖ ಕೈಗಾರಿಕಾ ಸಂಸ್ಥೆಯಾದ ನಿರಾಣಿ ಗ್ರೂಪ್ ಶಿವಮೊಗ್ಗದಲ್ಲಿ ಕಾಲಿಟ್ಟಿದೆ. ಶಿವಮೊಗ್ಗದಲ್ಲಿ ವಿದ್ಯುತ್ ಕೃಷಿ ಆಧಾರಿತ ಕೈಗಾರಿಕೆ ಶಿಕ್ಷಣ ಮತ್ತು ಆರೋಗ್ಯ, ಬಯೋ ಫುಲ್, ಎಥೆನಾಲ್ , ಜೈವಿಕ ಪ್ಲಾಸ್ಟಿಕ್ ಉತ್ಪಾದನಾ ಹೀಗೆ ಪರಿಸರ ಸ್ನೇಹಿ ಕೈಗಾರಿಕಾ ಕ್ಷೇತ್ರದಲ್ಲಿ ಬಂಡವಾಳವನ್ನು ಹೂಡುವಂತೆ ನಿರಾಣಿ ಗ್ರೂಪ್‌ಗೆ ಮನವಿ ಮಾಡುತ್ತೇವೆ ಎಂದಿದ್ದಾರೆ.
ಶಿವಮೊಗ್ಗ ಜಿಲ್ಲಾ ಕೈಗಾರಿಕಾ ಬೆಳವಣಿಗೆಗೆ ಅನುಕೂಲ ವಾತಾವರಣ ಮುಂದುವರಿಯಲು ಸರ್ಕಾರದೊಂದಿಗೆ ಸಹಕರಿಸಲು ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘ ಸದಾ ಸಿದ್ಧವಿದೆ ಎಂದು ಸಂಘದ ಅಧ್ಯಕ್ಷ ಬಿ.ಗೋಪಿನಾಥ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Chamber of Commerce Shivamogga ಹೈಕೋರ್ಟ್ ಸಂಚಾರಿ ಪೀಠ ಶಿವಮೊಗ್ಗದಲ್ಲಿ ಸ್ಥಾಪಿಸಲಿ :ಬಿ.ಗೋಪಿನಾಥ್
Date:
